ಮಳೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಿಎಸ್ ಐ ಸಾವು
ಬೆಳಗಾವಿ, ಆಗಸ್ಟ್ 6: ಜಿಲ್ಲೆಯಲ್ಲಿ ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿ ಜಲಾವೃತವಾಗಿದ್ದು, ಅಲ್ಲಿ ವಾಹನ ಸಂಚಾರ ನಿರ್ವಹಿಸುತ್ತಿದ್ದ ಪಿಎಸ್ಐ ಗೆ ಕಾರು ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.
ಬೆಳಗಾವಿ ಜಿಲ್ಲೆ ಕಿತ್ತೂರು ತಾಲೂಕಿನ ಎಂ.ಕೆ ಹುಬ್ಬಳ್ಳಿ ಬಳಿ ಈ ದುರ್ಘಟನೆ ಸಂಭವಿಸಿದೆ.

ಮಲಪ್ರಭಾ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿದ್ದು, ಆ ನೀರು ರಾಷ್ಟ್ರೀಯ ಹೆದ್ದಾರಿ ಮೇಲೂ ಹರಿದುಬಂದಿತ್ತು. ಆ ವೇಳೆ ಸ್ಥಳದಲ್ಲಿ ವಾಹನ ಸಂಚಾರದ ನಿಗಾ ವಹಿಸಿದ್ದರು ಪಿಎಸ್ ಐ ಈರಣ್ಣ ಲಟ್ಟಿ. ಇದೇ ಸಮಯದಲ್ಲಿ ಕಾರೊಂದು ರಭಸವಾಗಿ ಬಂದು ಡಿಕ್ಕಿ ಹೊಡೆದಿತ್ತು. ಸ್ಥಳದಲ್ಲಿಯೇ ಅವರು ಸಾವನ್ನಪ್ಪಿದ್ದಾರೆ.
ಈರಣ್ಣಾ ಲಟ್ಟಿ ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪಿಎಸ್ಐ ಆಗಿದ್ದರು.












Click it and Unblock the Notifications