ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಡಿ.31 ರವರೆಗೆ ರೇಣುಕಾ ಯಲ್ಲಮ್ಮ ದೇವಸ್ಥಾನಕ್ಕೆ ಭಕ್ತರ ಪ್ರವೇಶ ನಿಷೇಧ

By ಬೆಳಗಾವಿ ಪ್ರತಿನಿಧಿ
|
Google Oneindia Kannada News

ಬೆಳಗಾವಿ, ನವೆಂಬರ್ 30: ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಮತ್ತೆ ಮುಂದಿನ ಒಂದು ತಿಂಗಳು ಸವದತ್ತಿಯ ರೇಣುಕಾ ಯಲ್ಲಮ್ಮ ದೇವಿ ದರ್ಶನಕ್ಕೆ ನಿಷೇಧ ಹೇರಿ ಆದೇಶ ಹೊರಡಿಸಲಾಗಿದೆ.

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಯಲ್ಲಮ್ಮನ ಗುಡ್ಡದಲ್ಲಿರುವ ದೇವಸ್ಥಾನಕ್ಕೆ ಭಕ್ತರ ಪ್ರವೇಶವನ್ನು ಬೆಳಗಾವಿ ಜಿಲ್ಲಾಡಳಿತ ನಿಷೇಧಿಸಿದೆ. ಮಹಾಮಾರಿ ಕೊರೊನಾ ವೈರಸ್ ಹಿನ್ನಲೆ ಮಾರ್ಚ್ 22 ರಿಂದ ದೇವಸ್ಥಾನ ಬಂದ್ ಆಗಿದೆ.

"ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ವೈಯಕ್ತಿಕವಾಗಿ ಆಸಕ್ತಿ ಇಲ್ಲ''

ಕಳೆದ ತಿಂಗಳು ನ.30ರ ವರೆಗೂ ಭಕ್ತರ ದರ್ಶನಕ್ಕೆ ನಿಷೇಧ ಹೇರಿ ಆದೇಶ ಹೊರಡಿಸಿದ್ದ ಬೆಳಗಾವಿ ಜಿಲ್ಲಾಡಳಿತ, ಕೊರೊನಾ ಸೋಂಕು ನಿಯಂತ್ರಣಕ್ಕೆ ಬಾರದ ಹಿನ್ನಲೆ ಮತ್ತೆ ಡಿ.31 ರವರೆಗೆ ನಿಷೇಧ ಹೇರಿ ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ ಹಿರೇಮಠ ಆದೇಶಿಸಿದ್ದಾರೆ.

 Belagavi: Renuka Yallamma Devi Temple Bandh For Devotees

ಕರ್ನಾಟಕ, ಮಹಾರಾಷ್ಟ್ರ ಸೇರಿದಂತೆ ಹೊರ ರಾಜ್ಯಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ಹಿನ್ನೆಲೆ, ಇನ್ನೂ ಒಂದು ತಿಂಗಳ ಕಾಲ ದೇವಿ ದರ್ಶನಕ್ಕೆ ಬೆಳಗಾವಿ ಜಿಲ್ಲಾಡಳಿತ ನಿಷೇಧ ಹೇರಿದೆ.

ಸಭೆ, ಸಮಾರಂಭಗಳಿಗೆ ಇಲ್ಲದ ಕೋವಿಡ್ ಮಾರ್ಗಸೂಚಿ ಸವದತ್ತಿ ಯಲ್ಲಮ್ಮ ದೇವಸ್ಥಾನಕ್ಕೆ ಯಾಕೆ ಎಂದು ಭಕ್ತರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶೀಘ್ರದಲ್ಲೇ ಯಲ್ಲಮ್ಮ ದೇವಿ ದರ್ಶನಕ್ಕೆ ಅವಕಾಶ ಮಾಡುವಂತೆ ಭಕ್ತರ ಆಗ್ರಹಿಸಿದ್ದಾರೆ.

ಬೆಳಗಾವಿ ಜಿಲ್ಲೆಯಲ್ಲಿ ನವೆಂಬರ್ 29 ರ ವರದಿ ಪ್ರಕಾರ ಒಟ್ಟು 25641 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, 25026 ಸೋಂಕಿತರು ಚೇತರಿಸಿಕೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 341 ಸೋಂಕಿತರು ಸಾವನ್ನಪ್ಪಿದ್ದಾರೆ. ಇನ್ನೂ 274 ಸಕ್ರಿಯ ಕೊರೊನಾ ಪ್ರಕರಣಗಳಿವೆ.

English summary
The Renuka Yallamma Devi Darshan has been banned for one month, backdrop of coronavirus.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X