ಬೆಳಗಾವಿಯಲ್ಲಿ 57 ವಿಚಾರಣಾಧೀನ ಖೈದಿಗಳ ಬಿಡುಗಡೆ
ಬೆಳಗಾವಿ, ಏಪ್ರಿಲ್ 03: ಕೊರೊನಾ ವೈರಸ್ ಹರಡುವ ಭೀತಿಯಿಂದ ಬೆಳಗಾವಿಯ ಹಿಂಡಲಗಾ ಜೈಲಿನಿಂದ 57 ವಿಚಾರಣಾಧೀನ ಕೈದಿಗಳನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.
Recommended Video
ಶಶಿಕಲಾ ಕೊರ್ಟ್ ಗೆ ಕಟ್ಟಬೇಕಾದ ಮೊತ್ತ ಎಷ್ಟು ಗೊತ್ತಾ? | Oneindia Kannada
ಬೆಳಗಾವಿ ಜಿಲ್ಲಾ ಸೆಷನ್ಸ್ ನ್ಯಾಯಾಲಯದಿಂದ ಜಾಮೀನು ಪಡೆದು ರಿಲೀಸ್ ಮಾಡಲಾಗಿದೆ ಎಂದು ಹಿಂಡಲಗಾ ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕ ಕೃಷ್ಣಕುಮಾರ್ ಮಾಹಿತಿ ನೀಡಿದ್ದಾರೆ.

ಸಣ್ಣಪುಟ್ಟ ಪ್ರಕರಣಗಳಲ್ಲಿ ಭಾಗಿಯಾಗಿದ್ದ ವಿಚಾರಣಾಧೀನ ಕೈದಿಗಳಿಗೆ ಜಾಮೀನಿನ ಮೇಲೆ ಬಿಡುಗಡೆ ಭಾಗ್ಯ ಸಿಕ್ಕಿದೆ. ಕೊರೊನಾ ವೈರಸ್ ಇಂದು ಸಾಂಕ್ರಾಮಿಕ ರೋಗವಾಗಿದ್ದು, ಜೈಲುಗಳಂತ ಸ್ಥಳಗಳಲ್ಲಿ ಹರಡುವ ಭೀತಿಯ ಹಿನ್ನೆಲೆಯಲ್ಲಿ ಈ ನಿರ್ಧಾರ ಮಾಡಲಾಗಿದೆ ಎಂದು ಕಾರಾಗೃಹ ಅಧೀಕ್ಷಕ ಕೃಷ್ಣಕುಮಾರ್ ಹೇಳಿದರು.












Click it and Unblock the Notifications