ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಳಗಾವಿ ಗಡಿಯಲ್ಲಿ ಭುಗಿಲೆದ್ದ ಪ್ರತಿಭಟನೆ: ಮಹಾರಾಷ್ಟ್ರ ವಾಹನಗಳಿಗೆ ಮಸಿ, ಕಲ್ಲು ತೂರಾಟ

|
Google Oneindia Kannada News

ಬೆಳಗಾವಿ, ಡಿಸೆಂಬರ್‌ 06: ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದ ಮತ್ತೆ ಭುಗಿಲೆದ್ದಿದೆ. ಮಹಾರಾಷ್ಟ್ರದ ತಂಟೆಗೆ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಳಗಾವಿ ಜಿಲ್ಲೆಯ ಹಿರೇಬಾಗೇವಾಡಿ ಬಳಿ ಮಹಾರಾಷ್ಟ್ರದ ವಾಹನಗಳಿಗೆ ಮಸಿ ಬಳಿದು ಕೋಪವನ್ನು ಹೊರಹಾಕಿದ್ದಾರೆ.

ಮುಖ್ಯಮಂತ್ರಿ ಬೊಮ್ಮಾಯಿ ಎಚ್ಚರಿಕೆ ಬಳಿಕ ಬೆಳಗಾವಿ ಭೇಟಿ ಮುಂದೂಡಿದ ಮಹಾರಾಷ್ಟ್ರ ಸಚಿವರುಮುಖ್ಯಮಂತ್ರಿ ಬೊಮ್ಮಾಯಿ ಎಚ್ಚರಿಕೆ ಬಳಿಕ ಬೆಳಗಾವಿ ಭೇಟಿ ಮುಂದೂಡಿದ ಮಹಾರಾಷ್ಟ್ರ ಸಚಿವರು

ಮಹಾರಾಷ್ಟ್ರದ ನಂಬರ್‌ ಪ್ಲೇಟ್‌ ಇರುವ ವಾಹನಗಳ ಮೇಲೆ ದಾಳಿ ನಡೆಸಿ ಗಾಜುಗಳನ್ನು ಪುಡಿಪುಡಿ ಮಾಡಿದ್ದಾರೆ. ಸ್ಥಳದಲ್ಲಿದ್ದ ಪೊಲೀಸರೊಂದಿಗೆ ವಾಗ್ದಾದ ನಡೆಸಿದ್ದಾರೆ. ಪ್ರಕ್ಷಬ್ದ ಸನ್ನಿವೇಶವನ್ನು ತಿಳಿಗೊಳಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ.

Protest erupted at Belgaum border stones pelted at Maharashtra vehicles

ದಶಕಗಳಿಂದಲೂ ಮಹಾರಾಷ್ಟ್ರ ಗಡಿ ತಂಟೆಯನ್ನು ತೆಗೆಯುತ್ತಿದೆ. ವಿವಾದವು ನ್ಯಾಯಾಲಯದಲ್ಲಿದ್ದರೂ, ಮಹಾರಾಷ್ಟ್ರ ಸಚಿವರು ಬೆಳಗಾವಿಗೆ ಭೇಟಿ ನೀಡಿ ಶಾಂತಿಯನ್ನು ಕದಡಲು ಯತ್ನಿಸುತ್ತಿದ್ದಾರೆ ಎಂದು ಕರವೇ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

'ಜೀವ ಬೀಡುತ್ತೇವೆ. ಆದರೆ, ಬೆಳಗಾವಿಯನ್ನು ಬಿಡುವುದಿಲ್ಲ' ಎಂಬ ಘೋಷಣೆಗಳನ್ನು ಕೂಗಿರುವ ಕರವೇ ಕಾರ್ಯಕರ್ತರು ಮಹಾರಾಷ್ಟ್ರ ಸರ್ಕಾರದ ವಿರುದ್ಧ ದಿಕ್ಕಾರ ಕೂಗಿದ್ದಾರೆ.

ಇದೇ ವೇಳೆ, ಬೆಳಗಾವಿಗೆ ಭೇಟಿ ನೀಡಬೇಕಿದ್ದ ಮಹಾರಾಷ್ಟ್ರ ಸಚಿವರು ತಮ್ಮ ಭೇಟಿಯನ್ನು ಮುಂದೂಡಿದ್ದಾರೆ.

Protest erupted at Belgaum border stones pelted at Maharashtra vehicles

ಬೆಳಗಾವಿ ಚಿಕ್ಕೋಡಿ ಸೇರಿದಂತೆ ಮಹಾರಾಷ್ಟ್ರ ಹಾಗೂ ಕರ್ನಾಟಕದ ಗಡಿ ಭಾಗಗಳಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸ್‌ ಬಿಗಿಬಂದೋಬಸ್ತ್‌ ಅನ್ನು ಏರ್ಪಡಿಸಲಾಗಿದೆ. ಬೆಳಗಾವಿ ನಗರದಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ.

ಮಹಾರಾಷ್ಟ್ರದ ಗಡಿ ತಂಟೆಗೆ ಆಕ್ರೋಶ ವ್ಯಕ್ತಪಡಿಸಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, 'ಬೆಳಗಾವಿ ವಿವಾದವು ನ್ಯಾಯಾಲಯದಲ್ಲಿದೆ. ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಅವರು ನ್ಯಾಯಾಲಯದಲ್ಲಿಯೇ ಪ್ರಕರಣವನ್ನು ಬಗೆಹರಿಸಿಕೊಳ್ಳಬೇಕು' ಎಂದು ಹೇಳಿದ್ದರು.

'ವಿವಾದ ಸಂಘರ್ಷವಾಗಿ ತಿರುಗಿದ ಈ ಸಂದರ್ಭದಲ್ಲಿ ಮಹಾರಾಷ್ಟ್ರ ಸಚಿವರು ಬೆಳಗಾವಿಗೆ ಭೇಟಿ ನೀಡುವುದು ಉಚಿತವಲ್ಲ. ಅವರ ಭೇಟಿಯಿಂದ ಬೆಳಗಾವಿಯ ಶಾಂತಿ ಸುವ್ಯವಸ್ಥೆಗೆ ಧಕ್ಕೆ ಉಂಟಾಗುತ್ತದೆ. ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ' ಎಂದು ತಿಳಿಸಿದ್ದರು.

English summary
The Karnataka Maharashtra border dispute has flared up again. Karnataka Defense Forum activists have expressed their outrage at Thante in Maharashtra. They vented their anger by smearing soot on Maharashtra's vehicles near Hirebagewadi in Belgaum district
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X