ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

"ಯಾರಾದರೊಬ್ಬರು ಹಿಂದೆ ಸರಿದರೆ ಚಿಕ್ಕೋಡಿ ಅಥವಾ ಗೋಕಾಕ್ ಜಿಲ್ಲೆ ಮಾಡಲು ಸಿದ್ಧ''

|
Google Oneindia Kannada News

ಬೆಳಗಾವಿ, ಡಿಸೆಂಬರ್ 4: ಬೆಳಗಾವಿ ಜಿಲ್ಲೆಯನ್ನು ವಿಭಜನೆ ಮಾಡುವುದು ಅತ್ಯಂತ ಅವಶ್ಯಕವಾಗಿದ್ದು, ಯಾರಾದರೂ ಒಬ್ಬರು ಹಿಂದಕ್ಕೆ ಸರಿದರೆ ಚಿಕ್ಕೋಡಿ ಅಥವಾ ಗೋಕಾಕ್ ಜಿಲ್ಲೆಯನ್ನು ಮಾಡಬಹುದು ಎಂದು ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದರು.

ಬೆಳಗಾವಿ ಜಿಲ್ಲೆ ಚಿಕ್ಕೋಡಿಯ ಪ್ರವಾಸಿ ಮಂದಿರದಲ್ಲಿ ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿಯವರಿಂದ ಚಿಕ್ಕೋಡಿ ಪ್ರತ್ಯೇಕ ಜಿಲ್ಲೆಯ ಮನವಿ ಸ್ವೀಕರಿಸಿ, ಸಚಿವ ರಮೇಶ್ ಜಾರಕಿಹೊಳಿ ಮಾತನಾಡಿದರು.

ಬೆಳಗಾವಿ: 90 ಜಿ.ಪಂ ಸ್ಥಾನಗಳ ಪೈಕಿ‌ 85 ಸ್ಥಾನ ಗೆಲ್ಲುವ ಟಾರ್ಗೆಟ್: ಸಚಿವ ರಮೇಶ್ ಜಾರಕಿಹೊಳಿಬೆಳಗಾವಿ: 90 ಜಿ.ಪಂ ಸ್ಥಾನಗಳ ಪೈಕಿ‌ 85 ಸ್ಥಾನ ಗೆಲ್ಲುವ ಟಾರ್ಗೆಟ್: ಸಚಿವ ರಮೇಶ್ ಜಾರಕಿಹೊಳಿ

ಕಳೆದ ಹಲವು ದಿನಗಳಿಂದ ಬೆಳಗಾವಿ ಜಿಲ್ಲೆಯನ್ನು ವಿಭಜನೆಯನ್ನು ಮಾಡಿ ಚಿಕ್ಕೋಡಿ ಗೋಕಾಕ ಜಿಲ್ಲೆಯನ್ನಾಗಿ ಮಾಡಬೇಕು ಎನ್ನುವ ಕೂಗು ಕೇಳಿ ಬರುತ್ತಿದೆ. ಕಳೆದ ಕಾಂಗ್ರೆಸ್ ಸರ್ಕಾರದಲ್ಲಿ ಚಿಕ್ಕೋಡಿ-ಗೋಕಾಕ್ ಜಿಲ್ಲೆಯನ್ನಾಗಿ ಮಾಡಲು ನಿರ್ಧರಿಸಿದರು. ತಾಂತ್ರಿಕ ಕಾರಣದಿಂದ ಕೈಬಿಡಲಾಯಿತು ಎಂದರು.

Belagavi: Ready To Make Chikkodi Or Gokak District: Minister Ramesh Jarakiholi

ಚಿಕ್ಕೋಡಿ, ಗೋಕಾಕ್ ಪ್ರತ್ಯೇಕ ಜಿಲ್ಲೆಗೆ ಇಂದು ಸಿಎಂ ಬಿ.ಎಸ್ ಯಡಿಯೂರಪ್ಪ ಅವರಲ್ಲಿ ಮನವಿಯನ್ನು ಮಾಡುವೆ. ಆದರೆ ಚಿಕ್ಕೋಡಿ ಹಾಗೂ ಗೋಕಾಕ್ ತಾಲ್ಲೂಕಿನಲ್ಲಿ ಯಾರಾದರೂ ಒಬ್ಬರು ಹಿಂದೆ ಸರಿದರೆ ಚಿಕ್ಕೋಡಿ ಅಥವಾ ಗೋಕಾಕ್ ಅನ್ನು ಸಲೀಸಾಗಿ ಜಿಲ್ಲೆ ಮಾಡಬಹುದು ಎಂದು ಸಚಿವ ರಮೇಶ್ ಜಾರಕಿಹೋಳಿ ಸ್ಪಷ್ಟಪಡಿಸಿದರು.

ಬೆಳಗಾವಿ ಜಿಲ್ಲೆ ವಿಭಜನೆಯಾದರೆ ನೂತನ ಜಿಲ್ಲಾ ಕೇಂದ್ರವಾಗಲು ಚಿಕ್ಕೋಡಿ ಹಾಗೂ ಗೋಕಾಕ್ ತಾಲ್ಲೂಕಿನ ನಡುವೆ ಸ್ಪರ್ಧೆ ಇದೆ. ಈ ಸಂದರ್ಭದಲ್ಲಿ ಬಿ.ಆರ್ ಸಂಗಪ್ಪಗೋಳ, ಚಿಕ್ಕೋಡಿಯ ಸಂಪಾದನಾ ಸ್ವಾಮೀಜಿ, ಚಿಂಚಣಿಯ ಅಲ್ಲಮಪ್ರಭು ಸ್ವಾಮೀಜಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

English summary
The division of the Belagavi district is very essential, the Chikkodi or Gokak district can be done, Minister Ramesh Jarakiholi said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X