ರಮೇಶ್ ಜಾರಕಿಹೊಳಿ 'ಸಿಡಿ' ಪ್ರಕರಣ: ಅಜ್ಞಾತ ಸ್ಥಳಕ್ಕೆ ಸಂತ್ರಸ್ತೆ ಪೋಷಕರು?

ಬೆಂಗಳೂರು, ಮಾ. 17: ರಮೇಶ್ ಜಾರಕಿಹೊಳಿ 'ಸಿಡಿ' ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ಸಲ್ಲಿಸಿದ್ದ ಸಂತ್ರಸ್ತ ಯುವತಿಯ ಪೋಷಕರು ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ ಎಂಬ ಮಾಹಿತಿ ಬಂದಿದೆ. ನಿನ್ನೆ ಬೆಳಗಾವಿಯ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದ ಯುವತಿ ಪೋಷಕರು, ಯುವತಿಯಂತೆಯೆ ವಿಡಿಯೋ ಒಂದನ್ನು ಬಿಡುಗಡೆ ಮಾಡಿದ್ದರು.

ತಮ್ಮ ಮಗಳು ಕೆಲವು ದಿನಗಳಿಂದ ಕಾಣೆಯಾಗಿದ್ದು, ಹುಡುಕಿ ಕೊಡುವಂತೆ ಪೊಲೀಸರಿಗೆ ದೂರು ನೀಡಿದ್ದರು. ಸಂತ್ರಸ್ತೆಯ ಪೋಷಕರು ಕೊಟ್ಟಿದ್ದ ದೂರು ಆಧರಿಸಿ, ಬೆಳಗಾವಿ ಎಪಿಎಂಸಿ ಪೊಲೀಸ್ ಠಾಣೆಯ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಜೊತೆಗೆ ಆ ಪ್ರಕರಣ ಕೂಡ ಎಸ್‌ಐಟಿಗೆ ಹಸ್ತಾಂತರವಾಗಿದೆ ಎಂಬ ಮಾಹಿತಿಯಿದೆ.

Ramesh Jarkiholi CD Row: Parents of the victim girl disappear after the FIR?

ಇದೀಗ ದೂರು ಕೊಟ್ಟಿದ್ದ ಪೋಷಕರ ಮೊಬೈಲ್ ಕೂಡ ಸ್ವಿಚ್ ಆಫ್ ಆಗಿದೆ ಎಂಬ ಮಾಹಿತಿ ಬಂದಿದೆ. ಜೊತೆಗೆ ಯುವತಿ ಪಾಲಕರು ಮತ್ತೆ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ ಎಂಬ ಮಾಹಿತಿ ಬಂದಿದೆ. ಹೀಗಾಗಿ 'ಸಿಡಿ' ಪ್ರಕರಣ ಮತ್ತೊಂದು ಹಂತದ ತಿರುವು ಪಡೆದುಕೊಂಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+