ರಾಯಣ್ಣ ಪ್ರತಿಮೆ ಭಗ್ನ ಪ್ರಕರಣ: ಪುಂಡರ ವಿರುದ್ಧ ಕಠಿಣ ಕ್ರಮಕ್ಕೆ ಆದೇಶ
ಬೆಂಗಳೂರು, ಡಿಸೆಂಬರ್ 19: ಬೆಳಗಾವಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರವರ ಪ್ರತಿಮೆ ಭಗ್ನಗೊಳಿಸಿ, ಪುಂಡಾಟಿಕೆ ನಡೆಸಿದವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುತ್ತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, 'ಗಡಿ ಜಿಲ್ಲೆಯಲ್ಲಿ ಕನ್ನಡ ಹಾಗೂ ಮರಾಠಿ ಮಾತನಾಡುವ ಜನತೆ, ಅತ್ಯಂತ ಅನ್ಯೋನ್ಯತೆ, ಪ್ರೀತಿ ಹಾಗೂ ಸಾಮರಸ್ಯದಿಂದ ಇದ್ದಾರೆ. ರಾಯಣ್ಣ ಹಾಗೂ ಶಿವಾಜಿ ಯವರಂಥ ಮಹನೀಯರ ಬಗ್ಗೆ ಎಳ್ಳಷ್ಟೂ ಗೌರವ ವಿಲ್ಲದ ದುಷ್ಕರ್ಮಿಗಳ ಒಂದೇ ಉದ್ದೇಶ, ಸಮಾಜದಲ್ಲಿನ ನೆಮ್ಮದಿಗೆ ಭಂಗ ತರುವುದಾಗಿದ್ದು, ಅವರನ್ನು ಬಗ್ಗು ಬಡಿಯಲಾಗುವುದು ಎಂದು ಹೇಳಿದ್ದಾರೆ. ಬೆಳಗಾವಿ ಹಾಗೂ ಬೆಂಗಳೂರಿನ ಘಟನೆಗಳ ಬಗ್ಗೆ, ಸಂಬಂಧಿಸಿದ ಪೊಲೀಸ್ ಹಾಗೂ ಇತರ ಅಧಿಕಾರಿಗಳೊಂದಿಗೆ ಸತತ ಸಂಪರ್ಕದಲ್ಲಿದ್ದೇನೆ. ಶಾಂತಿ ಹಾಗೂ ಸುವ್ಯವಸ್ಥೆ ಕಾಪಾಡಿಕೊಳ್ಳಲು ಎಲ್ಲಾ ಅಗತ್ಯ ಕ್ರಮಗಳನ್ನು, ತೆಗೆದುಕೊಳ್ಳಲು ನಿರ್ದೇಶಿಸಿದ್ದೇನೆ' ಎಂದಿದ್ದಾರೆ.
ಮಹಾರಾಷ್ಟ್ರದಲ್ಲಿ ಎಂಇಎಸ್ ಪುಂಡರು ಕನ್ನಡ ಧ್ವಜಕ್ಕೆ ಬೆಂಕಿ ಹಾಕಿ ಕನ್ನಡಿಗರ ತಾಳ್ಮೆಯನ್ನು ಕೆದಕಿದ ಬೆನ್ನಲ್ಲೇ ಇದೀಗ ಮತ್ತೊಮ್ಮೆ ಇಂತಹದೇ ಘಟನೆ ಪುನರಾವರ್ತಿಸಿದೆ. ಬೆಳಗಾವಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆಯನ್ನು ಕಿಡಿಗೇಡಿಗಳು ಶುಕ್ರವಾರ ರಾತ್ರಿ ವಿರೂಪಗೊಳಿಸಿದ್ದು, ಇದರಿಂದ ಸ್ವಾಭಿಮಾನಿ ಕನ್ನಡಿಗರ ತಾಳ್ಮೆಗೆ ಮತ್ತೆ ಪೆಟ್ಟು ಬಿದ್ದಿದೆ. ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆಯನ್ನು ವಿರೂಪಗೊಳಿಸಿರುವುದರಿಂದ ಬೆಳಗಾವಿ ನಗರದಲ್ಲಿ ಉದ್ವಿಗ್ನತೆ ಹೆಚ್ಚಾಗಿದೆ.

ಕಿಡಿಗೇಡಿಗಳು ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆಗೆ ರಾಡ್‌ನಿಂದ ಹೊಡೆದು ಭಗ್ನಗೊಳಿಸಿದ್ದಾರೆ. ಮೂರ್ತಿಯನ್ನು ಹೊಡೆದು ಭಗ್ನಗೊಳಿಸುತ್ತಿರುವ ಶಬ್ದ ಕೇಳಿದಾಗ ಸ್ಥಳೀಯರು ಮನೆಯಿಂದ ಹೊರಗೆ ಬಂದಿದ್ದು, ಇದನ್ನು ಗಮನಿಸಿದ ದುಷ್ಕರ್ಮಿಗಳು ತಕ್ಷಣ ಸ್ಥಳದಿಂದ ಓಡಿ ಹೋಗಿದ್ದಾರೆ ಎಂದು ತಿಳಿದು ಬಂದಿದೆ.
ಮುಖದ ಭಾಗವನ್ನು ವಿರೂಪಗೊಳಿಸಿದ್ದಾರೆ. ಇದಕ್ಕಾಗಿ ತಲ್ವಾರ್ ಬಳಸಿದ್ದಾರೆ ಎನ್ನಲಾಗಿದೆ. ಪ್ರತಿಮೆಯಲ್ಲಿದ್ದ ಖಡ್ಗವನ್ನು ಕಿತ್ತು ಹಾಕಿದ್ದಾರೆ ಎಂದು ತಿಳಿದುಬಂದಿದೆ. ಬೆಳಗಾವಿಯಲ್ಲಿ ರಾಯಣ್ಣ ಪ್ರತಿಮೆ ಧ್ವಂಸ ಮಾಡಿದವರು ಯಾರೇ ಆಗಿದ್ದರೂ ಮುಲಾಜು ಇಲ್ಲದೆ ಅವರನ್ನು ವಶಕ್ಕೆ ಪಡೆದು ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ ನೀಡಿದ್ದಾರೆ.
ಇನ್ನೂ ಈ ಬಗ್ಗೆ ಇಂದು ಪ್ರತಿಕ್ರಿಸಿದ ಸಿಎಂ ಬಸವರಾಜ್ ಬೊಮ್ಮಾಯಿ, 'ಎರಡು ದಿನದಿಂದ ದೇಶ ಭಕ್ತರ ಮೂರ್ತಿಗಳನ್ನ ಭಂಗ ಮಾಡೋ ವಿಚಾರದಲ್ಲಿ ಕೆಲವರು ಕಾನೂನನ್ನ ಕೈಗೆತ್ತಿಕೊಳ್ಳೋ ಕೆಲಸ ಮಾಡ್ತಿದ್ದಾರೆ. ಛತ್ರಪತಿ ಶಿವಾಜಿ ಮಹಾರಾಜ, ಕಿತ್ತೂರು ರಾಣಿ ಚೆನ್ನಮ್ಮ, ವೀರ ಸಂಗೊಳ್ಳಿ ರಾಯಣ್ಣ ಅವರು ದೇಶ ಭಕ್ತರು. ದೇಶಕ್ಕಾಗಿ ಹೋರಾಟ ಮಾಡಿ ಪ್ರಾಣ ತ್ಯಾಗ ಮಾಡಿದವರು. ಅವ್ರನ್ನ ಯಾವುದೇ ಒಂದು ಭಾಷೆಗೆ ಅಥವಾ ಸಮುದಾಯಕ್ಕೆ ಸೀಮಿತ ಮಾಡೋದಕ್ಕೆ ಆಗೋಲ್ಲ' ಎಂದಿದ್ದಾರೆ.
ಈ ದೇಶಭಕ್ತರ ಹೆಸರಿನಲ್ಲಿ ವಿಭಜಿಸುವ ಕೃತ್ಯವನ್ನು ಸಂಪೂರ್ಣವಾಗಿ ಖಂಡಿಸುತ್ತೇನೆ. ಈಗಾಗಲೇ ಗೃಹ ಮಂತ್ರಿಗಳಿಗೆ ಸೂಚನೆ ನೀಡಿದ್ದೇನೆ. ಈಗಾಗಲೇ ಬೆಂಗಳೂರು ಮತ್ತು ಬೆಳಗಾವಿಯಲ್ಲಿ ಅನೇಕರನ್ನ ಬಂಧಿಸಲಾಗಿದೆ. ಕಾನೂನಿನ ಅಡಿಯಲ್ಲಿ ಕಠಿಣ ಕ್ರಮ ಕೈಗೊಳ್ಳವಂತೆ ಸೂಚನೆ ನೀಡಿದ್ದೇನೆ. ಅದರಿಂದ ಜನ ಈ ಭಾವನಾತ್ಮಕ ವಿಚಾರಗಳಿಗೆ ಕಿವಿಗೊಡದೇ ಎರಡು ರಾಜ್ಯದ ನಡುವಿರುವ ಬಾಂಧವ್ಯವನ್ನ ಮುಂದುವರೆಸಿಕೊಂಡು ಹೋಗಬೇಕು. ಈ ದೇಶ ಭಕ್ತರು ಎಲ್ಲಿರಿಗೂ ಸೇರಿದವರು. ಇವ್ರ ಬಗ್ಗೆ ಅಪಾರ ಗೌರವ ವಿದೆ. ಕಾನೂನನ್ನು ಕೈಗೆತ್ತಿಕೊಂಡವರ ಮೇಲೆ ಕಠಿಣ ಕ್ರಮ ಕೈಗೊಳ್ಳೋದು ಶತಃಸಿದ್ದ. ಈಗಾಗಲೇ ಬೆಳಗಾವಿ ಹಾಗೂ ಬೆಂಗಳೂರು ಎರಡೂ ಕಡೆ ಪೊಲೀಸ್ರು ಆರೋಪಿಗಳನ್ನು ಬಂಧಿಸಿದ್ದಾರೆ. ಇನ್ನೂ ಕೆಲವರ ಬಂಧನವಾಗುತ್ತೆ ಎಂದು ಕಿಡಿ ಕಾರಿದ್ದಾರೆ.
ಸಂಘಟನೆಗಳ ನಿಷೇಧ ವಿಚಾರವಾಗಿ ಮಾತನಾಡಿದ ಅವರು, ಕಾನೂನಿನ ಪ್ರಕಾರ ಏನ್ ಕ್ರಮ ಕೈಗೊಳ್ಳಬಹುದು ಅದನ್ನ ಕೈಗೊಳ್ಳುತ್ತೇವೆ. ಬೆಂಗಳೂರಿನಲ್ಲಿ, ಬೆಳಗಾವಿಯಲ್ಲಿ 27 ಜನರನ್ನ ಬಂಧಿಸಿಲಾಗಿದೆ ಎಂದರು. ಶಿವಾಜಿ ಪ್ರತಿಮೆಗೆ ಮಸಿ ಬಳಿದ ಪ್ರಕರಣದಲ್ಲಿ ಪ್ರತಿಮೆಗೆ ಮಸಿ ಬಳಿದ ದುಷ್ಕರ್ಮಿಗಳು ಖಾಕಿ ಬಲೆಗೆ ಬಿದ್ದಿದ್ದಾರೆ. ಎರಡು ವಿಶೇಷ ತಂಡ ಮಾಡಿ ಆರೋಪಿಗಳ ಪತ್ತೆ ಮಾಡಲಾಗಿದ್ದು, ಒಟ್ಟು ಕೃತ್ಯ ಎಸಗಿದ ಐದು ಜನರನ್ನ ವಶಕ್ಕೆ ಪಡೆಯಲಾಗಿದೆ. ನಗರದ ಮೈಸೂರು ರಸ್ತೆಯಲ್ಲಿ ಆರೋಪಿಗಳನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಶಿವಾಜಿ ಪ್ರತಿಮೆಗೆ ಮಸಿ ಬಳಿದು ವಿಡಿಯೊ ಮಾಡಿಕೊಂಡ ಆರೋಪಿಗಳು ಆ ವಿಡಿಯೊವನ್ನ ತನ್ನ ಸ್ನೇಹಿತರಿಗೆ ಶೇರ್ ಮಾಡಿದ್ದರು. ಶೇರ್ ಅದ ವಿಡಿಯೊವನ್ನು ನವೀನ್ ಎಂಬಾತ ವೈರಲ್ ಮಾಡಿದ್ದ. ಸಾಮಾಜಿಕ ಜಾಲತಾಣದಲ್ಲಿ ವೈರಲ್ ಅದ ಬೆನ್ನಲ್ಲೆ ಗಲಾಟೆ ಶುರುವಾಗಿತ್ತು. ಸದ್ಯ ನವೀನ್ ಸೇರಿ ಇತರೆ ಐದು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸದ್ಯ ಗೌಪ್ಯ ಸ್ಥಳದಲ್ಲಿ ಆರೋಪಿಗಳನ್ನು ಇರಿಸಿ ವಿಚಾರಣೆ ನಡೆಸುತ್ತಿದೆ.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications