ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರೈಲ್ವೆ ಸಚಿವ ಸುರೇಶ್ ಅಂಗಡಿಗೆ ಕೊರೊನಾ ಸೋಂಕು

|
Google Oneindia Kannada News

ಬೆಳಗಾವಿ, ಸೆಪ್ಟೆಂಬರ್ 11: ರೈಲ್ವೆ ಸಚಿವ ಸುರೇಶ್ ಅಂಗಡಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಖುದ್ದಾಗಿ ಅವರೇ ಟ್ವಿಟ್ಟರ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ವೈದ್ಯರ ಸಲಹೆಗಳನ್ನು ಪಡೆದಿದ್ದೇನೆ, ನಾನು ಆರಾಮವಾಗಿದ್ದೇನೆ. ನನ್ನೊಂದಿಗೆ ನೇರ ಸಂಪರ್ಕದಲ್ಲಿದ್ದವರು ಕೂಡಲೇ ಪರೀಕ್ಷೆ ಮಾಡಿಸಿಕೊಳ್ಳಿ, ಸೋಂಕಿನ ಲಕ್ಷಣಗಳು ಕಾಣಿಸಿಕೊಂಡರೂ ಕೊಳ್ಳದೇ ಇದ್ದರೂ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.

ಕರ್ನಾಟಕದಲ್ಲಿ 101537 ಕೊರೊನಾವೈರಸ್ ಸಕ್ರಿಯ ಪ್ರಕರಣ ಕರ್ನಾಟಕದಲ್ಲಿ 101537 ಕೊರೊನಾವೈರಸ್ ಸಕ್ರಿಯ ಪ್ರಕರಣ

ಇತ್ತೀಚೆಗಷ್ಟೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೂ ಕೊರೊನಾ ಸೋಂಕು ತಗುಲಿತ್ತು. ಅವರು ಚೇತರಿಸಿಕೊಳ್ಳುತ್ತಿದ್ದಾರೆ.

Railways MoS And Belagavi Lok Sabha MP Suresh Angadi Tests Positive For Coronavirus

ರಾಜ್ಯದಲ್ಲಿ ನೊವೆಲ್ ಕೊರೊನಾವೈರಸ್ ಸೋಂಕಿತರ ಸಂಖ್ಯೆಯು ಪ್ರತಿನಿತ್ಯ 9 ಸಾವಿರದ ಗಡಿ ದಾಟುತ್ತಿದೆ. ಕಳೆದ 24 ಗಂಟೆಗಳಲ್ಲೇ ಕರ್ನಾಟಕದಲ್ಲಿ 9217 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.

ಕರ್ನಾಟಕದದಲ್ಲಿ ಒಂದೇ ದಿನ ಕೊರೊನಾವೈರಸ್ ಸೋಂಕಿಗೆ 129 ಜನರು ಪ್ರಾಣ ಬಿಟ್ಟಿದ್ದು, ಒಟ್ಟು ಸಾವಿನ ಸಂಖ್ಯೆ 6937ಕ್ಕೆ ಏರಿಕೆಯಾಗಿದೆ. ಕೊವಿಡ್-19 ಸೋಂಕಿತ ಪ್ರಕರಣಗಳ ಬಗ್ಗೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಇಲಾಖೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ.

Recommended Video

Zameer Ahmed ಗರಂ Sambargi ವಿರುದ್ಧ ಬಿತ್ತು ಸಿಕಾಪಟ್ಟೆ ಸೆಕ್ಷನ್ | Oneindia Kannada

ಕರ್ನಾಟಕದಲ್ಲಿ 24 ಗಂಟೆಗಳಲ್ಲೇ 9540 ಜನರಿಗೆ ಕೊವಿಡ್-19 ಸೋಂಕು ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಒಟ್ಟು ಸಂಖ್ಯೆ 430947ಕ್ಕೆ ಏರಿಕೆಯಾಗಿದ್ದು, ಈ ಪೈಕಿ 322454 ಸೋಂಕಿತರು ಗುಣಮುಖರಾಗಿದ್ದಾರೆ. 101537 ಸಕ್ರಿಯ ಪ್ರಕರಣಗಳಿವೆ. ಕಳೆದ 24 ಗಂಟೆಗಳಲ್ಲಿ 7021 ಕೊವಿಡ್-19 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ

English summary
Railway Minister of State Suresh Angadi Tests Positive For Coronavirus On Friday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X