ಬೆಳಗಾವಿ ರಾಜಕೀಯ : ಬಿಜೆಪಿ ನಾಯಕರ ಜೊತೆ ರಮೇಶ್ ಜಾರಕಿಹೊಳಿ ಸಭೆ!

Recommended Video

      ಯಮಕನಮರಡಿ ಕ್ಷೇತ್ರದ ಮೇಲೆ ಕಣ್ಣಿಟ್ಟ ರಮೇಶ್ ಜಾರಕಿಹೊಳಿ

      ಬೆಳಗಾವಿ, ಮೇ 10 : ಬೆಂಗಳೂರಿನಿಂದ ಗೋಕಾಕ್‌ಗೆ ವಾಪಸ್ ಆಗಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಮುಂದಿನ ನಡೆ ಕುತೂಹಲಕ್ಕೆ ಕಾರಣವಾಗಿದೆ. ಮೇ 23ರ ತನಕ ಏನೂ ಮಾತನಾಡುವುದಿಲ್ಲ ಎಂದು ಅವರು ಮೌನಕ್ಕೆ ಶರಣಾಗಿದ್ದಾರೆ.

      ಶುಕ್ರವಾರ ಬೆಳಗಾವಿಯ ಖಾಸಗಿ ಹೋಟೆಲ್‌ನಲ್ಲಿ ರಮೇಶ್ ಜಾರಕಿಹೊಳಿ ಅವರು ಬಿಜೆಪಿ ನಾಯಕರ ಜೊತೆ ಸಭೆ ನಡೆಸಿದರು. ಬಿಜೆಪಿ ನಾಯಕರು ಸತೀಶ್ ಜಾರಕಿಹೊಳಿ ಪ್ರತಿನಿಧಿಸುವ ಯಮಕನಮರಡಿ ಕ್ಷೇತ್ರಕ್ಕೆ ಸೇರಿದವರು ಎಂಬುದು ವಿಶೇಷ.

      ಸಚಿವ ಸಂಪುಟ ವಿಸ್ತರಣೆ ಬಳಿಕ, ಸಚಿವ ಸ್ಥಾನ ಕಳೆದುಕೊಂಡಿರುವ ರಮೇಶ್ ಜಾರಕಿಹೊಳಿ ಅವರು ಕಾಂಗ್ರೆಸ್ ಪಕ್ಷದ ಚಟುವಟಿಕೆಗಳಿಂದ ದೂರವಾಗಿದ್ದಾರೆ. ಅವರು ಬಿಜೆಪಿ ಸೇರಲಿದ್ದಾರೆ ಎಂಬ ಸುದ್ದಿಗಳು ಹಲವು ದಿನಗಳಿಂದ ಹರಿದಾಡುತ್ತಿವೆ.

      ಗೋಕಾಕ್ ಕ್ಷೇತ್ರದ ಶಾಸಕ ರಮೇಶ್ ಜಾರಕಿಹೊಳಿ ಅವರು ಯಮಕನಮರಡಿಯ ಬಿಜೆಪಿ ನಾಯಕರ ಜೊತೆ ಏಕೆ ಸಭೆ ನಡೆಸಿದರು? ಎಂಬುದು ಬೆಳಗಾವಿ ಜಿಲ್ಲಾ ರಾಜಕೀಯದಲ್ಲಿ ಬಿಸಿ-ಬಿಸಿ ಚರ್ಚೆಗೆ ಕಾರಣವಾಗಿದೆ. ಭವಿಷ್ಯದಲ್ಲಿ ನಡೆಯಬಹುದಾದದ ಸಹೋದರರ ಸವಾಲ್‌ಗೆ ಈಗಲೇ ವೇದಿಕೆ ಸಿದ್ಧವಾಗುತ್ತಿದೆಯೇ?...

      ಖಾಸಗಿ ಹೋಟೆಲ್‌ನಲ್ಲಿ ಸಭೆ

      ಖಾಸಗಿ ಹೋಟೆಲ್‌ನಲ್ಲಿ ಸಭೆ

      ಬೆಳಗಾವಿ ಹಾಲು ಒಕ್ಕೂಟದ ಚುನಾವಣೆ ಬಗ್ಗೆ ಚರ್ಚೆ ನಡೆಸಲು ರಮೇಶ್ ಜಾರಕಿಹೊಳಿ ಬೆಳಗಾವಿಯ ಖಾಸಗಿ ಹೋಟೆಲ್‌ನಲ್ಲಿ ವಿವಿಧ ನಾಯಕರ ಸಭೆಯಲ್ಲಿ ಶುಕ್ರವಾರ ನಡೆಸಿದರು. ಈ ಸಭೆಯ ಬಳಿಕ ರಹಸ್ಯವಾಗಿ ಯಮಕನಮರಡಿ ಕ್ಷೇತ್ರದ ಬಿಜೆಪಿ ನಾಯಕರ ಜೊತೆ ಅವರು ಸಭೆ ನಡೆಸಿದ್ದು ಕುತೂಹಲಕ್ಕೆ ಕಾರಣವಾಗಿದೆ.

      ನಾಲ್ವರು ಶಾಸಕರ ರಾಜೀನಾಮೆ

      ನಾಲ್ವರು ಶಾಸಕರ ರಾಜೀನಾಮೆ

      ಸಭೆಯಲ್ಲಿ ಬಿಜೆಪಿ ನಾಯಕ ಬಿ.ಬಿ.ಹಂಜಿ ಸೇರಿದಂತೆ ಹಲವು ನಾಯಕರು ಪಾಲ್ಗೊಂಡಿದ್ದರು. ಸಭೆಯಲ್ಲಿ ಸಹೋದರ ಸತೀಶ್ ಜಾರಕಿಹೊಳಿ ಅವರ ವಿರುದ್ಧ ರಮೇಶ್ ಜಾರಕಿಹೊಳಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೇ 23ರ ಬಳಿಕ ಸರ್ಕಾರ ಪತನಗೊಳ್ಳಲಿದೆ. ನಾಲ್ವರು ಶಾಸಕರು ರಾಜೀನಾಮೆ ನೀಡಲಿದ್ದಾರೆ. ಚಿಂಚೋಳಿ ಮತ್ತು ಕುಂದಗೋಳದಲ್ಲಿ ಬಿಜೆಪಿ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ ಎಂದು ರಮೇಶ್ ಜಾರಕಿಹೊಳಿ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

      ಸಹೋದರನ ವಿರುದ್ಧ ಸ್ಪರ್ಧೆ?

      ಸಹೋದರನ ವಿರುದ್ಧ ಸ್ಪರ್ಧೆ?

      ಮುಂದಿನ ಚುನಾವಣೆಯಲ್ಲಿ ರಮೇಶ್ ಜಾರಕಿಹೊಳಿ ಅವರು ಸಹೋದರ ಸತೀಶ್ ಜಾರಕಿಹೊಳಿ ಅವರ ವಿರುದ್ಧ ಕಣಕ್ಕಿಳಿಯಲಿದ್ದಾರೆ ಎಂಬ ಸುದ್ದಿಗಳು ಹಬ್ಬಿದೆ. ಆದ್ದರಿಂದಲೇ ಅವರು ಸತೀಶ್ ಪ್ರತಿನಿಧಿಸುವ ಯಮಕನಮರಡಿ ಕ್ಷೇತ್ರದ ನಾಯಕರೊಂದಿಗೆ ಸಭೆ ನಡೆಸಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ.

      ಬಾಲಚಂದ್ರ ಜಾರಕಿಹೊಳಿ ಹೇಳಿದ್ದೇನು?

      ಬಾಲಚಂದ್ರ ಜಾರಕಿಹೊಳಿ ಹೇಳಿದ್ದೇನು?

      'ರಮೇಶ್ ಜಾರಕಿಹೊಳಿ ಅವರು ಏಕಾಂಗಿಯೋ ಅವರ ಜೊತೆ ಶಾಸಕರು ಇದ್ದಾರೆಯೇ? ಎಂಬುದು ಮೇ 23ರ ಬಳಿಕ ತಿಳಿಯಲಿದೆ. ಅವರ ರಾಜೀನಾಮೆ ಬಗ್ಗೆ ನನಗೆ ತಿಳಿದಿಲ್ಲ. ಕುಟುಂಬದ ವಿಚಾರ ಬಂದರೆ ಮಾತನಾಡಿ ಎಲ್ಲವನ್ನೂ ಇತ್ಯರ್ಥ ಮಾಡುತ್ತೇನೆ' ಎಂದು ಅರಭಾವಿ ಕ್ಷೇತ್ರದ ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದ್ದಾರೆ.

      ಗೋಕಾಕ್‌ಗೆ ಲಖನ್ ಜಾರಕಿಹೊಳಿ

      ಗೋಕಾಕ್‌ಗೆ ಲಖನ್ ಜಾರಕಿಹೊಳಿ

      ರಮೇಶ್ ಜಾರಕಿಹೊಳಿ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದರೆ ಲಖನ್ ಜಾರಕಿಹೊಳಿ ಅವರನ್ನು ಕ್ಷೇತ್ರದಲ್ಲಿ ಕಣಕ್ಕಿಳಿಸಲು ಸತೀಶ ಜಾರಕಿಹೊಳಿ ಬಯಸಿದ್ದಾರೆ. ಆದ್ದರಿಂದ ರಮೇಶ್ ಜಾರಕಿಹೊಳಿ ಅವರು ಸೇಡು ತೀರಿಸಿಕೊಳ್ಳಲು ಯಮಕನಮರಡಿಯಿಂದ ಕಣಕ್ಕಿಳಿಯಲಿದ್ದಾರೆ ಎಂಬುದು ಸದ್ಯದ ಸುದ್ದಿ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+