ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

'ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಇನ್ನು ಮಾತನಾಡುವುದಿಲ್ಲ'

By Gururaj
|
Google Oneindia Kannada News

ಬೆಳಗಾವಿ, ಸೆಪ್ಟೆಂಬರ್ 06 : 'ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಹದ್ದು ಬಸ್ತಿನಲ್ಲಿ ಇಡದಿದ್ದರೆ ನಾನು ಮತ್ತು ಸತೀಶ್ ಜಾರಕಿಹೊಳಿ ಕಠಿಣ ನಿರ್ಧಾರ ಕೈಗೊಳ್ಳುತ್ತೇವೆ. ಸಹೋದರ ಸತೀಶ್ ಜಾರಕಿಹೊಳಿ ನಿರ್ಣಯಕ್ಕೆ ನಾನು ಬದ್ಧ' ಎಂದು ಸಚಿವ ರಮೇಶ್ ಜಾರಕಿಹೊಳಿ ಹೇಳಿದರು.

ಸದಾ ವಿವಾದಕ್ಕೆ ಅಂಟಿಕೊಂಡಿರುವ ಲಕ್ಷ್ಮಿ ಹೆಬ್ಬಾಳ್ಕರ್ ಯಾರು? ಸದಾ ವಿವಾದಕ್ಕೆ ಅಂಟಿಕೊಂಡಿರುವ ಲಕ್ಷ್ಮಿ ಹೆಬ್ಬಾಳ್ಕರ್ ಯಾರು?

ಪೌರಾಡಳಿತ ಸಚಿವ ರಮೇಶ್ ಜಾರಕಿಹೊಳಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬೆಳಗಾವಿ ಜಿಲ್ಲಾ ಕಾಂಗ್ರೆಸ್‌ನಲ್ಲಿ ಭಿನ್ನಮತ ಭುಗಿಲೆದ್ದಿದೆ. ಅದು ಹೈಕಮಾಂಡ್ ಮಟ್ಟದ ತನಕವೂ ಹೋಗಿದೆ. ಸೆ.7ರಂದು ಬೆಳಗಾವಿ ಪಿಎಲ್‌ಡಿ ಬ್ಯಾಂಕ್ ಚುನಾವಣೆ ನಡೆಯಲಿದೆ.

ಬೆಳಗಾವಿ ಕಾಂಗ್ರೆಸ್ ಅಸಮಾಧಾನ : ರಮೇಶ್ v/s ಡಿ.ಕೆ.ಶಿವಕುಮಾರ್!ಬೆಳಗಾವಿ ಕಾಂಗ್ರೆಸ್ ಅಸಮಾಧಾನ : ರಮೇಶ್ v/s ಡಿ.ಕೆ.ಶಿವಕುಮಾರ್!

ಗುರುವಾರ ಬೆಳಗಾವಿಯಲ್ಲಿ ಮಾತನಾಡಿದ ಸಚಿವ ರಮೇಶ್ ಜಾರಕಿಹೊಳಿ ಅವರು, 'ಲಕ್ಷ್ಮೀ ಹೆಬ್ಬಾಳ್ಕರ್ ಇಷ್ಟೊಂದು ಕೀಳುಮಟ್ಟಕ್ಕೆ ಇಳಿದು ಜಾರಕಿಹೊಳಿ ಕುಟುಂಬದ ವಿರುದ್ದ ಅಪಪ್ರಚಾರ ಮಾಡುತ್ತಿರುವುದು ದುರ್ದೈವ. ಇನ್ನು ಮುಂದೆ ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ಮಾತನಾಡುವುದಿಲ್ಲ' ಎಂದು ತಿಳಿಸಿದರು.

ಬೆಳಗಾವಿ ಕಾಂಗ್ರೆಸ್‌ ಸಂಘರ್ಷ : ಇನ್ನೂ ಶಮನವಾಗದ ಬಿಕ್ಕಟ್ಟು!ಬೆಳಗಾವಿ ಕಾಂಗ್ರೆಸ್‌ ಸಂಘರ್ಷ : ಇನ್ನೂ ಶಮನವಾಗದ ಬಿಕ್ಕಟ್ಟು!

'ಸಹಾಯ ಮಾಡಿದ್ದನ್ನು ಯಾರಿಗೂ ಹೇಳಬಾರದು. ಆದರೆ, ಅನಿವಾರ್ಯವಾಗಿ ಹೇಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಲಕ್ಷ್ಮೀ ಹೆಬ್ಬಾಳ್ಕರ್ ನಮಗೆ ಸಾಲ ಕೊಟ್ಟಿದ್ದಾರೆ ಎನ್ನುವುದು ಊಹಾಪೋಹ' ಎಂದು ಸ್ಪಷ್ಟಪಡಿಸಿದರು.

ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಬೆನ್ನಿಗೆ ನಿಂತ ವೀರಶೈವ ಮಹಾಸಭಾ!ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಬೆನ್ನಿಗೆ ನಿಂತ ವೀರಶೈವ ಮಹಾಸಭಾ!

ಇತಿಹಾಸ ಏನು ಎಂಬುದು ಗೊತ್ತಿಲ್ಲ

ಇತಿಹಾಸ ಏನು ಎಂಬುದು ಗೊತ್ತಿಲ್ಲ

'ಲಕ್ಷ್ಮೀ ಹೆಬ್ಬಾಳ್ಕರ್ ಅವರು 2004ರಲ್ಲಿ ರಾಜಕೀಯಕ್ಕೆ ಬಂದಿದ್ದಾರೆ. ಅದಕ್ಕಿಂತ ಮೊದಲು ಏನಿದ್ದರೂ ಅವರ ಇತಿಹಾಸ ಏನೆಂದು ಗೊತ್ತಿಲ್ಲ. ಅವರನ್ನು ಬೆಳಗಾವಿ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಮಾಡಿದ್ದು ಸತೀಶ್ ಜಾರಕಿಹೊಳಿ' ಎಂದು ರಮೇಶ್ ಜಾರಕಿಹೊಳಿ ಹೇಳಿದರು.

'ಸಹಾಯ ಮಾಡಿದ್ದನ್ನು ಯಾರಿಗೂ ಹೇಳಬಾರದು. ಆದರೆ, ಈಗ ಅನಿವಾರ್ಯವಾಗಿ ಹೇಳುವ ಸ್ಥಿತಿ ನಿರ್ಮಾಣವಾಗಿದೆ' ಎಂದು ರಮೇಶ್ ಜಾಕಿಹೊಳಿ ವಾಗ್ದಾಳಿ ನಡೆಸಿದರು.

ಡಿ.ಕೆ.ಶಿವಕುಮಾರ್ ಸ್ನೇಹಿತರು

ಡಿ.ಕೆ.ಶಿವಕುಮಾರ್ ಸ್ನೇಹಿತರು

'ಸಚಿವ ಡಿ.ಕೆ.ಶಿವಕುಮಾರ್ ಮತ್ತು ನಾನು ಸ್ನೇಹಿತರು. 2004ರಲ್ಲಿಯೇ ಅವರ ಪರವಾಗಿ ಬ್ಯಾಟಿಂಗ್ ಮಾಡಿದ್ದೇನೆ. ಅವರು ನನಗೆ ಸಚಿವರಾಗಲು ಸಹಾಯ ಮಾಡಿದ್ದಾರೆ. ಕೊಲ್ಹಾಪುರ ದೇವರ ಆಣೆಗೂ ಇದನ್ನು ಎಲ್ಲಿ ಬೇಕಾದರೂ ಹೇಳಲು ಸಿದ್ಧ' ಎಂದು ರಮೇಶ್ ಜಾರಕಿಹೊಳಿ ಹೇಳಿದರು.

ಕೀಳು ಪ್ರಚಾರ ಮಾಡುವುದು ಸರಿಯಲ್ಲ

ಕೀಳು ಪ್ರಚಾರ ಮಾಡುವುದು ಸರಿಯಲ್ಲ

'ಲಕ್ಷ್ಮೀ ಹೆಬ್ಬಾಳ್ಕರ್ ಅವರು ಜಾರಕಿಹೊಳಿ ಕುಟುಂಬದ ಬಗ್ಗೆ ಅವಹೇಳನ ಮಾಡಲು ಇಷ್ಟು ಕೀಳುಮಟ್ಟಕ್ಕೆ ಇಳಿದಿರುವುದು ಸರಿಯಲ್ಲ. ಇನ್ನು ಮುಂದೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಮಾತನಾಡುವುದಿಲ್ಲ. ಅವರು ನಮಗೆ ಸಾಲ ಕೊಟ್ಟಿದ್ದಾರೆ ಎಂಬುದು ಊಹಾಪೋಹ' ಎಂದು ರಮೇಶ್ ಜಾರಕಿಹೊಳಿ ಹೇಳಿದರು.

ಉಗ್ರ ನಿರ್ಧಾರ ಕೈಗೊಳ್ಳುತ್ತೇವೆ

ಉಗ್ರ ನಿರ್ಧಾರ ಕೈಗೊಳ್ಳುತ್ತೇವೆ

'ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಹದ್ದು ಬಸ್ತಿನಲ್ಲಿ ಇಡದಿದ್ದರೆ ನಾನು ಮತ್ತು ಸತೀಶ್ ಜಾರಕಿಹೊಳಿ ಕಠಿಣ ನಿರ್ಧಾರವನ್ನು ಕೈಗೊಳ್ಳುತ್ತೇವೆ. ಶಾಸಕ ಸತೀಶ್ ಜಾರಕಿಹೊಳಿಗೆ ಅವಮಾನ ಆದರೆ, ನಾವು ಅವರ ಜೊತೆ ಇರುತ್ತೇವೆ. ಸತೀಶ್ ಜಾರಕಿಹೊಳಿ ಅವರು ಕೈಗೊಳ್ಳುವ ನಿರ್ಧಾರಕ್ಕೆ ನಾನು ಬದ್ಧ' ಎಂದು ರಮೇಶ್ ಜಾರಕಿಹೊಳಿ ತಿಳಿಸಿದರು.

ಸೆ.7ರಂದು ಚುನಾವಣೆ

ಸೆ.7ರಂದು ಚುನಾವಣೆ

ಬೆಳಗಾವಿ ಪಿಎಲ್‌ಡಿ ಬ್ಯಾಂಕ್ ಚುನಾವಣೆ ವಿಚಾರದಲ್ಲಿ ಬೆಳಗಾವಿ ಕಾಂಗ್ರೆಸ್‌ನಲ್ಲಿ ಭಿನ್ನಮತ ಉಂಟಾಗಿದೆ. ಸೆ.7ರಂದು ಚುನಾವಣೆ ನಡೆಯಲಿದೆ.

ಈಗಾಗಲೇ 14 ನಿರ್ದೇಶಕರು ಬ್ಯಾಂಕಿಗೆ ಆಯ್ಕೆಯಾಗಿದ್ದಾರೆ. ಅಧ್ಯಕ್ಷ ಮತ್ತು ಉಪಾಧ್ಯಕ್ಷರನ್ನು ಆಯ್ಕೆ ಮಾಡಲು ಚುನಾವಣೆ ನಡೆಯಲಿದೆ.

English summary
Municipality and Local Bodies Minister Ramesh Jarkiholi attacked against Belagavi Rural MLA Laxmi Hebbalkar. Belagavi Congress witnessed for dispute between Laxmi Hebbalkar and Satish Jarkiholi, Ramesh Jarkiholi over control on district politics.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X