ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಳಗಾವಿ: ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ 2 ಲಕ್ಷ ಕ್ಯೂಸೆಕ್ಸ್ ನೀರು ಬಿಡುಗಡೆ

|
Google Oneindia Kannada News

ಬೆಳಗಾವಿ, ಆಗಸ್ಟ್ 17: ನೆರೆಯ ಮಹಾರಾಷ್ಟ್ರ ಹಾಗೂ ಬೆಳಗಾವಿ ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ‌ ಧಾರಾಕಾರ ಮಳೆಯಾಗುತ್ತಿದ್ದು, ಜಿಲ್ಲೆಯ ನದಿಗಳು ತುಂಬಿ ಹರಿಯುತ್ತಿವೆ. ನದಿಪಾತ್ರದ ಜನರು ಮತ್ತು ಜಾನುವಾರು ಸಹಿತ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಜಲಸಂಪನ್ಮೂಲ ಸಚಿವ ‌ರಮೇಶ್ ಜಾರಕಿಹೊಳಿ ಮನವಿ ಮಾಡಿದ್ದಾರೆ.

ಭಾರೀ ಮಳೆಯಾಗುತ್ತಿರುವ ಕಾರಣ ಮಹಾರಾಷ್ಟ್ರದ ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ 2 ಲಕ್ಷ ಕ್ಯೂಸೆಕ್ಸ್ ಗೂ ಹೆಚ್ಚಿನ ನೀರು ಹರಿದು ಬರುತ್ತಿದೆ. ಅಷ್ಟೇ ಅಲ್ಲದೇ ಜಿಲ್ಲೆಯ ಘಟಪ್ರಭಾದ ಹಿಡಕಲ್ ಜಲಾಶಯ ಮತ್ತು ಮಲಪ್ರಭಾದ ನವಿಲುತೀರ್ಥ ಜಲಾಶಯ ತುಂಬಿದ ಪರಿಣಾಮ ಹೆಚ್ಚಿನ ನೀರನ್ನು ಕೃಷ್ಣಾ ನದಿಗೆ ಹರಿಬಿಡಲಾಗುತ್ತಿದೆ.

ತುಂಗಭದ್ರಾ ಜಲಾಶಯದ ಗೇಟ್ ಓಪನ್: 4539 ಕ್ಯೂಸೆಕ್ ನೀರು ಬಿಡುಗಡೆ ತುಂಗಭದ್ರಾ ಜಲಾಶಯದ ಗೇಟ್ ಓಪನ್: 4539 ಕ್ಯೂಸೆಕ್ ನೀರು ಬಿಡುಗಡೆ

ಸದ್ಯ ಜಲಾಶಯಗಳ ಒಳಹರಿವು ಗಣನೀಯವಾಗಿ ಹೆಚ್ಚುತ್ತಿರುವುದರಿಂದ ಇನ್ನೂ ಹೆಚ್ಚಿನ ಪ್ರಮಾಣದ ನೀರನ್ನು ಹೊರಬಿಡುವ ಸಾಧ್ಯತೆ ಇದೆ. ನದಿ ಪಾತ್ರದಲ್ಲಿ ಮತ್ತೆ ಪ್ರವಾಹದ ಪರಿಸ್ಥಿತಿ ಎದುರಾಗುವ ಸಾಧ್ಯತೆ ಇದೆ.‌ ಹಾಗಾಗಿ ನದಿ ತೀರದಲ್ಲಿನ ರೈತರು ಹಾಗೂ ಗ್ರಾಮಸ್ಥರು, ಜಾನುವಾರುಗಳ ಸಮೇತ ಸುರಕ್ಷಿತ ಸ್ಥಳಕ್ಕೆ ತೆರಳಬೇಕು ಎಂದು ಸಚಿವರು ಎಚ್ಚರಿಕೆ ನೀಡಿದ್ದಾರೆ.

Belagavi: Release of 2 lakh Cusecs Of Water From Koyna Reservoir To Krishna River

ಇನ್ನು ಪ್ರವಾಹ ಪರಿಸ್ಥಿತಿ ಎದುರಿಸಲು ಜಿಲ್ಲಾಡಳಿತದ ಜೊತೆ ನಿರಂತರ ಸಂಪರ್ಕದಲ್ಲಿದ್ದೇನೆ. ನೀರಾವರಿ ಇಲಾಖೆ ಅಧಿಕಾರಿಗಳಿಗೆ ದಿನದ 24 ಗಂಟೆ ಕೆಲಸ ಮಾಡಲು ಸೂಚಿಸಲಾಗಿದ್ದು, ಮಹಾರಾಷ್ಟ್ರದ ಅಧಿಕಾರಿಗಳ ಜತೆ ನಿರಂತರ ಸಂಪರ್ಕದಲ್ಲಿದ್ದಾರೆ. ಸಂಭಾವ್ಯ ಪ್ರವಾಹ ಎದುರಿಸಲು ಕಳೆದ ಎರಡು ತಿಂಗಳಿನಿಂದ ಬೆಳಗಾವಿ ಜಿಲ್ಲೆಯಲ್ಲಿ ತಯಾರಿ ಮಾಡಿಕೊಂಡಿದ್ದೇವೆ ಎಂದರು.

ಜನ-ಜಾನುವಾರುಗಳಿಗೆ ಯಾವುದೇ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. ಜನರು ಜಿಲ್ಲಾಡಳಿತದ ಆದೇಶಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಸಚಿವ ರಮೇಶ್ ಜಾರಕಿಹೊಳಿ ಮನವಿ ಮಾಡಿಕೊಂಡಿದ್ದಾರೆ.

English summary
The neighboring Maharashtra and Belagavi districts have been torrential rains for the past three days and rivers in the district are overflowing.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X