ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಹಾರಾಷ್ಟ್ರ ಸಚಿವರ ಭೇಟಿಯನ್ನು ವಿರೋಧಿಸಿ ಬೆಳಗಾವಿಯಲ್ಲಿ ಪ್ರತಿಭಟನೆ

|
Google Oneindia Kannada News

ಬೆಳಗಾವಿ ಡಿಸೆಂಬರ್ 5: ಮಹಾರಾಷ್ಟ್ರ ಸಚಿವರ ಭೇಟಿಯನ್ನು ವಿರೋಧಿಸಿ ಬೆಳಗಾವಿಯಲ್ಲಿ ಇಂದು ಕೂಡ ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಬೆಳಗಾವಿಯ ಗೋಗ್ಟೆ ಕಾಲೇಜಿನ ಕಾರ್ಯಕ್ರಮವೊಂದರಲ್ಲಿ ಕನ್ನಡ ಬಾವುಟ ಹಿಡಿದು ಸಂಭ್ರಮಿಸಿದ ದ್ವಿತೀಯ ಪಿಯುಸಿ ವಿದ್ಯಾರ್ಥಿಗೆ ಮಹಾರಾಷ್ಟ್ರ ಬೆಂಬಲಿಸುವ ಸಹಪಾಠಿಗಳು ಥಳಿಸಿದ್ದಾರೆ. ಈ ಕುರಿತು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಈ ಘಟನೆಯನ್ನು ಖಂಡಿಸಿ ಕರವೇ ಕಾರ್ಯಕರ್ತರು ನಿನ್ನೆ ಪ್ರತಿಭಟನೆ ನಡೆಸಿದ್ದರು. ಇಂದೂ ಕೂಡ ಕನ್ನಡ ಪರ ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿದ ವಿದ್ಯಾರ್ಥಿಗಳ ವಿರುದ್ಧ ಪೋಲೀಸರ ನಿಷ್ಕ್ರಿಯತೆಯ ವಿರುದ್ಧ ಪ್ರತಿಭಟನೆ ನಡೆಸಲಾಯಿತು.

Breaking: 'ಮಹಾ' ಸಚಿವರು ಬೆಳಗಾವಿ ಬರದಂತೆ ಒತ್ತಾಯಿಸಿ ಸೋಮವಾರ ವಾಟಾಳ್ ನಾಗರಾಜ್ ಪ್ರತಿಭಟನೆBreaking: 'ಮಹಾ' ಸಚಿವರು ಬೆಳಗಾವಿ ಬರದಂತೆ ಒತ್ತಾಯಿಸಿ ಸೋಮವಾರ ವಾಟಾಳ್ ನಾಗರಾಜ್ ಪ್ರತಿಭಟನೆ

ಘಟನೆಯ ವಿಡಿಯೋ ವೈರಲ್ ಆಗಿದ್ದು ಈ ವಿಡಿಯೋದಲ್ಲಿ ಬೆಳಗಾವಿಯ ಗೋಗ್ಟೆ ಕಾಲೇಜಿನ ಫೆಸ್ಟ್ ನಡೆಯುತ್ತಿರುವ ದ್ವಿತೀಯ ಪಿಯುಸಿ ವಿದ್ಯಾರ್ಥಿಯೊಬ್ಬ ಕನ್ನಡ ಬಾವುಟ ಹಿಡಿದು ಸಂಭ್ರಮಿಸಿದ್ದಾನೆ. ಈ ವೇಳೆ ಮಹಾರಾಷ್ಟ್ರ ಬೆಂಬಲಿಸುವು ವಿದ್ಯಾರ್ಥಿಗಳು ಥಳಿಸಿದ್ದಾರೆ.

ಹೀಗಾಗಿ ಈ ಘಟನೆಯನ್ನು ಖಂಡಿಸಿ ನಿನ್ನೆ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಟೈರ್‌ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದ್ದರು. ಬೆಳಗಾವಿ-ಗೋವಾ ಮುಖ್ಯ ರಸ್ತೆಯನ್ನು ಬಂದ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Protest in Belgaum against Maharashtra Ministers visit

ಕರ್ನಾಟಕದ ಕೆಲವು ಹಳ್ಳಿಗಳು ಸೇರಿದ ಕೆಲ ಜಿಲ್ಲೆಗಳು ಮಹಾರಾಷ್ಟ್ರಕ್ಕೆ ಸೇರಬೇಕೆಂದು ಮಹಾರಾಷ್ಟ್ರ ಸರ್ಕಾರ ವಾದಿಸುತ್ತಿದೆ. ಮಹಾರಾಷ್ಟ್ರದ ಕೆಲವು ಹಳ್ಳಿಗಳು ಮತ್ತು ಜಿಲ್ಲೆಗಳು ಕರ್ನಾಟಕ್ಕೆ ಸೇರಬೇಕೆಂದು ಕರ್ನಾಟಕ ಸರ್ಕಾರ ವಾದಿಸುತ್ತಿದೆ. ಈ ಕುರಿತು ನೇಮಿಸಲಾಗಿದ್ದ ಮಹಾಜನ್ ಆಯೋಗವು "ಕರ್ನಾಟಕದಲ್ಲಿನ ಕೆಲವು ತಾಲ್ಲೂಕುಗಳು ಮಹಾರಾಷ್ಟ್ರಕ್ಕೆ ಹೋಗಲಿ ಮತ್ತು ಮಹಾರಾಷ್ಟ್ರದ ಕೆಲ ತಾಲ್ಲೂಕುಗಳು ಕರ್ನಾಟಕಕ್ಕೆ ಬರಲಿ" ಎಂದು ವರದಿ ಸಲ್ಲಿಸಿತ್ತು. ಇದನ್ನು ಒಪ್ಪದ ಮಹಾರಾಷ್ಟ್ರ ಸರ್ಕಾರ 2004ರಲ್ಲಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದೆ.

English summary
Pro Kannada organisations protested today too at Belagavi against visit of Maharashtra ministers. Against police inaction against students who attacked a pro Kannada student at Gogte college.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X