ಬೆಳಗಾವಿ ಸವದತ್ತಿ ಯಲ್ಲಮ್ಮ ದೇವಾಲಯಕ್ಕೆ ರೈಲು ಸಂಪರ್ಕ?
ಬೆಳಗಾವಿ, ಜೂನ್ 20: ಉತ್ತರ ಕರ್ನಾಟಕದ ಅತ್ಯಂತ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಸವದತ್ತಿ ಯಲ್ಲಮ್ಮ ದೇವಾಲಯ. ಬೆಳಗಾವಿ ಜಿಲ್ಲೆಯಲ್ಲಿರುವ ಈ ದೇವಾಲಯಕ್ಕೆ ಗಣ್ಯರು ಸೇರಿದಂತೆ ಪ್ರತಿ ವರ್ಷ ಕೋಟ್ಯಾಂತರ ಭಕ್ತರು ಭೇಟಿ ನೀಡುತ್ತಾರೆ.
ಲೋಕಸಭೆ ಚುನಾವಣೆ 2024ರಲ್ಲಿ ಜಯಗಳಿಸಿದ ಬೆಳಗಾವಿಯ ಸಂಸದ, ಬಿಜೆಪಿ ನಾಯಕ ಜಗದೀಶ್ ಶೆಟ್ಟರ್ ಶ್ರೀ ಕ್ಷೇತ್ರ ಸವದತ್ತಿ ಯಲ್ಲಮ್ಮ ದೇವಾಲಯಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿ ನಾಡಿನ ಒಳಿತಿಗಾಗಿ ಪ್ರಾರ್ಥಿಸಿದರು. ಈ ಸಂದರ್ಭದಲ್ಲಿ ಶಾಸಕ ಸಿ. ಸಿ. ಪಾಟೀಲ್, ವಿರೂಪಾಕ್ಷ ಮಾಮನಿ, ರತ್ನ ಮಾಮನಿ, ಸೌರಬ್ ಚೋಪ್ರಾ, ಬಸಯ್ಯ ಅಜ್ಜ, ರಮೇಶ ಗೋಮಾಡಿ ಸೇರಿದಂತೆ ಹಲವಾರು ಮುಖಂಡರು ಉಪಸ್ಥಿತರಿದ್ದರು.

ನೂತನ ಸಂಸದರ ಜೊತೆ ದೇವಾಲಯದ ಆಡಳಿತ ಮಂಡಳಿ ಸಭೆಯನ್ನು ನಡೆಸಿತು. ದೇವಾಲಯಕ್ಕೆ ಅಗತ್ಯವಿರುವ ಮೂಲ ಸೌಲಭ್ಯಗಳನ್ನು ಒದಗಿಸಲು ಅನುದಾನವನ್ನು ನೀಡಬೇಕು. ಹಿಂದಿನ ಸಂಸದರು ಕ್ಷೇತ್ರಕ್ಕೆ ಅನುದಾನವನ್ನು ಒದಗಿಸಿರುವ ಕುರಿತು ಮಾಹಿತಿಯನ್ನು ನೀಡಲಾಯಿತು.
ದೇವಾಲಯಕ್ಕೆ ರೈಲು ಸಂಪರ್ಕ: ನೂತನ ಸಂಸದ ಜಗದೀಶ್ ಶೆಟ್ಟರ್ ಭಕ್ತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಶ್ರೀ ಕ್ಷೇತ್ರ ಸವದತ್ತಿ ಯಲ್ಲಮ್ಮ ದೇವಾಲಯದಲ್ಲಿ ಮೂಲ ಸೌಕರ್ಯ ಒದಗಿಸಲು ಪೂರಕವಾಗಿ ಅನುದಾನ ಒದಗಿಸಲಾಗುತ್ತದೆ. ದೇವಾಲಯಕ್ಕೆ ಆಗಮಿಸುವ ಭಕ್ತರಿಗೆ ಸಹಾಯಕವಾಗಲು ದೇವಾಲಯಕ್ಕೆ ರೈಲು ಸಂಪರ್ಕ ಕಲ್ಪಿಸಲು ಪ್ರಯತ್ನ ನಡೆಸಲಾಗುತ್ತದೆ ಎಂದು ಭರವಸೆ ನೀಡಿದರು.
ತಿರುಪತಿ, ಶಿರಡಿ ಮಾದರಿಯಲ್ಲಿ ಶ್ರೀ ಕ್ಷೇತ್ರ ಸವದತ್ತಿ ಯಲ್ಲಮ್ಮ ದೇವಾಲಯ ಅಭಿವೃದ್ಧಿಯಾಗಬೇಕಿದೆ. ಧಾರ್ಮಿಕ ಮತ್ತು ಪ್ರವಾಸಿ ತಾಣವಾಗಿ ಕ್ಷೇತ್ರವನ್ನು ಅಭವೃದ್ಧಿ ಮಾಡಲು ಅಗತ್ಯ ಸಹಕಾರ ನೀಡಬೇಕು ಎಂದು ದೇವಾಲಯದ ಆಡಳಿತ ಮಂಡಳಿ ಸಂಸದರಿಗೆ ಮನವಿ ಸಲ್ಲಿಕೆ ಮಾಡಿತು.
ಯಾವ-ಯಾವ ಅನುದಾನವನ್ನು ಬಳಕೆ ಮಾಡಬೇಕು ಎಂದು ಈಗಾಗಲೇ ಸಭೆ ನಡೆಸಿ ಮಾಹಿತಿ ಸಂಗ್ರಹ ಮಾಡಲಾಗುತ್ತಿದೆ. ದೇವಾಲಯದ ಆಡಳಿತ ಮಂಡಳಿ ಅಗತ್ಯವಿರುವ ಕಾಮಗಾರಿಗಳ ಪಟ್ಟಿಯನ್ನು ನೀಡಿದರೆ ಅನುದಾನ ಒದಗಿಸಲು ಪ್ರಯತ್ನ ನಡೆಸಲಾಗುತ್ತದೆ ಎಂದು ಜಗದೀಶ್ ಶೆಟ್ಟರ್ ಹೇಳಿದರು.
ಈ ವರ್ಷದ ಜನವರಿಯಲ್ಲಿ ಕರ್ನಾಟಕದ ಸಾರಿಗೆ ಹಾಗೂ ಮುಜರಾಯಿ ಇಲಾಖೆಯ ಸಚಿವರಾದ ರಾಮಲಿಂಗಾ ರೆಡ್ಡಿ ಶ್ರೀ ಕ್ಷೇತ್ರ ಸವದತ್ತಿ ಯಲ್ಲಮ್ಮ ದೇವಾಲಯಕ್ಕೆ ಭೇಟಿ ನೀಡಿದ್ದರು. "ಪ್ರತಿವರ್ಷ ಕೋಟ್ಯಾಂತರ ಜನರು ಭೇಟಿ ನೀಡುವ ಸವದತ್ತಿ ಯಲ್ಲಮ್ಮ ದೇವಾಲಯ ಹಾಗೂ ಯಲ್ಲಮ್ಮ ಗುಡ್ಡದ ಸಮಗ್ರ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್ ರೂಪಿಸಲಾಗುವುದು" ಎಂದು ತಿಳಿಸಿದ್ದರು.
ಸವದತ್ತಿ ಯಲ್ಲಮ್ಮ ದೇವಾಲಯದಲ್ಲಿ ದೇವಿ ದರ್ಶನ ಪಡೆದು ಅಧಿಕಾರಿಗಳ ಸಭೆಯನ್ನು ನಡೆಸಿದ್ದ ಸಚಿವರು, "ಪ್ರಸಿದ್ಧ ಧಾರ್ಮಿಕ ಸ್ಥಳವಾಗಿರುವ ಸವದತ್ತಿ ಯಲ್ಲಮ್ಮ ದೇವಾಲಯಕ್ಕೆ ಕೋಟ್ಯಾಂತರ ಭಕ್ತರು ಭೇಟಿ ನೀಡುತ್ತಾರೆ. ಜಾತ್ರೆ ಸಂದರ್ಭದಲ್ಲಿ ಸಮರ್ಪಕ ಪಾರ್ಕಿಂಗ್ ವ್ಯವಸ್ಥೆ ಒದಗಿಸುವುದರ ಜತೆಗೆ ಲಕ್ಷಾಂತರ ಜನರಿಗೆ ಸುಗಮ ದರ್ಶನಕ್ಕೆ ಅನುಕೂಲವಾಗುವಂತೆ ಮಾಸ್ಟರ್ ಪ್ಲಾನ್ ರೂಪಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ" ಎಂದು ಹೇಳಿದ್ದರು.
"ದೇವಾಲಯ ಪ್ರತಿವರ್ಷ ಅಂದಾಜು ರೂ. 20 ಕೋಟಿ ಆದಾಯ ಹೊಂದಿದೆ. ಈ ಆದಾಯದಲ್ಲಿ ದೇವಾಲಯ ನಿರ್ವಹಣೆ ಬಳಿಕ ಉಳಿಯುವ ಹಣವನ್ನು ಮಾಸ್ಟರ್ ಪ್ಲಾನ್ ಅನುಷ್ಠಾನಕ್ಕೆ ಬಳಸಬಹುದಾಗಿದೆ. ಇದಲ್ಲದೇ ಸರಕಾರದಿಂದಲೂ ಹೆಚ್ಚಿನ ಅನುದಾನ ಬಿಡುಗಡೆ ಮಾಡಬಹುದು" ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದರು.
"ಪ್ರವಾಸೋದ್ಯಮ ಇಲಾಖೆಯ ವತಿಯಿಂದಲೂ ಪ್ರತ್ಯೇಕ ಯೋಜನೆಯನ್ನು ಕೂಡ ರೂಪಿಸುವ ಮೂಲಕ ಒಟ್ಟಾರೆ ಸವದತ್ತಿ ಯಲ್ಲಮ್ಮ ಕ್ಷೇತ್ರದ ಅಭಿವೃದ್ಧಿಗೆ ಕಾಲಮಿತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು" ಎಂದು ಸಚಿವರು ಭರವಸೆ ನೀಡಿದ್ದರು.
ಸಭೆಯಲ್ಲಿ ಮಾತನಾಡಿದ್ದ ಸವದತ್ತಿ ಶಾಸಕ ವಿಶ್ವಾಸ್ ವೈದ್ಯ, "ಯಲ್ಲಮ್ಮ ದೇವಿ ದೇವಾಲಯದ ಒಳಹೋಗಲು ಒಂದು ದ್ವಾರ ಮಾತ್ರ ತೆರೆಯಲಾಗಿದೆ. ಆದರೆ, ಗುಡ್ಡಕ್ಕೆ ಬರುವ ಭಕ್ತರ ಸಂಖ್ಯೆ ಹೆಚ್ಚುತ್ತಿರುವುದರಿಂದ ನಾಲ್ಕೂ ದ್ವಾರಗಳನ್ನು ತೆರೆದು ಅನುಕೂಲ ಕಲ್ಪಿಸಬೇಕು" ಎಂದು ಮನವಿ ಮಾಡಿದ್ದರು.
-
2000 ರೈಲು ನಿಲ್ದಾಣಗಳಲ್ಲಿ ಸ್ಥಳೀಯ ಕಲೆಯ ಸೊಬಗು: 1.32 ಲಕ್ಷ ಕುಶಲಕರ್ಮಿಗಳಿಗೆ ಮಾರುಕಟ್ಟೆ ಭಾಗ್ಯ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ












Click it and Unblock the Notifications