'ಸತೀಶ ಜಾರಕಿಹೊಳಿ ಬಣದ ಮೊಹಿತೆ- ಸುಕುಮಾರಗೆ ಕಾಂಗ್ರೆಸ್ ಟಿಕೆಟ್ ನೀಡಿ'
ಬೆಳಗಾವಿ, ಮಾರ್ಚ್ 30: ರಾಯಬಾಗ ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಗೆ ಒತ್ತಾಯ ಹೆಚ್ಚಾಗಿದೆ. ಬೆಳಗಾವಿ ಜಿಲ್ಲೆಯ ರಾಯಬಾಗ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಮುಖಂಡ ಮಹಾವೀರ ಮೊಹಿತೆ ಅಥವಾ ಕಳೆದ ಬಾರಿಯ ಪರಾಜಿತ ಅಭ್ಯರ್ಥಿ ಸುಕುಮಾರ ಕಿರಣಗಿ ಅವರಿಗೆ ಟಿಕೆಟ್ ನೀಡಲು ಒತ್ತಾಯ ಮಾಡಲಾಗಿದೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಚುನಾವಣೆಯ ಮುಖ್ಯ ದಿನಾಂಕಗಳು
ಮಹಾವೀರ ಅವರು ಕಾಂಗ್ರೆಸ್ ನ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ರಾಜ್ಯ ಸಂಚಾಲಕ ಹಾಗೂ ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ. ಇದರ ಜತೆಗೆ ಲೋಕೋಪಯೋಗಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರಿಗೆ ಪರಮಾಪ್ತರು.
ಇನ್ನು ಸುಕುಮಾರ ಅವರು ಕಳೆದ ಬಾರಿ ವಿಧಾನಸಭೆ ಚುನಾವಣೆಯಲ್ಲಿ ರಾಯಬಾಗ ಕ್ಷೇತ್ರದಿಂದ ಪರಾಜಿತ ಅಭ್ಯರ್ಥಿ. ಆದ್ದರಿಂದ ಮೊಹಿತೆ ಅಥವಾ ಕಿರಣಗಿ ಅವರಿಗೆ ಟಿಕೆಟ್ ನೀಡಲು ಒತ್ತಾಯ ಮಾಡಲಾಗಿದೆ. ಚಿಕ್ಕೋಡಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕಾಂಗ್ರೆಸ್ ಮುಖಂಡರು ಈ ನಿರ್ಧಾರ ಮಾಡಿದ್ದು, ಇಬ್ಬರಲ್ಲಿ ಒಬ್ಬರಿಗೆ ಕಾಂಗ್ರೆಸ್ ಟಿಕೆಟ್ ನೀಡುವಂತೆ ಮನವಿ ಸಲ್ಲಿಸಲು ತೀರ್ಮಾನಿಸಿದ್ದಾರೆ.

ರಾಯಬಾಗ ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ, ಕಾಡಾ ಅಧ್ಯಕ್ಷ ಈರಗೌಡ ಪಾಟೀಲ, ರಾಯಬಾಗ ತಾಲೂಕು ಮಹಿಳಾ ಘಟಕದ ಅಧ್ಯಕ್ಷೆ ದೀಪಾ ಮಂಟೂರ ಚಿಕ್ಕೋಡಿಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಸುದ್ದಿಗೋಷ್ಠಿ ನಡೆಸಿ, ಬೆಳಗಾವಿ ಜಿಲ್ಲೆಯಲ್ಲಿ ಟಿಕೆಟ್ ಹಂಚಿಕೆಯಲ್ಲಿ ರಮೇಶ ಜಾರಕಿಹೊಳಿ ಕೈ ಮೇಲುಗೈ ಆಗಿದೆ ಎಂದು ಆರೋಪ ಮಾಡಿದರು.
ಅಂದಹಾಗೆ ರಮೇಶ ಜಾರಕಿಹೊಳಿ ಅವರು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಎಐಸಿಸಿ ಕಾರ್ಯದರ್ಶಿ ಸತೀಶ ಜಾರಕಿಹೊಳಿ ಸಹೋದರ. ಸತೀಶ ಜೊತೆ ಗುರುತಿಸಿಕೊಂಡಿದ್ದ ಮಹಾವೀರ ಮೊಹಿತೆ ಹಾಗೂ ಸುಕುಮಾರ ಕಿರಣಗಿಗೆ ಟಿಕೆಟ್ ಕೈ ತಪ್ಪುವ ಆತಂಕ ಇದೆ. ಆದ್ದರಿಂದ ಇಬ್ಬರಲ್ಲಿ ಒಬ್ಬರಿಗೆ ಕಾಂಗ್ರೆಸ್ ಟಿಕೆಟ್ ನೀಡಲು ಕೆಪಿಸಿಸಿಗೆ ಮನವಿ ಸಲ್ಲಿಸಲು ನಿರ್ಧರಿಸಲಾಗಿದೆ.












Click it and Unblock the Notifications