ಹೈಕಮಾಂಡ್ ಟಿಕೆಟ್ ನೀಡಿದರೆ ಬೆಳಗಾವಿ ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ಧ: ಶ್ರದ್ಧಾ ಶೆಟ್ಟರ್
ಬೆಳಗಾವಿ, ಮಾರ್ಚ್ 24: ಬಿಜೆಪಿ ಹೈಕಮಾಂಡ್ ಟಿಕೆಟ್ ನೀಡಿದರೆ ಬೆಳಗಾವಿ ಲೋಕಸಭೆ ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ಧ ಎಂದು ದಿ.ಸುರೇಶ್ ಅಂಗಡಿ ಪುತ್ರಿ ಶ್ರದ್ಧಾ ಶೆಟ್ಟರ್ ಹೇಳಿದರು.
ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಶ್ರದ್ಧಾ ಶೆಟ್ಟರ್, ಬೆಳಗಾವಿ ಲೋಕಸಭಾ ಉಪ ಚುನಾವಣೆಗೆ ಸ್ಪರ್ಧಿಸಲು ಮಾನಸಿಕವಾಗಿ ಸಿದ್ಧಳಾಗಿದ್ದೇನೆ ಎಂದರು.
ದಿ.ಸುರೇಶ್ ಅಂಗಡಿ ಪುತ್ರಿ ಹಾಗೂ ಸಚಿವ ಜಗದೀಶ್ ಶೆಟ್ಟರ್ ಸೊಸೆ ಅಗಿರುವ ಶ್ರದ್ಧಾ ಶೆಟ್ಟರ್, ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ. ಬೇರೆ ಅಭ್ಯರ್ಥಿಗಳ ಬಗ್ಗೆಯೂ ಕೋರ್ ಕಮಿಟಿ ಸಭೆಯಲ್ಲಿ ಚರ್ಚೆಯಾಗಿದ್ದು, ಹೈಕಮಾಂಡ್ ಈಗ ನಿರ್ಧಾರ ತೆಗೆದುಕೊಳ್ಳಬೇಕಿದೆ ಎಂದು ತಿಳಿಸಿದರು.

ಆದರೆ, ಟಿಕೆಟ್ ನೀಡುವ ವಿಚಾರದಲ್ಲಿ ಹೈಕಮಾಂಡ್ ನಿರ್ಧಾರವೇ ಅಂತಿಮವಾಗಿದ್ದು, ಚುನಾವಣೆಗೆ ಸ್ಪರ್ಧಿಸಬೇಕೆಂದು ಅಭಿಮಾನಿಗಳ ಒತ್ತಾಯವಾಗಿದೆ. ಬಿಜೆಪಿ ಹೈಕಮಾಂಡ್‌ಗೂ ಕನ್ವೇ ಮಾಡಲಾಗಿದೆ ಎಂದರು.
ಹೈಕಮಾಂಡ್‌ಗೆ ಎಲ್ಲಾ ವಿಷಯ ಪ್ರಸ್ತಾಪ ಮಾಡಿದ್ದೇವೆ, ಇನ್ನೆರಡು ದಿನಗಳಲ್ಲಿ ನಿಮಗೂ ಗೊತ್ತಾಗುತ್ತದೆ. ನಾನು ದೆಹಲಿಗೆ ಹೋಗಿಲ್ಲ, ಬೆಂಗಳೂರಿನಲ್ಲಿದ್ದೆ. ಹೈಕಮಾಂಡ್ ಅಥವಾ ಪಕ್ಷದ ವರಿಷ್ಠರು ಯಾರೂ ನನ್ನ ಜೊತೆ ಮಾತನಾಡಿಲ್ಲ ಎಂದು ಹೇಳಿದರು.
ಟಿಕೆಟ್ ಬಗ್ಗೆ ಏನೂ ಚರ್ಚೆ ಆಗಿಲ್ಲ, ಅದರೆ ನಮ್ಮ ಕುಟುಂಬಕ್ಕೆ ಅವಕಾಶ ಕೊಟ್ಟರೆ ಸ್ಪರ್ಧೆ ಮಾಡುತ್ತೇವೆ ಅಂತಾ ಹೇಳಿದ್ದೇವೆ. ಪಕ್ಷ ಕೈಗೊಳ್ಳುವ ನಿರ್ಧಾರಕ್ಕೆ ನಾವು ಬದ್ಧರಿದ್ದೇವೆ. ನಮ್ಮ ತಂದೆ ಜನರ ಜೊತೆ ಒಳ್ಳೆಯ ಸಂಪರ್ಕ ಇಟ್ಟುಕೊಂಡಿದ್ದರು. ಅಭಿಮಾನಿಗಳು ಕರೆದ ಸಮಾರಂಭಗಳಿಗೆ ಹೋಗುತ್ತಿದ್ದೇವೆ. ಮುಂದೆಯೂ ಅಭಿಮಾನಿಗಳ ಜೊತೆ ನಿರಂತರ ಸಂಪರ್ಕದಲ್ಲಿರುತ್ತೇವೆ ಎಂದು ಶ್ರದ್ಧಾ ಶೆಟ್ಟರ್ ತಿಳಿಸಿದರು.
ನಮ್ಮ ತಂದೆಯವರ ಜೊತೆಗಿದ್ದ ಎಲ್ಲರ ಜೊತೆಯೂ ನಾವು ಇರುತ್ತೇವೆ, ಹೈಕಮಾಂಡ್ ನಿರ್ಣಯವೇ ಅಂತಿಮ. ಟಿಕೆಟ್ ನೀಡಿದರೆ ಸ್ಪರ್ಧೆಗೆ ಸಿದ್ಧ ಎಂದು ಬೆಳಗಾವಿಯ ಸಾಂಬ್ರಾ ಏರ್‌ಪೋರ್ಟ್‌ನಲ್ಲಿ ಶ್ರದ್ಧಾ ಶೆಟ್ಟರ್ ಪುನರುಚ್ಚರಿಸಿದರು.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications