ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೋವಿಡ್ ಹಣ ದುರುಪಯೋಗ ಆರೋಪ; ರಾಯಬಾಗ ತಹಶೀಲ್ದಾರ್ ಅಮಾನತು

|
Google Oneindia Kannada News

ಬೆಳಗಾವಿ, ನವೆಂಬರ್ 13: ಕೊರೊನಾ ಸೋಂಕಿನ ನಿರ್ವಹಣೆಗೆಂದು ಸರ್ಕಾರದಿಂದ ನೀಡಲಾಗಿದ್ದ ಹಣವನ್ನು ದುರುಪಯೋಗಪಡಿಸಿಕೊಂಡ ಆರೋಪದಡಿ ತಹಶೀಲ್ದಾರ್ ಅಮಾನತು ಮಾಡಲಾಗಿದೆ.

ಬೆಳಗಾವಿ ಜಿಲ್ಲೆಯ ರಾಯಬಾಗ ತಹಶೀಲ್ದಾರ್ ಚಂದ್ರಕಾಂತ ಭಜಂತ್ರಿ ಅವರನ್ನು ಅಮಾನತುಗೊಳಿಸಿ ಸರ್ಕಾರದ ಕಂದಾಯ ಇಲಾಖೆಯ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.

ಪ್ರವಾಹಕ್ಕೆ ಒಬ್ಬ ಅಧಿಕಾರಿ, ಇಬ್ಬರು ಸಿಬ್ಬಂದಿ ತಲೆದಂಡ!ಪ್ರವಾಹಕ್ಕೆ ಒಬ್ಬ ಅಧಿಕಾರಿ, ಇಬ್ಬರು ಸಿಬ್ಬಂದಿ ತಲೆದಂಡ!

ಕೊರೊನಾ ಸೋಂಕಿನ ನಿರ್ವಹಣೆ ಸಂದರ್ಭದಲ್ಲಿ ಲಕ್ಷಾಂತರ ರೂಪಾಯಿ ಹಣವನ್ನು ಅನಗತ್ಯವಾಗಿ ಖರ್ಚು ಮಾಡಿದ ಹಾಗೂ ಯಾವುದೇ ಕೆಲಸಕ್ಕೂ ಟಾಸ್ಕ್ ಫೋರ್ಸ್ ಸಮಿತಿಯ ಅನುಮೋದನೆಯನ್ನು ಪಡೆಯದೆ ಹಣ ದುರುಪಯೋಗ ಮಾಡಿಕೊಂಡ ಅಧಿಕಾರಿಯ ವಿರುದ್ಧ ಸರ್ಕಾರ ಯಾವ ರೀತಿಯ ಕ್ರಮವನ್ನು ಕೈಗೊಂಡಿದೆ ಎಂಬ ಕುರಿತು ಅಧಿವೇಶನದಲ್ಲಿ ಚರ್ಚಿಸಲಾಗಿತ್ತು. ವಿಧಾನಸಭೆ ಅಧಿವೇಶನದಲ್ಲಿ ಬೆಳಗಾವಿ ಜಿಲ್ಲೆಯ ಕುಡಚಿ ಬಿಜೆಪಿ ಶಾಸಕ ಪಿ.ರಾಜೀವ್ ನಿಲುವಳಿ ಸೂಚನೆ ಮಂಡಿಸಿದ್ದರು.

Belagavi: Rayabaga Tahsildar Suspended For Misusing Covid 19 Fund

ಈ ಸಂಬಂಧ ಜಿಲ್ಲಾಧಿಕಾರಿ ಎಂ.ಜಿ ಹಿರೇಮಠ ಅವರು ಚಿಕ್ಕೋಡಿ ಎಸಿ ನೇತೃತ್ವದಲ್ಲಿ ತನಿಖೆಗೆ ಆದೇಶಿಸಿದ್ದರು. ತನಿಖಾ ವರದಿಯಲ್ಲಿ, ಅವರು ಕರ್ತವ್ಯಲೋಪ ಎಸಗಿರುವುದು ಸಾಬೀತಾದ ಹಿನ್ನೆಲೆಯಲ್ಲಿ ತಹಶೀಲ್ದಾರ್ ಚಂದ್ರಕಾಂತ ಭಜಂತ್ರಿಯನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

English summary
Rayabaga Tahsildar of Belagavi has been suspended for allegedly misusing covid fund,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X