• search
 • Live TV
ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಲಕ್ಷ್ಮೀ ಹೆಬ್ಬಾಳ್ಕರ್ ನ್ನು ವಿಷಕನ್ಯೆಗೆ ಹೋಲಿಸಿದ ರಮೇಶ್ ಜಾರಕಿಹೊಳಿ

|
   ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಸೇಡು ತೀರಿಸಿಕೊಂಡ ರಮೇಶ್ ಜಾರಕಿಹೊಳಿ | Oneindia Kannada

   ಬೆಳಗಾವಿ, ಡಿಸೆಂಬರ್ 09: ಗೋಕಾಕ್ ವಿಧಾನಸಭಾ ಕ್ಷೇತ್ರವು ಉಪ ಚುನಾವಣೆಯಲ್ಲಿ ಜಾರಕಿಹೊಳಿ ಸಹೋದರರ ನಡುವೆ ಜಿದ್ದಾಜಿದ್ದಿನ ಕಣವಾಗಿತ್ತು. ಇಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್ ಜಾರಕಿಹೊಳಿ ಗೆದ್ದು ಬೀಗಿದ್ದಾರೆ.

   ರಮೇಶ್ ಜಾರಕಿಹೊಳಿ ವಿರುದ್ದ ಸ್ಪರ್ಧಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ಲಖನ್ ಜಾರಕಿಹೊಳಿ ಅವರು ಹೀನಾಯವಾಗಿ ಸೋತಿದ್ದಾರೆ. ಬಿಜೆಪಿ ಅಭ್ಯರ್ಥಿ ರಮೇಶ್ ಜಾರಕಿಹೊಳಿ 87,369 ಮತಗಳನ್ನು ಪಡೆದುಕೊಂಡಿದ್ದರೆ, ಕಾಂಗ್ರೆಸ್ ಅಭ್ಯರ್ಥಿ ಲಖನ್ ಜಾರಕಿಹೊಳಿ 58,394 ಮತಗಳನ್ನು ಪಡೆದು 29,006 ಮತಗಳ ಅಂತರದಲ್ಲಿ ಸೋತಿದ್ದಾರೆ.

   ಗೋಕಾಕ ಉಪ ಚುನಾವಣೆ; ಗೆಲುವಿನ ದಡದತ್ತ ರಮೇಶ ಜಾರಕಿಹೊಳಿ

   ಅಭೂತಪೂರ್ವ ಗೆಲುವಿನ ಬಳಿಕ ಮಾತನಾಡಿದ ರಮೇಶ್ ಜಾರಕಿಹೊಳಿ ಅವರು, " ಉಪ ಚುನಾವಣೆಯಲ್ಲಿ ಗೆಲ್ಲಿಸಿದ ಮತದಾರರಿಗೆ ಧನ್ಯವಾದ ತಿಳಿಸಿದರು. ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರ ಮುಖಕ್ಕೆ ಹೊಡೆದಂತೆ ಜನರು ತೀರ್ಪು ಕೊಟ್ಟಿದ್ದಾರೆ. ಕಾನೂನು ಬಾಹಿರವಾಗಿ ಅನರ್ಹಗೊಳಿಸಿದ್ದರು, ಅದಕ್ಕೆ ಮತದಾರರು ಸರಿಯಾಗಿಯೇ ತಿರುಗೇಟು ನೀಡಿದ್ದಾರೆ" ಎಂದು ಹೇಳಿದರು.

   ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ದ ವಾಗ್ದಾಳಿ ನಡೆಸಿದ ಅವರು, ಲಕ್ಷ್ಮೀ ಹೆಬ್ಬಾಳ್ಕರ್ ಅವರು ಒಬ್ಬ ವಿಷಕನ್ಯೆ, ಅವರು ಯಾವ ಮನೆ ಕಾಲಿಡುತ್ತಾರೋ ಆ ಮನೆ ಖಾಲಿಯಾಗುತ್ತದೆ ಎಂದರು.

   'ಲಕ್ಷ್ಮಿ' ಎದುರಿನಲ್ಲೇ 'ಮಹೇಶ್ವರ'ನ ಧ್ಯಾನ ಮಾಡಿದ ಕಾರ್ಯಕರ್ತರು!

   ಲಕ್ಷ್ಮೀ ಹೆಬ್ಬಾಳ್ಕರ್ ಸೊಕ್ಕಿನಿಂದಲೇ ಸಮ್ಮಿಶ್ರ ಸರ್ಕಾರ ಬಿದ್ದಿದ್ದು, ಮುಂದಿನ ದಿನದಲ್ಲಿ ಬೆಳಗಾವಿ ಗ್ರಾಮಾಂತರ ಕ್ಷೇತ್ರದಲ್ಲಿಯೂ ಬದಲಾವಣೆಯಾಗುತ್ತದೆ ಎಂದು ಮುಂದಿನ ಭವಿಷ್ಯ ನುಡಿದರು.

   English summary
   The Gokak Assembly Constituency Was a Quarrying Ground Among The Jarakiholi Brothers. BJP Candidate Ramesh Jarakiholi Has Won Here. Congress Candidate Lakhan Jarakiholi, Who Contested Against Ramesh Jarkiholi Has Lost.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X