ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಮೇಶ್‌ ಒಬ್ಬ ಹಠವಾದಿ: ಸತೀಶ್ ಜಾರಕಿಹೊಳಿ ಹೇಳಿಕೆ

|
Google Oneindia Kannada News

ಬೆಳಗಾವಿ, ಡಿಸೆಂಬರ್ 28: ರಮೇಶ್ ಜಾರಕಿಹೊಳಿ ನನ್ನ ಮತ್ತು ಹೈಕಮಾಂಡ್ ಸಂಪರ್ಕಕ್ಕೆ ಸಿಗುತ್ತಿಲ್ಲ. ಅವರನ್ನು ಹುಡುಕುವ ಪ್ರಯತ್ನ ಮಾಡಿದ್ದೇನೆ. ಅವರೊಬ್ಬ ಹಠವಾದಿ ಎಂದು ಅವರ ಸಹೋದರ, ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ರಮೇಶ್ ಜಾರಕಿಹೊಳಿ ಪಕ್ಷದ ಹಿತದೃಷ್ಟಿಯಿಂದ ಅಸಮಾಧಾನ ತಣಿಸಿಕೊಳ್ಳಬೇಕಿದೆ. ಅವರು ಸಂಪರ್ಕಕ್ಕೆ ಸಿಕ್ಕ ಬಳಿಕ ಮಾತನಾಡುತ್ತೇನೆ, ಸಮಸ್ಯೆ ಇತ್ಯರ್ಥ ಆಗಲಿದೆ ಎಂದು ಸತೀಶ್ ತಿಳಿಸಿದ್ದಾರೆ.

'ಕೈ'ಗೆ ಸಿಗದ ರಮೇಶ್ ಜಾರಕಿಹೊಳಿ ಬಿಜೆಪಿ ತೆಕ್ಕೆಗೆ ಜಾರಿದರಾ?'ಕೈ'ಗೆ ಸಿಗದ ರಮೇಶ್ ಜಾರಕಿಹೊಳಿ ಬಿಜೆಪಿ ತೆಕ್ಕೆಗೆ ಜಾರಿದರಾ?

ತಮಗೆ ದೊರಕಿರುವ ಅರಣ್ಯ ಖಾತೆ ಮಹತ್ವದ್ದು. ಅರಣ್ಯ ಖಾತೆ ನೀಡಿರುವುದರಿಂದ ಅನ್ಯಾಯದ ಪ್ರಶ್ನೆಯೇ ಇಲ್ಲ. ಇದರಲ್ಲಿ ಕೆಲಸ ಮಾಡಲು ಅವಕಾಶವಿದೆ. ಸಾರ್ವಜನಿಕರಿಗೆ ಅನುಕೂಲ ಆಗುವ ಖಾತೆ ಇದು. ಇದರ ಬಗ್ಗೆ ತೃಪ್ತಿ ಇದೆ ಎಂದಿದ್ದಾರೆ.

Ramesh Jarkiholi is a stickler sathish jarkiholi congress siddaramaiah

ರಮೇಶ್ ಜಾರಕಿಹೊಳಿ ಬೆಳಗಾವಿಯಲ್ಲಿಯೇ ಇದ್ದಾರೆ. ಆದರೆ, ಫೋನಿಗೆ ಸಿಗುತ್ತಿಲ್ಲ. ಅವರು ಪ್ರಾಮಾಣಿಕ ವ್ಯಕ್ತಿ. ಅವರಲ್ಲಿ ಪಕ್ಷದ ವಿಚಾರದಲ್ಲಿ ಸ್ವಲ್ಪ ಅಸಮಾಧಾನವಿದೆ ಎಲ್ಲವೂ ಸರಿಹೋಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ರಮೇಶ ಜಾರಕಿಹೊಳಿ ಯಾವುದೇ ಬೇಡಿಕೆ ಇಟ್ಟಿಲ್ಲ: ಸತೀಶ ಜಾರಕಿಹೊಳಿರಮೇಶ ಜಾರಕಿಹೊಳಿ ಯಾವುದೇ ಬೇಡಿಕೆ ಇಟ್ಟಿಲ್ಲ: ಸತೀಶ ಜಾರಕಿಹೊಳಿ

ಈ ನಡುವೆ ಜಾರಕಿಹೊಳಿ ಸಹೋದರರ ಆಪ್ತರಾದ ಬೈಲಹೊಂಗಲ ಶಾಸಕ ಮಹಾಂತೇಶ್ ಕೌಜಲಗಿ, ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

English summary
Minister Sathish Jarkiholi said that, Ramesh Jarkiholi is a stickler and he is trying to speak to ramesh.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X