ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಡಿಕೆಶಿ ಬಂಧನ; ದ್ವೇಷದ ರಾಜಕಾರಣ ಎಂದು ಬೆಳಗಾವಿಯಲ್ಲಿ ಪ್ರತಿಭಟನೆ

By ಬೆಳಗಾವಿ ಪ್ರತಿನಿಧಿ
|
Google Oneindia Kannada News

ಬೆಳಗಾವಿ, ಸೆಪ್ಟೆಂಬರ್ 4: ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಬಂಧನದ ಹಿನ್ನೆಲೆ ಬೆಳಗಾವಿಯಲ್ಲಿ ಆಕ್ರೋಶ ಭುಗಿಲೆದ್ದಿದೆ. ಡಿಕೆಶಿ ಬಂಧನಕ್ಕೆ ಬಿಜೆಪಿ ಸರ್ಕಾರದ ದ್ವೇಷ ರಾಜಕಾರಣವೇ ಕಾರಣ ಎಂದು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಡಿಕೆಶಿ ಬೆಂಬಲಿಗರು ಪ್ರತಿಭಟನೆ ನಡೆಸಿದ್ದಾರೆ.

ಡಿಕೆಶಿ ಬಂಧನವಾಗುತ್ತಿದ್ದಂತೆಯೇ ಮಂಗಳವಾರ ರಾತ್ರಿ ಹಿರೇಬಾಗೇವಾಡಿ ಟೋಲ್ ನಾಕಾದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹೆದ್ದಾರಿ ತಡೆದು ಪ್ರತಿಭಟನೆ ಕೈಗೊಂಡಿದ್ದರು. ಕಾಂಗ್ರೆಸ್ ಕಾರ್ಯಕರ್ತ ಅಡಿವೇಶ ಇಟಗಿ ನೇತೃತ್ವದಲ್ಲಿ ಪ್ರತಿಭಟನೆ ಕೈಗೊಂಡಿದ್ದು, ಇಡಿ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದರು.

DK Shivakumar Arrest LIVE Updates: ಡಿ.ಕೆ.ಶಿವಕುಮಾರ್ ಇಂದು ಕೋರ್ಟ್‌ಗೆ ಹಾಜರುDK Shivakumar Arrest LIVE Updates: ಡಿ.ಕೆ.ಶಿವಕುಮಾರ್ ಇಂದು ಕೋರ್ಟ್‌ಗೆ ಹಾಜರು

Protest Against The Arrest Of DK Shivakumar In Belagavi

ಇಂದು ಬೆಳಿಗ್ಗೆ ಕೂಡ ಬೆಳಗಾವಿಯ ಕರಡಿಗುದ್ದಿ ಗ್ರಾಮದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ರಾಜ್ಯ ಹೆದ್ದಾರಿ ಮೇಲೆ ಟೈರ್ ಗೆ ಬೆಂಕಿ ಹಚ್ಚಿ ರಸ್ತೆ ತಡೆ ನಡೆಸಿದರು. ತಾಲೂಕು ಪಂಚಾಯತ್ ಅಧ್ಯಕ್ಷ ಶಂಕರಗೌಡ ಪಾಟೀಲ ನೇತೃತ್ವದಲ್ಲಿ ಡಿಕೆಶಿ ಬೆಂಬಲಿಗರು ಪ್ರತಿಭಟನೆ ನಡೆಸಿದರು. ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ದ್ವೇಷದ ರಾಜಕಾರಣ ಮಾಡಿ ಡಿ.ಕೆ.ಶಿವಕುಮಾರ್ ಅವರನ್ನು ಬಂಧಿಸಿದ್ದಾರೆ ಎಂದು ಆರೋಪಿಸಿದರು.

English summary
Outrage has erupted in the wake of the arrest of former minister DK Shivakumar in Belagavi. Congress activists and supporters of Dk Shivakumar have protested against the BJP government.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X