ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಮೇಶ್ ಜಾರಕಿಹೊಳಿ ತಂತ್ರದಿಂದಾಗಿ ಕಾಂಗ್ರೆಸ್‌ಗೆ ಹಿನ್ನಡೆ?

|
Google Oneindia Kannada News

Recommended Video

ರಮೇಶ್ ಜಾರಕಿಹೊಳಿ ಮಾಡಿರುವ ತಂತ್ರದಿಂದ ಕಾಂಗ್ರೆಸ್ ಹಿನ್ನಡೆ ಸಾಧ್ಯತೆ | Oneindia Kannada

ಬೆಳಗಾವಿ, ಮೇ 06 : ಮಾಜಿ ಸಚಿವ, ಗೋಕಾಕ್ ಕ್ಷೇತ್ರದ ಕಾಂಗ್ರೆಸ್ ಶಾಸಕ ರಮೇಶ್ ಜಾರಕಿಹೊಳಿ ಕಾಂಗ್ರೆಸ್ ಪಕ್ಷಕ್ಕೆ ತಲೆನೋವಾಗಿದ್ದಾರೆ. ತವರು ಕ್ಷೇತ್ರದಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಹಿನ್ನಡೆ ಉಂಟು ಮಾಡಲು ಅವರು ತಂತ್ರ ರೂಪಿಸಿದ್ದಾರೆ.

ಬೆಂಗಳೂರಿನಲ್ಲಿರುವ ರಮೇಶ್ ಜಾರಕಿಹೊಳಿ ಅವರು ಬೆಳಗಾವಿಯಲ್ಲಿ ಸೋಮವಾರ ನಡೆದ ಡಿ.ಕೆ.ಶಿವಕುಮಾರ್ ನೇತೃತ್ವದ ಸಭೆಗೆ ಗೈರಾಗಿದ್ದರು. ಆದರೆ, ಅಳಿಯ ಅಂಬಿರಾವ್ ಪಾಟೀಲ್‌ರಿಂದ ಕ್ಷೇತ್ರದ ಬೆಳವಣಿಗೆಗಳ ಬಗ್ಗೆ ಮಾಹಿತಿ ಪಡೆಯುತ್ತಿದ್ದಾರೆ.

ಮೌನಕ್ಕೆ ಶರಣಾದ ರಮೇಶ್ ಜಾರಕಿಹೊಳಿ, ವಿದೇಶ ಪ್ರವಾಸ?ಮೌನಕ್ಕೆ ಶರಣಾದ ರಮೇಶ್ ಜಾರಕಿಹೊಳಿ, ವಿದೇಶ ಪ್ರವಾಸ?

ಕಾಂಗ್ರೆಸ್ ತೊರೆಯಲು ತುದಿಗಾಲಲ್ಲಿ ನಿಂತಿರುವ ರಮೇಶ್ ಜಾರಕಿಹೊಳಿ ಅವರು ಗೋಕಾಕ್ ಕ್ಷೇತ್ರದಲ್ಲಿ ಪಕ್ಷಕ್ಕೆ ಹಿನ್ನಡೆ ಉಂಟು ಮಾಡಲು ತಂತ್ರವನ್ನು ಹಣೆದಿದ್ದಾರೆ. ಅದರ ಭಾಗವಾಗಿಯೇ ತಮ್ಮ ಬೆಂಬಲಿಗರಿಂದ ರಾಜೀನಾಮೆ ಕೊಡಿಸಿದ್ದಾರೆ.

ಸರ್ಕಾರ ಉರುಳಿಸುವ ಮ್ಯಾಜಿಕ್ ನಂಬರ್ ರಮೇಶ್ ಜಾರಕಿಹೊಳಿ ಬಳಿ ಇಲ್ಲಸರ್ಕಾರ ಉರುಳಿಸುವ ಮ್ಯಾಜಿಕ್ ನಂಬರ್ ರಮೇಶ್ ಜಾರಕಿಹೊಳಿ ಬಳಿ ಇಲ್ಲ

ಮತ್ತೊಂದು ಕಡೆ ಸತೀಶ್ ಜಾರಕಿಹೊಳಿ ಅವರು, 'ರಮೇಶ್ ಜಾರಕಿಹೊಳಿ ಅವರಿಗೆ ಪಕ್ಷ ಬಿಡುವಂತೆ ಯಾರೂ ಹೇಳಿಲ್ಲ. ಪಕ್ಷದ ಕಾರ್ಯಕರ್ತರಾಗಲಿ, ಸಿದ್ದರಾಮಯ್ಯ ಅವರಾಗಲಿ ಯಾರೂ ಹೇಳಿಲ್ಲ. ಪಕ್ಷದಲ್ಲಿ ಇರುವುದು, ಬಿಡುವುದು ಅವರಿಗೆ ಬಿಟ್ಟ ವಿಚಾರ' ಎಂದು ಹೇಳಿದ್ದಾರೆ.

ರಮೇಶ್ ಜಾರಕಿಹೊಳಿ ಒಂದೆರಡು ಏಟು ಹೊಡೆಯಲಿ ಪರವಾಗಿಲ್ಲ: ಡಿಕೆಶಿರಮೇಶ್ ಜಾರಕಿಹೊಳಿ ಒಂದೆರಡು ಏಟು ಹೊಡೆಯಲಿ ಪರವಾಗಿಲ್ಲ: ಡಿಕೆಶಿ

ಇಬ್ಬರು ಬೆಂಬಲಿಗರ ರಾಜೀನಾಮೆ

ಇಬ್ಬರು ಬೆಂಬಲಿಗರ ರಾಜೀನಾಮೆ

ರಮೇಶ್ ಜಾರಕಿಹೊಳಿ ಬೆಂಬಲಿಗರಾದ ಇಬ್ಬರು ಗ್ರಾಮ ಪಂಚಾಯಿತಿ ಅಧ್ಯಕ್ಷರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸೋಮವಾರ ಗೋಕಾಕ್ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ ಸಿಂದಿಕುರಬೇಟ ಗ್ರಾಮ ಪಂಚಾಯಿತಿ ಅಧ್ಯಕ್ಷ ಮೊಹಮ್ಮದ್ ರಫಿಕ್ ಮತ್ತು ಲೋಳಸೂರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರತ್ನವ್ವಾ ಕಿಲಾರಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಲಖನ್‌ಗೆ ಉಸ್ತುವಾರಿ ಹೊಣೆ

ಲಖನ್‌ಗೆ ಉಸ್ತುವಾರಿ ಹೊಣೆ

ಒಂದು ವೇಳೆ ರಮೇಶ್ ಜಾರಕಿಹೊಳಿ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದರೆ ಗೋಕಾಕ್ ಕ್ಷೇತ್ರದ ಹೊಣೆಯನ್ನು ಲಖನ್ ಜಾರಕಿಹೊಳಿ ಅವರಿಗೆ ನೀಡಲಾಗುತ್ತದೆ ಎಂಬ ಸುದ್ದಿಗಳು ಹಬ್ಬಿವೆ. ಆದ್ದರಿಂದ, ರಮೇಶ್ ಜಾರಕಿಹೊಳಿ ಅವರು ತಮ್ಮ ಬೆಂಬಲಿಗರಿಂದ ರಾಜೀನಾಮೆ ಕೊಡಿಸುತ್ತಿದ್ದಾರೆ.

ಸಭೆಗೆ ರಮೇಶ್ ಜಾರಕಿಹೊಳಿ ಗೈರು

ಸಭೆಗೆ ರಮೇಶ್ ಜಾರಕಿಹೊಳಿ ಗೈರು

ಕೃಷ್ಣ ನದಿಗೆ ನೀರು ಹರಿಸುವ ಸಂಬಂಧ ಬೆಳಗಾವಿಯಲ್ಲಿ ಇಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅಧ್ಯಕ್ಷತೆಯಲ್ಲಿ ಜನಪ್ರತಿನಿಧಿಗಳ ಸಭೆ ನಡೆಯಿತು. ಸಭೆಗೆ ರಮೇಶ್ ಜಾರಕಿಹೊಳಿ ಗೈರಾಗಿದ್ದರು. ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಸಭೆಯಲ್ಲಿ ಪಾಲ್ಗೊಂಡಿದ್ದರು.

ಮಾತನಾಡುವುದು ಮುಗಿದ ಅಧ್ಯಾಯ

ಮಾತನಾಡುವುದು ಮುಗಿದ ಅಧ್ಯಾಯ

ಬೆಳಗಾವಿಯಲ್ಲಿ ಸೋಮವಾರ ಮಾತನಾಡಿದ ಸತೀಶ್ ಜಾರಕಿಹೊಳಿ ಅವರು, 'ರಮೇಶ್ ಜೊತೆ ಮಾತನಾಡುವುದು ಮುಗಿದ ಅಧ್ಯಾಯ. ಪಕ್ಷ ಬಿಟ್ಟು ಹೋಗುವವರನ್ನು ತಡೆಯಲು ಸಾಧ್ಯವೇ?. ಅವರು ಯಾವಾಗ ಪಕ್ಷ ಬಿಡುತ್ತಾರೆ. ಯಾವಾಗ ಮಂತ್ರಿ ಆಗುತ್ತಾರೆ ಎಂಬುದನ್ನು ನಿವೇ ಕೇಳಿ' ಎಂದು ಪತ್ರಕರ್ತರಿಗೆ ಹೇಳಿದರು.

English summary
Two supporters of Former minister and Gokak Congress MLA Ramesh Jarakiholi submitted the resignation for the gram panchayat president post. Ramesh Jarakiholi upset with party leaders after cabinet expansion.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X