• search
  • Live TV
ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆಗೆ ಕುಂದಾನಗರಿ ಸಜ್ಜು

By ಬೆಳಗಾವಿ ಪ್ರತಿನಿಧಿ
|

ಬೆಳಗಾವಿ, ಡಿಸೆಂಬರ್ 3: ಇದೇ ಡಿಸೆಂಬರ್ 4ರ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ಹಾಗೂ ಡಿ.5 ರಂದು ನಡೆಯುವ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಗೆ ಇಂದಿನಿಂದಲೇ ತಯಾರಿ ಮಾಡಿಕೊಳ್ಳಲಾಗುತ್ತಿದ್ದು, ಕುಂದಾನಗರಿ ಬೆಳಗಾವಿಯ ಪ್ರಮುಖ ರಸ್ತೆಗಳು, ವೃತ್ತಗಳಲ್ಲಿ ಬಿಜೆಪಿ ಬಾವುಟಗಳು ರಾರಾಜಿಸುತ್ತಿವೆ.

ಬೆಳಗಾವಿಯ ಪ್ರಮುಖ ರಸ್ತೆಯುದ್ದಕ್ಕೂ ಬಿಜೆಪಿ ನಾಯಕರಿಗೆ ಸ್ವಾಗತ ಕೋರುವ ಫ್ಲೆಕ್ಸ್‌ಗಳ ಅಳವಡಿಕೆ ಮಾಡಲಾಗುತ್ತಿದೆ. ಡಿಸೆಂಬರ್ 4ರ ಸಂಜೆ ಬೆಳಗಾವಿಯಲ್ಲಿ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ಬೆಳಗಾವಿಯ ಖಾಸಗಿ ಹೋಟೆಲ್‌ನಲ್ಲಿ ನಡೆಯಲಿದೆ.

ಡಿ.4 ರಿಂದ ಸಿಎಂ ಯಡಿಯೂರಪ್ಪ ಬೆಳಗಾವಿ ಜಿಲ್ಲಾ ಪ್ರವಾಸ

ಡಿಸೆಂಬರ್ 5ರಂದು ಬೆಳಗ್ಗೆ 10.30ಕ್ಕೆ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ ನಿಗದಿಯಾಗಿದ್ದು, ಬೆಳಗಾವಿಯ ಗಾಂಧಿಭವನದಲ್ಲಿ ನಡೆಯಲಿದೆ. ಡಿ.4ರ ಮಧ್ಯಾಹ್ನ ಬೆಳಗಾವಿಗೆ ಸಿಎಂ ಬಿ.ಎಸ್ ಯಡಿಯೂರಪ್ಪ ಆಗಮಿಸಲಿದ್ದು, ಕೋರ್ ಕಮಿಟಿ ಹಾಗೂ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಭಾಗಿಯಾಗಲಿದ್ದಾರೆ.

ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರು ರಾಜ್ಯ ಕಾರ್ಯಕಾರಿಣಿ ಸಭೆಗೆ ಆಗಮಿಸುತ್ತಿದ್ದು, ರಾಜ್ಯ ಬಿಜೆಪಿ ಉಸ್ತುವಾರಿಯಾಗಿ ನೇಮಕವಾದ ಬಳಿಕ ಇದೇ ಮೊದಲ ಬಾರಿಗೆ ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ.

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ಡಿ.4 ರಂದು ಬೆಳಗಾವಿಗೆ ಆಗಮಿಸುತ್ತಿದ್ದು, ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಸೇರಿ ಹಲವು ನಾಯಕರು ಪಾಲ್ಗೊಳ್ಳಲಿದ್ದಾರೆ.

ರಾಜ್ಯ ಬಿಜೆಪಿ ಉಪಾಧ್ಯಕ್ಷ ನಿರ್ಮಲಕುಮಾರ್ ಸುರಾನಾ ಬೆಳಗಾವಿಯಲ್ಲೇ ಇದ್ದು ಎರಡು ಸಭೆಗಳ ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ.

English summary
The state BJP core committee meeting will be held in the private hotel of Belagavi on the evening of December 4.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X