ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಅ.5ರಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಘಟಿಕೋತ್ಸವ

|
Google Oneindia Kannada News

ಬೆಳಗಾವಿ, ಅಕ್ಟೋಬರ್ 04: ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ 8ನೇ ಘಟಿಕೋತ್ಸವ ಅಕ್ಟೋಬರ್ 5ರಂದು ನಡೆಯಲಿದೆ. ರಾಜ್ಯಪಾಲ ವಜೂಭಾಯ್ ವಾಲಾ ಘಟಿಕೋತ್ಸವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.

ರಾಣಿಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಎಂ. ರಾಮಚಂದ್ರ ಗೌಡ ಈ ಕುರಿತು ಮಾಹಿತಿ ನೀಡಿದ್ದಾರೆ. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಘಟಿಕೋತ್ಸವ ಕಾರ್ಯಕ್ರಮ ನಡೆಯಲಿದೆ. ಉಪ ಮುಖ್ಯಮಂತ್ರಿ ಹಾಗೂ ಸಹ ಕುಲಾಧಿಪತಿಗಳಾದ ಅಶ್ವಥ್ ನಾರಾಯಣ ಅಥಿತಿಗಳಾಗಿ ಆಗಮಿಸಲಿದ್ದಾರೆ.

ಆರೋಗ್ಯ ಇಲಾಖೆ ನೇಮಕಾತಿ; ಅಕ್ಟೋಬರ್ 15ರ ತನಕ ಅರ್ಜಿ ಹಾಕಿಆರೋಗ್ಯ ಇಲಾಖೆ ನೇಮಕಾತಿ; ಅಕ್ಟೋಬರ್ 15ರ ತನಕ ಅರ್ಜಿ ಹಾಕಿ

ಘಟಿಕೋತ್ಸವ ಭಾಷಣವನ್ನು ಬೆಂಗಳೂರಿನ ನ್ಯಾಕ್ ನಿರ್ದೇಶಕರಾದ ಪ್ರೊ.ಎಸ್.ಸಿ. ಶರ್ಮಾ ಮಾಡಲಿದ್ದಾರೆ.
ಘಟಿಕೋತ್ಸವದಲ್ಲಿ ಸ್ನಾತಕ ತರಗತಿಗೆ 11 ಸುವರ್ಣ ಪದಕ, ಸ್ನಾತಕೋತ್ತರ ತರಗತಿಗಳಿಗೆ 22 ಸುವರ್ಣ ಪದಕ ಮತ್ತು 79 ಪಿಹೆಚ್‌ಡಿ ಪದವಿಗಳನ್ನು ಪ್ರದಾನ ಮಾಡಲಾಗುತ್ತದೆ.

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ನೇಮಕಾತಿ ಸ್ಥಗಿತ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ನೇಮಕಾತಿ ಸ್ಥಗಿತ

Rani Channamma University Convocation On October 5

100 ಜನರಿಗೆ ಮಾತ್ರ ಅವಕಾಶ: ಕೋವಿಡ್ ಭೀತಿಯ ಹಿನ್ನೆಲೆಯಲ್ಲಿ ಘಟಿಕೋತ್ಸವ ನಡೆಯುವ ಸಭಾಂಗಣದೊಳಗೆ ಕೇವಲ 100 ಜನರಿಗೆ ಮಾತ್ರ ಅವಕಾಶವಿದೆ. ಪಿಹೆಚ್‌ಡಿ ಪದವಿ ಪಡೆದವರಲ್ಲಿ ಕೆಲವರಿಗೆ ಮಾತ್ರ ಸಾಂಕೇತಿಕವಾಗಿ ಪದವಿ ಪತ್ರ ಪ್ರದಾನ ಮಾಡಿ, ಉಳಿದವರಿಗೆ ವಿಶ್ವವಿದ್ಯಾಲಯ ಮಟ್ಟದಲ್ಲಿ ಪದವಿ ಪ್ರದಾನ ಮಾಡಲಾಗುತ್ತದೆ.

ಬೆಳಗಾವಿ ‌ಪೊಲೀಸರಿಂದ ಖೆಡ್ಡಾಗೆ ಬಿದ್ದ ಅಂತರರಾಜ್ಯ ಗಾಂಜಾ ಪೆಡ್ಲರ್ ಬೆಳಗಾವಿ ‌ಪೊಲೀಸರಿಂದ ಖೆಡ್ಡಾಗೆ ಬಿದ್ದ ಅಂತರರಾಜ್ಯ ಗಾಂಜಾ ಪೆಡ್ಲರ್

ಗೌರವ ಡಾಕ್ಟರೇಟ್: ಕ್ರೀಡಾ ಮತ್ತು ಸಮಾಜ ಸೇವೆಯ ಕ್ಷೇತ್ರಕ್ಕಾಗಿ ಗೋವಿಂದರಾಜ್, ಔದ್ಯೋಗಿಕ ಮತ್ತು ಸಾಂಸ್ಥಿಕ ಹಣಕಾಸು ಕ್ಷೇತ್ರಕ್ಕಾಗಿ ಮೋಹನದಾಸ ಪೈ ಹಾಗೂ ಧಾರ್ಮಿಕ ಮತ್ತು ಶೈಕ್ಷಣಿಕ ಕ್ಷೇತ್ರಕ್ಕಾಗಿ ಶ್ರೀಮನ್ ಮಹಾರಾಜ ನಿರಂಜನ ಜಗದ್ಗುರು ರಾಜಯೋಗೀಂದ್ರ ಮಹಾಸ್ವಾಮಿಗಳು ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗುತ್ತದೆ.

ನೇರಪ್ರಸಾರ: ಘಟಿಕೋತ್ಸವ ಕಾರ್ಯಕ್ರಮಕ್ಕೆ 100 ಜನರಿಗೆ ಮಾತ್ರ ಭಾಗವಹಿಸಲು ಅನುಮತಿ ಇದೆ. ಉಳಿದವರು YouTube ಹಾಗೂ Facebook ಲಿಂಕ್ ಬಳಸಿ live ನಲ್ಲಿ ಘಟಿಕೋತ್ಸವ ವೀಕ್ಷಣೆ ಮಾಡಬಹುದು.

English summary
Rani Channamma university 8th convocation will be held on October 5, 2020 said Prof. M. Ramachandra Gowda vice chancellor of university, Belagavi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X