• search
  • Live TV
ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ರಮೇಶ್ ಜಾರಕಿಹೊಳಿ ಶಕ್ತಿ ಪ್ರದರ್ಶನಕ್ಕಾಗಿ ಸಂಕಲ್ಪ ಸಮಾವೇಶ!

|

ಬೆಳಗಾವಿ, ಸೆಪ್ಟೆಂಬರ್ 06 : ಗೋಕಾಕ್ ಕ್ಷೇತ್ರದ ಉಪ ಚುನಾವಣೆಗೆ ವೇದಿಕೆ ಸಿದ್ಧವಾಗುತ್ತಿದೆ. ಕಾಂಗ್ರೆಸ್ ಮತ್ತು ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ನಡುವಿನ ಪ್ರತಿಷ್ಠೆ ಚುನಾವಣೆಯಲ್ಲಿ ಅಡಗಿದೆ. ರಮೇಶ್ ಜಾರಕಿಹೊಳಿ ಅಭಿಮಾನಿಗಳು ಶಕ್ತಿ ಪ್ರದರ್ಶನ ಮಾಡಲು ಮುಂದಾಗಿದ್ದಾರೆ.

ರಮೇಶ್ ಜಾರಕಿಹೊಳಿ ಅಳಿಯ ಅಂಬಿರಾವ್ ಪಾಟೀಲ್ ಸೂಚನೆಯಂತೆ ಶಕ್ತಿ ಪ್ರದರ್ಶನ ಮಾಡಲು ಸೆಪ್ಟೆಂಬರ್ 7ರಂದು ಸಮಾವೇಶ ಆಯೋಜನೆ ಮಾಡಲಾಗುತ್ತದೆ. ಗೋಕಾಕ್‌ನಲ್ಲಿರುವ ರಮೇಶ್ ಜಾರಕಿಹೊಳಿ ನಿವಾಸದ ಮುಂದೆಯೇ ಈ ಸಮಾವೇಶ ನಡೆಯಲಿದೆ.

ಗೋಕಾಕ್ ಕ್ಷೇತ್ರಕ್ಕೆ ಅಭ್ಯರ್ಥಿ ಅಂತಿಮಗೊಳಿಸಿದ ಸಿದ್ದರಾಮಯ್ಯ?

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಂಬೈಗೆ ಹೋಗಿದ್ದ ರಮೇಶ್ ಜಾರಕಿಹೊಳಿಯನ್ನು ಸ್ಪೀಕರ್ ರಮೇಶ್ ಕುಮಾರ್ ಅನರ್ಹಗೊಳಿಸಿದ್ದರು. ಸ್ಪೀಕರ್ ತೀರ್ಪನ್ನು ಅವರು ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನೆ ಮಾಡಿದ್ದು, ಅದರ ವಿಚಾರಣೆ ಇನ್ನೂ ನಡೆಯಬೇಕಿದೆ.

ರಮೇಶ್ ಜಾರಕಿಹೊಳಿ ರಾಜೀನಾಮೆಗೆ ತ್ರಿ ಈಡಿಯಟ್ಸ್‌ ಕಾರಣ!

ಮತ್ತೊಂದು ಕಡೆ ಕಾಂಗ್ರೆಸ್ ಸಹ ಗೋಕಾಕ್ ಉಪ ಚುನಾವಣೆಗೆ ಸಿದ್ಧತೆ ಆರಂಭಿಸಿದೆ. ಸ್ವತಃ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಉಪ ಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದಾರೆ. ಸತೀಶ್ ಜಾರಕಿಹೊಳಿ ಜೊತೆ ಸೇರಿ ತಂತ್ರ ರೂಪಿಸುತ್ತಿದ್ದಾರೆ.

ರಮೇಶ್ ಜಾರಕಿಹೊಳಿ ಮುಂದೆ 4 ಪ್ರಶ್ನೆ ಇಟ್ಟ ಅತೃಪ್ತ ಶಾಸಕರು!

ಸಂಕಲ್ಪ ಸಮಾವೇಶ

ಸಂಕಲ್ಪ ಸಮಾವೇಶ

ಸೆಪ್ಟೆಂಬರ್ 7ರಂದು ರಮೇಶ್ ಜಾರಕಿಹೊಳಿ ಅಭಿಮಾನಿ ಬಳಗ ಗೋಕಾಕ್‌ನಲ್ಲಿ 'ಸಂಕಲ್ಪ ಸಮಾವೇಶ' ಆಯೋಜನೆ ಮಾಡಿದೆ. ಉಪ ಚುನಾವಣೆಗೆ ಶಕ್ತಿ ಪ್ರದರ್ಶನ ಮಾಡಲು ಈ ಸಮಾವೇಶ ಆಯೋಜನೆ ಮಾಡಲಾಗಿದೆ.

5 ಸಾವಿರ ಅಭಿಮಾನಿಗಳು ಭಾಗಿ ನಿರೀಕ್ಷೆ

5 ಸಾವಿರ ಅಭಿಮಾನಿಗಳು ಭಾಗಿ ನಿರೀಕ್ಷೆ

ರಮೇಶ್ ಜಾರಕಿಹೊಳಿ ಮತ್ತು ಅವರ ಅಳಿಯ ಅಂಬಿರಾವ್ ಪಾಟೀಲ್ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಸುಮಾರು 5 ಲಕ್ಷ ಜನರು ಗೋಕಾಕ್‌ನಲ್ಲಿ ನಡೆಯುವ ಈ ಸಮಾವೇಶದಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ. ರಮೇಶ್ ಜಾರಕಿಹೊಳಿ ಈ ಸಮಾವೇಶದ ಮೂಲಕ ಶಕ್ತಿ ಪ್ರದರ್ಶನ ಮಾಡಲಿದ್ದಾರೆ. ಉಪ ಚುನಾವಣೆಯ ತಯಾರಿಯನ್ನು ಸಮಾವೇಶದ ಮೂಲಕ ಆರಂಭಿಸಲಿದ್ದಾರೆ.

ಶಾಸಕ ಸ್ಥಾನದಿಂದ ಅನರ್ಹ

ಶಾಸಕ ಸ್ಥಾನದಿಂದ ಅನರ್ಹ

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಂಬೈಗೆ ಹೋಗಿದ್ದ ರಮೇಶ್ ಜಾರಕಿಹೊಳಿಯನ್ನು ಸ್ಫೀಕರ್ ರಮೇಶ್ ಕುಮಾರ್ ಅನರ್ಹಗೊಳಿಸಿದ್ದಾರೆ. ಆರು ತಿಂಗಳಿನಲ್ಲಿ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಬೇಕಿದೆ. ಕಾಂಗ್ರೆಸ್‌ ಈಗಾಗಲೇ ಚುನಾವಣೆ ತಯಾರಿ ಆರಂಭಿಸಿದೆ.

ಲಖನ್ ಕಾಂಗ್ರೆಸ್‌ನಿಂದ ಕಣಕ್ಕೆ?

ಲಖನ್ ಕಾಂಗ್ರೆಸ್‌ನಿಂದ ಕಣಕ್ಕೆ?

ಗೋಕಾಕ್ ಕ್ಷೇತ್ರಕ್ಕೆ ಕಾಂಗ್ರೆಸ್ ಈಗಾಗಲೇ ಅಭ್ಯರ್ಥಿ ಅಂತಿಮಗೊಳಿಸಿದೆ. ರಮೇಶ್ ಜಾರಕಿಹೊಳಿ ಸಹೋದರ ಲಖನ್ ಜಾರಕಿಹೊಳಿ ಕಣಕ್ಕಿಳಿಯುವ ಸಾಧ್ಯತೆ ಇದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಉಪ ಚುನಾವಣೆಯನ್ನು ಗಂಭೀರವಾಗಿ ತೆಗೆದುಕೊಂಡಿದ್ದು, ಕಣಕ್ಕಿಳಿಯುವಂತೆ ಲಖನ್ ಜಾರಕಿಹೊಳಿ ಜೊತೆ ಈಗಾಗಲೇ ಮಾತುಕತೆಯನ್ನು ನಡೆಸಿದ್ದಾರೆ.

English summary
Ramesh Jarkiholi all set to show his power at Gokak on September 7, 2019. Ramesh Jarkiholi fans organized huge rally.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X