ಕನ್ನಡ ಶಾಸ್ತ್ರೀಯ ಅಧ್ಯಯನ ಸಂಸ್ಥೆ ಸ್ಥಾಪನೆ ಯಾವಾಗ?

proposal-to-setup-central-institute-classical-kannada-gathers-momentum
ಬೆಳಗಾವಿ, ಡಿ.6: 'ಕೇಂದ್ರೀಯ ಕನ್ನಡ ಶಾಸ್ತ್ರೀಯ ಅಧ್ಯಯನ ಸಂಸ್ಥೆ'ಯನ್ನು ಸ್ಥಾಪಿಸುವ ನಿಟ್ಟಿನಲ್ಲಿ ಕರ್ನಾಟಕ ಸರಕಾರ ಕಾರ್ಯೋನ್ಮುಖವಾಗಿದೆ.

ಕನ್ನಡ ಮತ್ತು ಸಂಸ್ಕೃತಿ ಸಚಿವೆ ಉಮಾಶ್ರೀ ಅವರು ಬೆಳಗಾವಿ ಅಧವೇಶನದಲ್ಲಿ ಈ ಬಗ್ಗೆ ಮಾತನಾಡಿದ್ದು ನೆರೆಯ ತಮಿಳುನಾಡಿನಲ್ಲಿ ತಮಿಳು ಭಾಷೆಗೆ ಇಂತಹುದೇ ಕೇಂದ್ರೀಯ ಸಂಸ್ಥೆಯನ್ನು ಸ್ಥಾಪಿಸಲಾಗಿದೆ. ಅದೇ ರೀತಿ ನಮಗೂ Central Institute of Classical Kannada (CICK) ಸ್ಥಾಪನೆಗೆ ಅವಕಾಶ ಮಾಡಿಕೊಡಬೇಕೆಂದು ಕೇಂದ್ರ ಸರಕಾರವನ್ನು ಈಗಾಗಲೇ ಕೋರಿರುವುದಾಗಿ ಸದನಕ್ಕೆ ಮಾಹಿತಿ ನೀಡಿದರು.

ಕೇಂದ್ರವು CICK ಸ್ಥಾಪನೆ ಬಗ್ಗೆ ವಿವರವಾದ ಪ್ರಸ್ತಾವನೆ ಸಲ್ಲಿಸುವಂತೆ ಸೂಚಿಸಿದೆ. ಶೀಘ್ರವೇ ಪ್ರಸ್ತಾವನೆಯನ್ನು ಸಿದ್ಧಗೊಳಿಸಿ, ಕೇಂದ್ರ ಸರಕಾರದ ಅನುಮೋದನೆ ಕೋರುವುದಾಗಿ ಸಚಿವೆ ಉಮಾಶ್ರೀ ತಿಳಿಸಿದರು. ಈ ಸಂಬಂಧ, ಬಿಜೆಪಿಯ ಮೇಲ್ಮನೆ ಸದಸ್ಯ ದೊಡ್ಡ ರಂಗೇಗೌಡ ಅವರು ಕೇಳಿದ್ದ ಪ್ರಶ್ನೆಗೆ ಉತ್ತರಿಸುತ್ತಾ ಉಮಾಶ್ರೀ ಈ ವಿಷಯ ತಿಳಿಸಿದರು.

CIIL ಬಗ್ಗೆ ಅಪಸ್ವರ:
2008ರಲ್ಲಿ ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾಣ ಪ್ರಾಪ್ತಿಯಾದ ನಂತರ ಕನ್ನಡ ಅಭಿವೃದ್ಧಿ ಕಾರ್ಯದಲ್ಲಿ ತೊಡಗಿಸಿಕೊಳ್ಳುವವರ ಜತೆ ಸಂಯೋಜಿಸಲು ಮೈಸೂರಿನಲ್ಲಿರುವ ಭಾರತೀಯ ಭಾಷೆಗಳ ಕೇಂದ್ರೀಯ ಸಂಸ್ಥೆ (CIIL) ನೋಡಲ್ ಏಜೆನ್ಸಿಯಾಗಿ ಕಾರ್ಯನಿರ್ವಹಿಸುತ್ತಿದೆ. ಈ ನಿಟ್ಟಿನಲ್ಲಿ CIIL, Centre for Excellence ಅನ್ನು ಸ್ಥಾಪಿಸಿದೆ. ಆದರೆ CIIL ಬಗ್ಗೆ ಅಪಸ್ವರ ಕೇಳಿಬಂದಿದೆ.

ಕನ್ನಡ ಅಭಿವೃದ್ಧಿ ಕಾರ್ಯದಲ್ಲಿ ವಿನಿಯೋಗಿಸಲು CIILಗೆ 4.90 ಕೋಟಿ ರೂ. ಅನುದಾನ ನೀಡಲಾಗಿದೆಯಾದರೂ ಕಳೆದ 3 ವರ್ಷಗಳಲ್ಲಿ ಕೇವಲ 72 ಲಕ್ಷ ರೂ. ಮಾತ್ರ ಖರ್ಚು ಮಾಡಲಾಗಿದೆ. ಈ ಮಧ್ಯೆ, ಸರಕಾರವು ಶಾಸ್ತ್ರೀಯ ಭಾಷೆಯಾಗಿ ಕನ್ನಡವನ್ನು ಅಭಿವೃದ್ಧಿಪಡಿಸಲು 10 ವಿಶ್ವವಿದ್ಯಾಲಯಗಳಿಗೆ ತಲಾ ಒಂದೊಂದು ಕೋಟಿ ರೂ. ಬಿಡುಗಡೆ ಮಾಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+