ಮಾ.9 ಗೋಕಾಕ್ ಬಂದ್: ರಮೇಶ್ ಜಾರಕಿಹೊಳಿ ರಾಜೀನಾಮೆಗೆ ಜೆಡಿಎಸ್ ಆಗ್ರಹ
ಗೋಕಾಕ್, ಮಾರ್ಚ್.03: ಕರ್ನಾಟಕದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರ್ಚ್.09ರಂದು ಗೋಕಾಕ್ ಬಂದ್ ನಡೆಸುವುದಾಗಿ ಜೆಡಿಎಸ್ ಮುಖಂಡ ಅಶೋಕ್ ಪೂಜಾರಿ ಹೇಳಿದ್ದಾರೆ.
ಗೋಕಾಕ್‌ನಲ್ಲಿ ಮಾತನಾಡಿದ ಅವರು, ಯುವತಿ ಜೊತೆಗೆ ರಾಸಲೀಲೆ ನಡೆಸಿದ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡದಿದ್ದರೆ ಮಾರ್ಚ್ 09ರಂದು ಗೋಕಾಕ್ ವಿಧಾನಸಭಾ ಕ್ಷೇತ್ರದಲ್ಲಿ ಬಂದ್ ನಡೆಸಲಾಗುತ್ತದೆ ಎಂದು ಜೆಡಿಎಸ್ ಮುಖಂಡ ಅಶೋಕ್ ಪೂಜಾರಿ ಎಚ್ಚರಿಕೆ ನೀಡಿದ್ದಾರೆ.

ಮಂಗಳವಾರ ಗೋಕಾಕ್ ನಲ್ಲಿ ಪವರ್ ಕಟ್:
ಯುವತಿ ಜೊತೆಗೆ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆಗೆ ಸಂಬಂಧಿಸಿದ ಸಿಡಿ ಬಿಡುಗಡೆ ಆಗುತ್ತಿದ್ದಂತೆ ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರವಾಯಿತು. ಮಂಗಳವಾರ ಸಂಜೆ ವೇಳೆಗೆ ಶಾಸಕರ ಸ್ವಕ್ಷೇತ್ರ ಗೋಕಾಕ್ ತಾಲೂಕಿನಲ್ಲಿ ವಿದ್ಯುತ್ ಸಂಪರ್ಕವನ್ನೇ ಸ್ಥಗಿತಗೊಳಿಸಲಾಗಿತ್ತು.
ಏನಿದು ರಾಸಲೀಲೆ ಪ್ರಕರಣ:
ರಾಜ್ಯದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿಯವರು ಯುವತಿಯೊಬ್ಬರಿಗೆ ಕೆಪಿಟಿಸಿಎಲ್‌ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ರಾಸಲೀಲೆ ನಡೆಸಿರುವುದಕ್ಕೆ ಸಂಬಂಧಿಸಿದಂತೆ ನಾಗರಿಕ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ದಿನೇಶ್ ಕಲ್ಲಹಳ್ಳಿ ಪೊಲೀಸರಿಗೆ ದೂರು ನೀಡಿದ್ದರು. ತಮ್ಮ ಆರೋಪಕ್ಕೆ ಸಂಬಂಧಿಸಿದ ರಾಸಲೀಲೆಯ ವಿಡಿಯೋವನ್ನು ಬಿಡುಗಡೆಗೊಳಿಸಿದ್ದು, ರಾಜ್ಯ ರಾಜಕಾರಣದಲ್ಲಿ ಭಾರಿ ಸದ್ದು ಮಾಡುತ್ತಿದೆ.












Click it and Unblock the Notifications