ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಡಿಕೆಶಿ ವಿರುದ್ಧ ಪ್ರತಿಭಟನೆ; ಬೆಳಗಾವಿಗೆ ಹೊರಟು ನಿಂತ ಕೆಪಿಸಿಸಿ ಅಧ್ಯಕ್ಷ

By ಬೆಳಗಾವಿ ಪ್ರತಿನಿಧಿ
|
Google Oneindia Kannada News

ಬೆಳಗಾವಿ, ಮಾರ್ಚ್ 28; ಡಿ. ಕೆ. ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ರಮೇಶ್ ಜಾರಕಿಹೊಳಿ ಬೆಂಬಲಿಗರು ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ. ತಮ್ಮ ವಿರುದ್ಧ ಪ್ರತಿಭಟನೆ ನಡೆಯುವಾಗಲೇ ಡಿ. ಕೆ. ಶಿವಕುಮಾರ್ ಬೆಳಗಾವಿಗೆ ಹೊರಟು ನಿಂತಿದ್ದಾರೆ.

ಭಾನುವಾರ ಡಿ. ಕೆ. ಶಿವಕುಮಾರ್ ರಾಜೀನಾಮೆಗೆ ಆಗ್ರಹಿಸಿ ಗೋಕಾಕ್‌ನಲ್ಲಿ ರಮೇಶ್ ಜಾರಕಿಹೊಳಿ ಬೆಂಬಲಿಗರು ಬೃಹತ್ ಪ್ರತಿಭಟನೆ ಮಾಡುತ್ತಿದ್ದಾರೆ. ಸಂಗೊಳ್ಳಿ ರಾಯಣ್ಣ ವೃತ್ತದಿಂದ ಬಸವೇಶ್ವರ ವೃತ್ತದ ಕಡೆಗೆ ಸಾಗುತ್ತಿರುವ ಮೆರವಣಿಗೆ ಸಾಗುತ್ತಿದ್ದು, ಡಿಕೆಶಿ ಅಣಕು ಶವದ ಮೆರವಣಿಗೆ ಮಾಡಿ ಆಕ್ರೋಶ ಹೊರಹಾಕುತ್ತಿದ್ದಾರೆ.

ಡಿ. ಕೆ. ಶಿವಕುಮಾರ್ ಭಾವಚಿತ್ರಕ್ಕೆ ಚಪ್ಪಲಿಯಲ್ಲಿ ಹೊಡೆಯುತ್ತಿದ್ದಾರೆ. ರಮೇಶ್ ಜಾರಕಿಹೊಳಿ‌ ವಿರುದ್ಧ ರಾಜಕೀಯ ಷಡ್ಯಂತ್ರ ಮಾಡುತ್ತಿರುವ ಡಿ. ಕೆ. ಶಿವಕುಮಾರ್ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸುತ್ತಿದ್ದಾರೆ.

ಮಾಜಿ ಸಚಿವ ರಮೇಶ್ ಜಾರಕಿಹೊಳಿ ನಿವಾಸದೆದುರು ಕಾಂಗ್ರೆಸ್ ಪ್ರತಿಭಟನೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ನಿವಾಸದೆದುರು ಕಾಂಗ್ರೆಸ್ ಪ್ರತಿಭಟನೆ

Protest Against KPCC President DK Shivakumar At Gokak

'ಡಿಕೆಶಿ ನಾಯಕನಲ್ಲ, ಕಳ್ಳನಾಯಕ' ಎಂಬ ಬ್ಯಾನರ್ ಪ್ರದರ್ಶನ ಮಾಡುತ್ತಿದ್ದಾರೆ. ಡಿಕೆಶಿ ರಾಜಕೀಯದಲ್ಲಿರಲು ಅನರ್ಹ, ಹುಡುಗಿಯನ್ನು ಇಟ್ಟುಕೊಂಡು ಡಿಕೆಶಿ ರಾಜಕೀಯ ಮಾಡುತ್ತಿದ್ದಾರೆ ಎಂದು ಘೋಷಣೆಗಳನ್ನು ಕೂಗುತ್ತಿದ್ದಾರೆ.

ನನ್ನ ಹೆಸರು ತಾನೇ ಪ್ರಸ್ತಾಪ ಮಾಡಲಿ ಬಿಡಿ; ಡಿಕೆ ಶಿವಕುಮಾರ್ನನ್ನ ಹೆಸರು ತಾನೇ ಪ್ರಸ್ತಾಪ ಮಾಡಲಿ ಬಿಡಿ; ಡಿಕೆ ಶಿವಕುಮಾರ್

ಬೆಳಗಾವಿಗೆ ಡಿಕೆಶಿ; ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಬೆಂಗಳೂರು ವಿಮಾನ ನಿಲ್ದಾಣದಿಂದ ಬೆಳಗಾವಿಗೆ ಹೊರಟಿದ್ದಾರೆ. ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಅವರಿಗೆ ಮುತ್ತಿಗೆ ಹಾಕಲು ರಮೇಶ್ ಜಾರಕಿಹೊಳಿ ಬೆಂಬಲಿಗರು ತಯಾರಿ ನಡೆಸಿದ್ದಾರೆ.

English summary
Protest by Ramesh Jarakiholi supporters against KPCC president D. K. Shivakumar at Gokak, Belagavi. Demanding his resignation after CD issue.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X