ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ; ಗೋಕಾಕ್‌ನಲ್ಲಿ ಪವರ್ ಕಟ್
ಬೆಳಗಾವಿ, ಮಾರ್ಚ್ 02; ಗೋಕಾಕ್ ಕ್ಷೇತ್ರದ ಬಿಜೆಪಿ ಶಾಸಕ, ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ರಾಜ್ಯ ರಾಜಕೀಯದಲ್ಲಿ ಮಂಗಳವಾರ ಸದ್ದು ಮಾಡಿದೆ. ಈ ಸುದ್ದಿ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದಂತೆ ಗೋಕಾಕ್‌ನಲ್ಲಿ ವಿದ್ಯುತ್ ಸಂಪರ್ಕ ಸ್ಥಗಿತಗೊಂಡಿದೆ.
ರಮೇಶ್ ಜಾರಕಿಹೊಳಿ ಬೆಳಗಾವಿಯ ಪ್ರಭಾವಿ ರಾಜಕೀಯ ನಾಯಕ ಎಂಬುದನ್ನು ಎಲ್ಲರೂ ಒಪ್ಪಲೇಬೇಕು. ಸಚಿವರು ಯುವತಿ ಜೊತೆ ರಾಸಲೀಲೆಯಲ್ಲಿ ತೊಡಗಿರುವ ಸಿಡಿ ಮಂಗಳವಾರ ಸಂಜೆ ಬಹಿರಂಗವಾಗಿದೆ.
ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಸಚಿವರ ವಿರುದ್ಧ ದೂರು ನೀಡಿದ್ದು, ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಯುವತಿ ಜೊತೆ ಸಚಿವರು ರಾಸಲೀಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಸಚಿವ ರಮೇಶ್ ಜಾರಕಿಹೊಳಿ ಅವರು ಮೈಸೂರು ಪ್ರವಾಸದಲ್ಲಿದ್ದರು. ರಾಸಲೀಲೆ ವಿಡಿಯೋ ಬಹಿರಂಗವಾಗುತ್ತಿದ್ದಂತೆ ಅವರು ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ. ಬೆಂಗಾವಲು ಪಡೆಯನ್ನೂ ಬಿಟ್ಟು ಅವರು ತೆರಳಿದ್ದಾರೆ.
ರಾಸಲೀಲೆ ವಿಡಿಯೋ ಬಹಿರಂಗವಾಗುತ್ತಿದ್ದಂತೆ ರಮೇಶ್ ಜಾರಕಿಹೊಳಿ ಪ್ರತಿನಿಧಿಸುವ ಗೋಕಾಕ್ ಕ್ಷೇತ್ರದಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿದೆ. ಗೋಕಾಕ್ ತಾಲೂಕಿನಾದ್ಯಂತ ಪವರ್ ಕಟ್ ಮಾಡಲಾಗಿದೆ.
2018ರ ಚುನಾವಣೆಯಲ್ಲಿ ಗೋಕಾಕ್‌ನಿಂದ ಕಾಂಗ್ರೆಸ್‌ನಿಂದ ಕಣಕ್ಕಿಳಿದು ಜಯಗಳಿಸಿದ್ದ ರಮೇಶ್ ಜಾರಕಿಹೊಳಿ ಬಳಿಕ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಬಿಜೆಪಿ ಸೇರಿ ಉಪ ಚುನಾವಣೆಯಲ್ಲಿ ಗೆದ್ದು ಯಡಿಯೂರಪ್ಪ ಸಂಪುಟದಲ್ಲಿ ಸಚಿವರಾಗಿದ್ದಾರೆ.












Click it and Unblock the Notifications