ಡಿಕೆಶಿ ವಿರುದ್ಧ ಪ್ರತಿಭಟನೆ; ಬೆಳಗಾವಿಗೆ ಹೊರಟು ನಿಂತ ಕೆಪಿಸಿಸಿ ಅಧ್ಯಕ್ಷ
ಬೆಳಗಾವಿ, ಮಾರ್ಚ್ 28; ಡಿ. ಕೆ. ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ರಮೇಶ್ ಜಾರಕಿಹೊಳಿ ಬೆಂಬಲಿಗರು ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ. ತಮ್ಮ ವಿರುದ್ಧ ಪ್ರತಿಭಟನೆ ನಡೆಯುವಾಗಲೇ ಡಿ. ಕೆ. ಶಿವಕುಮಾರ್ ಬೆಳಗಾವಿಗೆ ಹೊರಟು ನಿಂತಿದ್ದಾರೆ.
ಭಾನುವಾರ ಡಿ. ಕೆ. ಶಿವಕುಮಾರ್ ರಾಜೀನಾಮೆಗೆ ಆಗ್ರಹಿಸಿ ಗೋಕಾಕ್‌ನಲ್ಲಿ ರಮೇಶ್ ಜಾರಕಿಹೊಳಿ ಬೆಂಬಲಿಗರು ಬೃಹತ್ ಪ್ರತಿಭಟನೆ ಮಾಡುತ್ತಿದ್ದಾರೆ. ಸಂಗೊಳ್ಳಿ ರಾಯಣ್ಣ ವೃತ್ತದಿಂದ ಬಸವೇಶ್ವರ ವೃತ್ತದ ಕಡೆಗೆ ಸಾಗುತ್ತಿರುವ ಮೆರವಣಿಗೆ ಸಾಗುತ್ತಿದ್ದು, ಡಿಕೆಶಿ ಅಣಕು ಶವದ ಮೆರವಣಿಗೆ ಮಾಡಿ ಆಕ್ರೋಶ ಹೊರಹಾಕುತ್ತಿದ್ದಾರೆ.
ರಮೇಶ್ ಜಾರಕಿಹೊಳಿ ಬೆಂಬಲಿಗರಿಂದ ಗೋಕಾಕನಲ್ಲಿ ಬೃಹತ್ ಪ್ರತಿಭಟನೆ. ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿ. ಕೆ. ಶಿವಕುಮಾರ್ ರಾಜೀನಾಮೆ ನೀಡಬೇಕು ಎಂದು ಆಗ್ರಹ. ಸಂಗೊಳ್ಳಿ ರಾಯಣ್ಣ ವೃತ್ತದಿಂದ ಬಸವೇಶ್ವರ ವೃತ್ತದ ಕಡೆಗೆ ಸಾಗುತ್ತಿರುವ ಮೆರವಣಿಗೆ. ಡಿಕೆಶಿ ಅಣಕು ಶವದ ಮೆರವಣಿಗೆ ಮಾಡಿ ಆಕ್ರೋಶ.#Gokak @DKShivakumar #RameshJarkiholi pic.twitter.com/mjQjJhlFAt
— oneindiakannada (@OneindiaKannada) March 28, 2021
ಡಿ. ಕೆ. ಶಿವಕುಮಾರ್ ಭಾವಚಿತ್ರಕ್ಕೆ ಚಪ್ಪಲಿಯಲ್ಲಿ ಹೊಡೆಯುತ್ತಿದ್ದಾರೆ. ರಮೇಶ್ ಜಾರಕಿಹೊಳಿ ವಿರುದ್ಧ ರಾಜಕೀಯ ಷಡ್ಯಂತ್ರ ಮಾಡುತ್ತಿರುವ ಡಿ. ಕೆ. ಶಿವಕುಮಾರ್ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸುತ್ತಿದ್ದಾರೆ.

'ಡಿಕೆಶಿ ನಾಯಕನಲ್ಲ, ಕಳ್ಳನಾಯಕ' ಎಂಬ ಬ್ಯಾನರ್ ಪ್ರದರ್ಶನ ಮಾಡುತ್ತಿದ್ದಾರೆ. ಡಿಕೆಶಿ ರಾಜಕೀಯದಲ್ಲಿರಲು ಅನರ್ಹ, ಹುಡುಗಿಯನ್ನು ಇಟ್ಟುಕೊಂಡು ಡಿಕೆಶಿ ರಾಜಕೀಯ ಮಾಡುತ್ತಿದ್ದಾರೆ ಎಂದು ಘೋಷಣೆಗಳನ್ನು ಕೂಗುತ್ತಿದ್ದಾರೆ.
ಬೆಳಗಾವಿಗೆ ಡಿಕೆಶಿ; ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಬೆಂಗಳೂರು ವಿಮಾನ ನಿಲ್ದಾಣದಿಂದ ಬೆಳಗಾವಿಗೆ ಹೊರಟಿದ್ದಾರೆ. ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಅವರಿಗೆ ಮುತ್ತಿಗೆ ಹಾಕಲು ರಮೇಶ್ ಜಾರಕಿಹೊಳಿ ಬೆಂಬಲಿಗರು ತಯಾರಿ ನಡೆಸಿದ್ದಾರೆ.











Click it and Unblock the Notifications