ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

"ಸಿಡಿ ಪ್ರಕರಣದಲ್ಲಿ ಡಿಕೆಶಿ ಏಕೆ ರಾಜೀನಾಮೆ ನೀಡಬಾರದು?"

|
Google Oneindia Kannada News

ಬೆಳಗಾವಿ, ಏಪ್ರಿಲ್ 1: ಸಿಡಿ ಪ್ರಕರಣದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ವಿರುದ್ಧ ಸ್ವತಃ ಸಂತ್ರಸ್ತ ಯುವತಿ ಪೋಷಕರೇ ನೇರವಾಗಿ ಆರೋಪ ಮಾಡುತ್ತಿದ್ದಾರಲ್ಲವೇ ಎಂದು ರಮೇಶ್ ಜಾರಕಿಹೊಳಿ ಸಹೋದರ ಲಖನ್ ಜಾರಕಿಹೊಳಿ ಪ್ರಶ್ನೆ ಮಾಡಿದ್ದಾರೆ.

ಬೆಳಗಾವಿ ಜಿಲ್ಲೆ ಗೋಕಾಕ್ ನಲ್ಲಿ ಮಾತನಾಡಿದ ಅವರು, ಸಂತ್ರಸ್ತ ಯುವತಿ ಪೋಷಕರೇ ಆರೋಪ ಮಾಡುತ್ತಿರುವ ಸಂದರ್ಭದಲ್ಲಿ ತನಿಖೆಗೆ ಸಹಕರಿಸುವುದು ಬಿಡುವುದೂ ಮುಂದಿನ ವಿಚಾರ ಎಂದರು. ಡಿ.ಕೆ. ಶಿವಕುಮಾರ್ ಅವರು ನೈತಿಕ ಹೊಣೆ ಹೊತ್ತು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಬೇಕಿತ್ತು ಎಂದು ಲಖ್ ಜಾರಕಿಹೊಳಿ ಆಗ್ರಹಿಸಿದ್ದಾರೆ.

ರಮೇಶ್ ಜಾರಕಿಹೊಳಿ ಸಿಡಿ ಕೇಸ್: ಆರ್‌ಟಿ ನಗರದ ಪಿಜಿಯಲ್ಲಿ ಎಸ್ಐಟಿ ಮಹಜರುರಮೇಶ್ ಜಾರಕಿಹೊಳಿ ಸಿಡಿ ಕೇಸ್: ಆರ್‌ಟಿ ನಗರದ ಪಿಜಿಯಲ್ಲಿ ಎಸ್ಐಟಿ ಮಹಜರು

ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿಯ ಪೋಷಕರು ನೀಡಿರುವ ಹೇಳಿಕೆಯನ್ನು ಕಾಂಗ್ರೆಸ್ ಹೈಕಮಾಂಡ್ ನಾಯಕರು ಗಂಭೀರವಾಗಿ ತೆಗೆದುಕೊಳ್ಳಬೇಕು. ಡಿಕೆಶಿ ವಿರುದ್ಧ ಕಠಿಣ ಕ್ರಮವನ್ನು ತೆಗೆದುಕೊಳ್ಳಬೇಕಿದೆ ಎಂದು ಲಖನ್ ಜಾರಕಿಹೊಳಿ ಹೇಳಿದ್ದಾರೆ.

Ramesh Jarkiholi CD Case: Lakhan Jarkiholi Demands For D K Shivakumar Resignation

ಡಿಕೆಶಿ ವಿರುದ್ಧ ಪೋಷಕರ ಆಕ್ರೋಶ:

ಸಿಡಿ ಪ್ರಕರಣದಲ್ಲಿ ಡಿ ಕೆ ಶಿವಕುಮಾರ್ ಅವರೇ ಮಹಾನಾಯಕ. ನನ್ನ ಮಗಳು ಯಾವುದೇ ತಪ್ಪು ಮಾಡಿಲ್ಲ. ಎಲ್ಲದಕ್ಕೂ ಡಿ ಕೆ ಶಿವಕುಮಾರ್ ಅವರೇ ನೇರ ಕಾರಣ ಎಂದು ಸಂತ್ರಸ್ತ ಯುವತಿ ಪೋಷಕರು ನೇರವಾಗಿ ಆರೋಪ ಮಾಡಿದ್ದರು. ಇದರ ಬೆನ್ನಲ್ಲೇ ಸಿಡಿಯೊಂದನ್ನು ಬಿಡುಗಡೆಗೊಳಿಸಿದ ಸಂತ್ರಸ್ತ ಯುವತಿಯು ತಮ್ಮ ತಂದೆ ತಾಯಿಗೆ ಬೆದರಿಕೆಯೊಡ್ಡಿ ಅವರಿಂದ ಹೇಳಿಕೆಗಳನ್ನು ಕೊಡಿಸಲಾಗುತ್ತಿದೆ ಎಂದು ಆರೋಪಿಸಿದ್ದರು.

ಕ್ಷಣ ಕ್ಷಣದ ಸುದ್ದಿಗಳಿಗಾಗಿ ಒನ್ ಇಂಡಿಯಾ ಕನ್ನಡ ಟೆಲಿಗ್ರಾಂ ಚಾನಲ್ ಸೇರಿ

ಬಿಜೆಪಿಗೆ ನನ್ನ ಹೆಸರಿನಿಂದಲೇ ಮಾರ್ಕೇಟ್:

ಸಿಡಿ ಪ್ರಕರಣದಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿಯವರಿಗೆ ನನ್ನ ಹೆಸರು ಹೇಳಿದರಷ್ಟೇ ಮಾರ್ಕೆಟಿಂಗ್ ಸಿಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆರೋಪಿಸಿದ್ದಾರೆ. ಅವರಿಗೆ ನನ್ನ ಹೆಸರು ಬಳಸಿಕೊಳ್ಳದೇ ಮಾರುಕಟ್ಟೆಯೇ ಸಿಗುವುದಿಲ್ಲ. ಸಿಡಿ ಪ್ರಕರಣಕ್ಕೂ ನನಗೂ ಯಾವುದೇ ರೀತಿ ಸಂಬಂಧವಿಲ್ಲ. ನನಗೆ ಸಂಬಂಧವಿಲ್ಲದ ವಿಚಾರದಲ್ಲಿ ನನ್ನ ಹೆಸರು ಬಳಸಿಕೊಳ್ಳಲಾಗುತ್ತಿದೆ. ಅವರು ನನ್ನ ಹೆಸರು ಬಳಸಿಕೊಂಡು ಮಾರ್ಕೆಟಿಂಗ್ ಮಾಡಿಕೊಳ್ಳುವ ಪ್ರಯತ್ನದಲ್ಲಿ ಇದ್ದಾರೆ. ಅವರಿಗೆಲ್ಲ ಒಳ್ಳೆಯದ್ದಾಗಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ.

English summary
Ramesh Jarkiholi CD Case: Lakhan Jarkiholi Demands For KPCC President D K Shivakumar Resignation.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X