ಸರ್ಕಾರ ಉರುಳಿಸುವ ಮ್ಯಾಜಿಕ್ ನಂಬರ್ ರಮೇಶ್ ಜಾರಕಿಹೊಳಿ ಬಳಿ ಇಲ್ಲ!

Recommended Video

      ಅವನಿಗೆ ಮಾಡೋದಕ್ಕೆ ಕೆಲಸ ಇಲ್ಲ, ನಾನು ಅವನ ಬಗ್ಗೆ ಏನ್ ಹೇಳೋದು..! | Oneindia kannada

      ಬೆಳಗಾವಿ, ಏಪ್ರಿಲ್ 25 : 'ಕರ್ನಾಟಕದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವನ್ನು ಉರುಳಿಸುವಷ್ಟು ಸಂಖ್ಯಾಬಲ ರಮೇಶ್ ಜಾರಕಿಹೊಳಿ ಅವರ ಬಳಿ ಇಲ್ಲ' ಎಂದು ಅರಣ್ಯ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

      ಗುರುವಾರ ಮಾಧ್ಯಮಗಳ ಜೊತೆ ಮಾತನಾಡಿದ ಸತೀಶ್ ಜಾರಕಿಹೊಳಿ ಅವರು, 'ಸರ್ಕಾರವನ್ನು ಉಳಿಸಿಕೊಳ್ಳಲು ಎರಡೂ ಪಕ್ಷದವರು ಸಮರ್ಥರಿದ್ದೇವೆ. ಈಗಾಗಲೇ ಸರ್ಕಾರ ಕೆಡವಲು ಅವರು 3 ರಿಂದ 4 ಬಾರಿ ಪ್ರಯತ್ನ ನಡೆಸಿದ್ದಾರೆ, ಅದು ಸಾಧ್ಯವಾಗಿಲ್ಲ' ಎಂದರು.

      ರಮೇಶ್ ಜಾರಕಿಹೊಳಿ ಅವರು ಕಾಂಗ್ರೆಸ್ ಪಕ್ಷ ತೊರೆಯುವ ಬಗ್ಗೆ ಮಾತನಾಡಿದ ಸತೀಶ್ ಜಾರಕಿಹೊಳಿ ಅವರು, 'ಸಮಸ್ಯೆ ಏನಾಗಿದೆ ಎನ್ನುವುದನ್ನು ರಮೇಶನನ್ನೇ ಕೇಳಬೇಕು. ಜನರಿಗೂ ಆ ಬಗ್ಗೆ ಕುತೂಹಲವಿದೆ' ಎಂದು ಹೇಳಿದರು.

      'ಆತ ಬಿಜೆಪಿ ಸೇರಲು 10 ಕಾರಣಗಳಿವೆ. ಅಳಿಯ ಅಂಬಿರಾವ್ ಪಾಟೀಲರಿಗೆ ಮಹಾರಾಷ್ಟ್ರದಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದು ಒಂದು ಕಾರಣ. ಇನ್ನೂ 9 ಕಾರಣಗಳನ್ನು ಅವರನ್ನೇ ಕೇಳಿ' ಎಂದು ಸತೀಶ್ ಜಾರಕಿಹೊಳಿ ತಿಳಿಸಿದರು....

      ಯಾವುದೇ ಬದ್ಧತೆ ಇಲ್ಲ

      ಯಾವುದೇ ಬದ್ಧತೆ ಇಲ್ಲ

      'ಬೆಳಗಾವಿಯಲ್ಲಿ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ. ಆದರೆ, ಬೆಂಗಳೂರಿಗೆ ಹೋಗಿ ಯೂಟರ್ನ್ ತೆಗೆದುಕೊಂಡಿದ್ದಾನೆ. ಅವನಿಗೆ ಯಾವುದೇ ಬದ್ಧತೆ ಇಲ್ಲ. ರಮೇಶ್ ಖಾಲಿ ಇದ್ದಾನೆ. ಅವನಿಗೆ ಕೆಲಸವಿಲ್ಲ ಅದಕ್ಕೆಲ್ಲ ಪ್ರತಿಕ್ರಿಯೆ ಕೊಡಲು ನನಗೆ ಸಮಯವಿಲ್ಲ' ಎಂದು ಸತೀಶ್ ಜಾರಕಿಹೊಳಿ ಹೇಳಿದರು.

      ಸಿದ್ದರಾಮಯ್ಯ ನೋಡಿಕೊಳ್ಳುತ್ತಾರೆ

      ಸಿದ್ದರಾಮಯ್ಯ ನೋಡಿಕೊಳ್ಳುತ್ತಾರೆ

      'ಅಥಣಿ ಶಾಸಕ ಮಹೇಶ್ ಕುಮಠಳ್ಳಿ ಲೋಕಸಭಾ ಚುನಾವಣೆಯಲ್ಲಿ ಚಿಕ್ಕೋಡಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ್ ಹುಕ್ಕೇರಿ ಪರವಾಗಿ ಕೆಲಸ ಮಾಡಿದ್ದಾರೆ. ಮುಂದಿನ ನಿರ್ಧಾರವನ್ನು ತೆಗೆದುಕೊಳ್ಳುವುದು ಅವರಿಗೆ ಬಿಟ್ಟಿದ್ದು, ಮುಂದಿನ ಬೆಳವಣಿಗೆಗಳನ್ನು ಸಿದ್ದರಾಮಯ್ಯ ನೋಡಿಕೊಳ್ಳುತ್ತಾರೆ' ಎಂದರು.

      ರಮೇಶ್ ವಿರುದ್ಧ ವರದಿ ನೀಡಿದ್ದಾರೆ

      ರಮೇಶ್ ವಿರುದ್ಧ ವರದಿ ನೀಡಿದ್ದಾರೆ

      'ಚಿಕ್ಕೋಡಿ ಮತ್ತು ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಪಕ್ಷದ ವೀಕ್ಷಕರಾಗಿದ್ದವರು ರಮೇಶ್ ವಿರುದ್ಧ ವರದಿ ನೀಡಿದ್ದಾರೆ. ಪಕ್ಷ ವಿರೋಧಿ ಚಟುವಟಿಕೆ ಮಾಡಿರುವ ಉದಾಹರಣೆ ಇದೆ. ಲೋಕಸಭಾ ಚುನಾವಣೆ ಬಳಿಕ ಪಕ್ಷ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ' ಎಂದು ಸತೀಶ್ ಜಾರಕಿಹೊಳಿ ಹೇಳಿದರು.

      ಉಳಿದ ಶಾಸಕರಿಗೆ ಸಮಸ್ಯೆ ಆಗಿಲ್ಲ

      ಉಳಿದ ಶಾಸಕರಿಗೆ ಸಮಸ್ಯೆ ಆಗಿಲ್ಲ

      'ರಮೇಶ್ ಜಾರಕಿಹೊಳಿ ಅವರಿಗೆ ಸಮಸ್ಯೆ ಆಗಿರಬಹುದು. ಉಳಿದ ಶಾಸಕರಿಗೆ ಯಾವುದೇ ತೊಂದರೆ ಆಗಿಲ್ಲ. ಸಮಸ್ಯೆ ಏನಾಗಿದೆ ಎನ್ನುವುದನ್ನು ರಮೇಶನನ್ನೇ ಕೇಳಬೇಕು. ಜನರಿಗೂ ಆ ಬಗ್ಗೆ ಕುತೂಹಲ ಇದೆ' ಎಂದು ಸತೀಶ್ ಜಾರಕಿಹೊಳಿ ಹೇಳಿದರು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+