• search
 • Live TV
ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕಾಂಗ್ರೆಸ್‌ ಶಾಸಕಾಂಗ ಸಭೆ : ರಮೇಶ್ ಜಾರಕಿಹೊಳಿ ಸೇರಿ ಹಲವರು ಗೈರು!

|
   ಕಾಂಗ್ರೆಸ್‌ ಶಾಸಕಾಂಗ ಸಭೆ : ರಮೇಶ್ ಜಾರಕಿಹೊಳಿ ಸೇರಿ ಹಲವರು ಗೈರು! | Oneindia Kannada

   ಬೆಳಗಾವಿ, ಡಿಸೆಂಬರ್ 18 : ಬೆಳಗಾವಿಯಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಹಲವು ಶಾಸಕರು ಗೈರಾಗಿದ್ದಾರೆ. ಅದರಲ್ಲೂ ಪಕ್ಷದ ನಾಯಕರ ವಿರುದ್ಧ ಅಸಮಾಧಾನಗೊಂಡಿರುವ ಶಾಸಕರು ಗೈರಾಗಿದ್ದು ಕುತೂಹಲಕ್ಕೆ ಕಾರಣವಾಗಿದೆ.

   ಶಾಸಕಾಂಗ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಮಂಗಳವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯುತ್ತಿದೆ. ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಸಭೆಯಲ್ಲಿ ಪಾಲ್ಗೊಂಡಿದ್ದಾರೆ.

   ಸಚಿವ ಸಂಪುಟ ಸಭೆಗೆ ಮತ್ತೆ ರಮೇಶ್ ಜಾರಕಿಹೊಳಿ ಗೈರು!

   ಆದರೆ, ರಮೇಶ್ ಜಾರಕಿಹೊಳಿ, ಬಿ.ನಾಗೇಂದ್ರ, ರಾಮಲಿಂಗಾ ರೆಡ್ಡಿ, ರೋಷನ್ ಬೇಗ್, ಎಂ.ಬಿ.ಪಾಟೀಲ್ ಸೇರಿದಂತೆ ಕೆಲವು ಹಿರಿಯ ಶಾಸಕರು ಗೈರಾಗಿದ್ದಾರೆ. ಅದರಲ್ಲೂ ರಮೇಶ್ ಜಾರಕಿಹೊಳಿ ಅವರು ಗೈರಾಗಿರುವುದು ಕುತೂಹಲ ಮೂಡಿಸಿದೆ.

   ಶಾಸಕಾಂಗ ಪಕ್ಷದ ಸಭೆ : ಸಿದ್ದರಾಮಯ್ಯ ಮುಂದಿದೆ ದೊಡ್ಡ ಸವಾಲು!

   ಸಚಿವ ಸಂಪುಟ ವಿಸ್ತರಣೆ ವಿಚಾರದಲ್ಲಿ ಹಲವು ಹಿರಿಯ ನಾಯಕರು ಪಕ್ಷದ ನಾಯಕರ ವಿರುದ್ಧ ಅಸಮಾಧಾನಗೊಂಡಿದ್ದಾರೆ. ಅವರೆಲ್ಲರೂ ಶಾಸಕಾಂಗ ಪಕ್ಷದ ಸಭೆಗೆ ಗೈರಾಗಿದ್ದು, ಕಾಂಗ್ರೆಸ್‌ನಲ್ಲಿ ಎಲ್ಲವೂ ಸರಿ ಇಲ್ಲ ಎಂಬ ಸಂದೇಶವನ್ನು ಸಾರಿದೆ.

   ಕಾಂಗ್ರೆಸ್‌ನ 60 ಶಾಸಕರು ಮಾತ್ರ ಶಾಸಕಾಂಗ ಪಕ್ಷದ ಸಭೆಗೆ ಹಾಜರಾಗಿದ್ದರು. ಆದರೆ, ಸಚಿವ ಸಂಪುಟ ವಿಸ್ತರಣೆಗೆ ಪಟ್ಟು ಹಿಡಿದಿದ್ದ ಶಾಸಕರೇ ಗೈರು ಹಾಜರಾಗಿದ್ದು ಏಕೆ? ಎಂಬ ಪ್ರಶ್ನೆಗೆ ಇನ್ನೂ ಉತ್ತರ ಸಿಕ್ಕಿಲ್ಲ.

   English summary
   Ramesh Jarakiholi, Ramalinga Reddy, M.B.Patil, Roshan Baig and other MLA's skipped the CLP meeting. Siddaramaiah chaired the CLP meeting in Belagavi on December 18, 2018.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X