RTO: ₹974 ಲಕ್ಷ ವೆಚ್ಚದ ಹೊಸ RTO ಏಪ್ರಿಲ್‌ಗೆ ಆರಂಭ: ದಂಡ ಸಂಗ್ರಹದಲ್ಲಿ ಭಾರೀ ಪ್ರಗತಿ: ರಾಮಲಿಂಗಾ ರೆಡ್ಡಿ
ಬೆಂಗಳೂರು, ಫೆಬ್ರವರಿ 26: ಕರ್ನಾಟಕ ರಾಜ್ಯ ಸಾರಿಗೆ ಇಲಾಖೆ ವ್ಯಾಪ್ತಿಯಲ್ಲಿ ಹೊಸ ಬಸ್ ಪರಿಚಯ, ಅಭಿವೃದ್ಧಿ ಕಾರ್ಯಗಳು ಚುರುಕಿನಿಂದ ಸಾಗಿವೆ. ಇದೀಗ ಈ ಜಿಲ್ಲೆಯೊಂದರಲ್ಲಿ ಹೊಸ ಪ್ರಾದೇಶಿಕ ಸಾರಿಗೆ ಕಚೇರಿಯನ್ನು ಮುಂದಿನ ಏಪ್ರಿಲ್ ಒಳಗೆ ಆರಂಭಿಸಬೇಕು. ಸಾರ್ವಜನಿಕ ಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಲು ಅಧಿಕಾರಿಗಳಿಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಖಡಕ್ ಸೂಚನೆ ನೀಡಿದರು.
ರಾಜ್ಯ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು, ಬೆಳಗಾವಿ ಹಾಗೂ ಬಾಗಲಕೋಟೆ ಪ್ರಾದೇಶಿಕ ಸಾರಿಗೆ ಕಚೇರಿಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಈ ವೇಳೆ ಕೆಲವು ಮಾಹಿತಿ ನೀಡಿದ ಅವರು, RTO ಹೊಸ ಕಛೇರಿಯ ಕಟ್ಟಡ ಕಾಮಗಾರಿಗೆ ಒಟ್ಟು 974.05 ಲಕ್ಷ ರೂಪಾಯಿ ಮಂಜೂರಾಗಿದೆ. ಪ್ರಾದೇಶಿಕ ಸಾರಿಗೆ ಕಚೇರಿ ಮತ್ತು ಜಂಟಿ ಸಾರಿಗೆ ಆಯುಕ್ತರು, ಬೆಳಗಾವಿ ವಿಭಾಗದ ಕಚೇರಿ ಒಳಗೊಂಡಿರಲಿದೆ ಎಂದರು.

ಮುಂದಿನ ಏಪ್ರಿಲ್ 2025ಕ್ಕೆ ಹೊಸ ಕಟ್ಟಡದಲ್ಲಿ ಕರ್ತವ್ಯ ನಿರ್ವಹಿಸುವಂತೆ ಆಗಬೇಕು. ಅಷ್ಟರೊಳಗೆ ಕಟ್ಟಡ ನಿರ್ಮಾಣದ ಎಲ್ಲಾ ರೀತಿಯ ಕೆಲಸ, ಕಾಮಗಾರಿ ಮುಕ್ತಾಯವಾಗಿರಬೇಕು. ಸಾರ್ವಜನಿಕ ಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಲು ಅಧಿಕಾರಿಗಳಿಗೆ ಸಚಿವರು ನಿರ್ದೇಶಿಸಿದರು.
ಬೆಳಗಾವಿ ಪ್ರಾದೇಶಿಕ ಸಾರಿಗೆ ಕಚೇರಿ (RTO) 2024-25ನೇ ಸಾಲಿನ ರಾಜಸ್ವ ಗುರಿ ಸಾಧಿಸಿದ್ದು, 23,260 ಲಕ್ಷ ರೂಪಾಯಿ ಸಂಗ್ರಹವಾಗಿದೆ. ಅದರಲ್ಲಿ ರೂ.17625 ಲಕ್ಷ ವಸೂಲಾತಿ ಮಾಡಿದ್ದು, ಶೇಕಡಾ 90.93% ಪ್ರಗತಿ ಸಾಧಿಸಿದೆ. 5076 ವಾಹನಗಳ ಮೇಲೆ ಪ್ರಕರಣ ದಾಖಲಿಸಿ, ದಂಡ ಮೊತ್ತ ರೂ. 95,29,578/- ವಸೂಲು ಮಾಡಲಾಗಿರುತ್ತದೆ ಎಂದು ಅಧಿಕಾರಿಗಳು ಸಚಿವರ ಗಮನಕ್ಕೆ ತಂದರು.
ರಸ್ತೆ ಸುರಕ್ಷತೆ ಗುರಿ: 6300 ವಾಹನಗಳ ಗುರಿಯನ್ನು ಹೊಂದಿದ್ದು, ಈವರೆಗೂ 5076 ವಾಹನಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಶೇಕಡಾ 96.88 ರಷ್ಟು ಗುರಿಯನ್ನು ತಲುಪಿದೆ. ತೆರಿಗೆ ಬಾಕಿ ವಸೂಲಾತಿಗೆ ಮಾನ್ಯ ನ್ಯಾಯಾಲಯಗಳಲ್ಲಿ ದಾಖಲಿಸಿದ ಪ್ರಕರಣಗಳನ್ನು ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡಲು ಸೂಚಿಸಿದರು. DCB ಮತ್ತು DSA ಪ್ರಕರಣಗಳ ಬಗ್ಗೆ ಸಚಿವರು ಪರಾರ್ಮಶೆ ನಡೆಸಿದರು.

ಎಲ್ಲ ಹೊಸ ವಾಹನಗಳಿಗೆ HSRP ನೋಂದಣಿ ಕಡ್ಡಾಯಗೊಳಿಸಿದೆ. ನೋಂದಣಿಯಾದ 1,42,188 ವಾಹನಗಳಿಗೆ HSRP ಅಳವಡಿಸಲಾಗಿದೆ. ವಿವಿಧ ಪ್ರಕರಣಗಳಲ್ಲಿ 988 ಚಾಲನಾ ಅನುಜ್ಞಾ ಪತ್ರಗಳನ್ನು ವಶಪಡಿಸಿಕೊಂಡು ಅವುಗಳನ್ನು ಅಮಾನತ್ತುಗೊಳಿಸಲಾಗಿದೆ. ಒಟ್ಟು 7,26,380 ವಾಹನಗಳ ನೋಂದಣಿಯಾಗಿರುತ್ತವೆ. 54,574 ನೋಂದಣಿ ಕಾರ್ಡ್ ಹಾಗೂ 50,824 ಚಾಲನಾ ಅನುಜ್ಞಾ ಪತ್ರಗಳನ್ನು ಅಂಚೆ ಮೂಲಕ ರವಾನಿಸಲಾಗಿದೆ.
ಬಾಗಲಕೋಟೆ ಪ್ರಾದೇಶಿಕ ಸಾರಿಗೆ ಕಚೇರಿ
ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ, ಬಾಗಲಕೋಟೆ ಕಚೇರಿಯು ಬಾಗಲಕೋಟೆ, ಬೀಳಗಿ, ಗುಳೇದಗುಡ್ಡ, ಬದಾಮಿ, ಹುನಗುಂದ ಮತ್ತು ಇಲಕಲ್ ಒಳಗೊಂಡಿದೆ. ರೂ. 8675.00 ಲಕ್ಷ ರಾಜಸ್ವ ಗುರಿಯಲ್ಲಿ ರೂ 6647.25 ಸಂಗ್ರಹಿಸಿ ಶೇ.92.04 ರಷ್ಟು ಗುರಿ ಸಾಧಿಸಿದೆ. 2344 ವಾಹನಗಳ ಮೇಲೆ ಪ್ರಕರಣ ದಾಖಲಿಸಿ, ದಂಡ ರೂ. 1,76,74,951/- ವಸೂಲು ಮಾಡಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.
ರಸ್ತೆ ಸುರಕ್ಷತೆಗೆ ಸಂಬಂಧಿಸಿದಂತೆ 3074 ವಾಹನಗಳ ವಿರುದ್ಧ ಪ್ರಕರಣ ದಾಖಲಿಸಿದ್ದು, ಇದರಲ್ಲಿ ಶೇ.79.12 ರಷ್ಟು ಗುರಿಯನ್ನು ತಲುಪಿದ್ದೇವೆ ಎಂದರು. ಸ್ವಯಂ ಚಾಲನಾ ಪರೀಕ್ಷಾ ಪಥದ ಕಾಮಗಾರಿಯನ್ನು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯವರಿಗೆ ವಹಿಸಲಾಗಿದೆ. ಚಾಲನಾ ಪಥಗಳ ನಿರ್ಮಾಣ ಕಾರ್ಯ ಮುಕ್ತಾಯಗೊಂಡಿದೆ. ಯೋಜನೆಯ ಮೊತ್ತ ರೂ. 9 ಕೋಟಿಯಾಗಿದ್ದು ಏಪ್ರಿಲ್ 2025 ರವರೆಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಹೇಳಿದರು.
ಒಟ್ಟು 3,05,224 ವಾಹನಗಳ ನೋಂದಣಿಯಾಗಿವೆ. 1,55,200 ಚಾಲನಾ ಅನುಜ್ಞಾ ಪತ್ರಗಳನ್ನು ನೀಡಲಾಗಿದೆ. 3,09.,276 ಕಲಿಕಾ ಚಾಲನಾ ಅನುಜ್ಞಾ ಪತ್ರಗಳನ್ನು ನೀಡಲಾಗಿದೆ.
RTO ಕಛೇರಿಗಳು ಸಾರ್ವಜನಿಕರಿಗೆ ಅಗತ್ಯವಾದ ಸೇವೆಗಳನ್ನು ನಿಗದಿತ ಕಾಲ ಮಿತಿಯಲ್ಲಿ ಒದಗಿಸಿ ಸಾರ್ವಜನಿಕ ಸ್ನೇಹಿಯಾಗಿ ಕಾರ್ಯ ನಿರ್ವಹಿಸಬೇಕು. ರಾಜಸ್ವ ಸಂಗ್ರಹ , ಎಚ್.ಎಸ್ ಆರ್.ಪಿ ನೋಂದಣಿ ಸಾಧನೆಯ ಪ್ರಮಾಣ ಹೆಚ್ಚಾಗಬೇಕು. ಯಾವುದೇ ರೀತಿಯ ವಿಳಂಬ ಧೋರಣೆಗೆ ಅವಕಾಶ ಮಾಡಿಕೊಡಬಾರದೆಂದು ಅವರು ತಿಳಿಸಿದರು.
ಆಸ್ಪತ್ರೆಯಲ್ಲಿ ಕಂಡಕ್ಟರ್ ಭೇಟಿ ಮಾಡಿದ ಸಚಿವರು
ಇದೇ ವೇಳೆ ಸಚಿವರು ಬೆಳಗಾವಿಯಲ್ಲಿ ಸಣ್ಣ ಬಾಳೇಕುಂದ್ರಿ ಗ್ರಾಮದಲ್ಲಿ ಶುಕ್ರವಾರ ಹಲ್ಲೆಗೆ ಒಳಗಾಗಿ ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಾರಿಗೆ ಸಂಸ್ಥೆಯ ಬಸ್ ನಿರ್ವಾಹಕ ಮಹಾದೇವ ಹುಕ್ಕೇರಿ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದರು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications