ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಳಗಾವಿ: 3 ತಿಂಗಳಿಗೊಮ್ಮೆ ಸುವರ್ಣಸೌಧದಲ್ಲಿ ಕ್ಯಾಬಿನೆಟ್ ಸಭೆ ನಡೆಸಲು ಆಗ್ರಹ

By ಬೆಳಗಾವಿ ಪ್ರತಿನಿಧಿ
|
Google Oneindia Kannada News

ಬೆಳಗಾವಿ, ಜುಲೈ 6: ಮೂರು ತಿಂಗಳಿಗೊಮ್ಮೆ ಬೆಳಗಾವಿಯ ಸುವರ್ಣಸೌಧದಲ್ಲಿ ಕ್ಯಾಬಿನೆಟ್ ಮೀಟೀಂಗ್ ನಡೆಸುವುದು, ರಾಜ್ಯಮಟ್ಟದ ಕಚೇರಿಗಳನ್ನು ಸ್ಥಳಾಂತರ ಮಾಡುವದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಬೆಳಗಾವಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

Recommended Video

ಭಾರತದವರು ನಮ್ಮ ಬಳಿ ಕ್ಷಮೆ ಕೇಳ್ತಾ ಇದ್ರು ಎಂದ ಅಫ್ರಿದಿ | Shahid Afridi | Oneindia Kannada

ಬೆಳಗಾವಿಯ ಸುವರ್ಣಸೌಧ ಉತ್ತರ ಕರ್ನಾಟಕದ ಅಭಿವೃದ್ಧಿಗೆ ದಿಕ್ಸೂಚಿ ಆಗಬೇಕು, ಇದು ಉತ್ತರ ಕರ್ನಾಟಕದ ಶಕ್ತಿ ಕೇಂದ್ರ ಆಗಬೇಕು, 500 ಕೋಟಿ ರೂ. ಖರ್ಚು ಮಾಡಿ ಕಟ್ಟಿದ ಈ ಕಟ್ಟಡ ನಿರಂತರವಾಗಿ ಕ್ರಿಯಾಶೀಲ ಆಗುವ ನಿಟ್ಟಿನಲ್ಲಿ ಸರ್ಕಾರವು ರಾಜ್ಯಮಟ್ಟದ ಕಚೇರಿಗಳನ್ನು ಸುವರ್ಣಸೌಧಕ್ಕೆ ಸ್ಥಳಾಂತರ ಮಾಡಬೇಕು ಎಂದು ಒತ್ತಾಯಿಸಿದರು.

ಬೆಳಗಾವಿ ಆಸ್ಪತ್ರೆಗೆ ಕೊವ್ಯಾಕ್ಸಿನ್ ಪ್ರಯೋಗ ಅನುಮತಿ ಸಿಗಲು ಏನು ಕಾರಣ?ಬೆಳಗಾವಿ ಆಸ್ಪತ್ರೆಗೆ ಕೊವ್ಯಾಕ್ಸಿನ್ ಪ್ರಯೋಗ ಅನುಮತಿ ಸಿಗಲು ಏನು ಕಾರಣ?

ತಪ್ಪದೇ ಪ್ರತಿ ಮೂರು ತಿಂಗಳಿಗೊಮ್ಮೆ ಸುವರ್ಣ ಸೌಧದಲ್ಲಿ ಕ್ಯಾಬಿನೆಟ್ ಮೀಟಿಂಗ್ ಮಾಡಬೇಕು ಎಂದು ಕರವೇ ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು.

Belagavi: Request To Hold A Cabinet Meeting Every 3 Months At Suvarna Soudha

ಬೆಳಗಾವಿಯ ಸುವರ್ಣಸೌಧದ ಎದುರು ವೀರರಾಣಿ ಕಿತ್ತೂರು ಚನ್ನಮ್ಮ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡುವುದರ ಜೊತೆಗೆ ಬೆಂಗಳೂರಿನ ವಿಧಾನಸಭೆಯ ಎದುರು ಕೆಂಗಲ್ ಹನುಮಂತಯ್ಯನವರ ಪ್ರತಿಮೆ ಇದ್ದು, ಅದೇ ರೀತಿಯಲ್ಲಿ ಬೆಳಗಾವಿಯಲ್ಲಿ ಸುವರ್ಣಸೌಧ ನಿರ್ಮಿಸಿದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಮೂರ್ತಿಯನ್ನು ಬೆಳಗಾವಿಯ ಸುವರ್ಣ ವಿಧಾನಸೌಧದ ಎದುರು ಪ್ರತಿಷ್ಠಾಪನೆ ಮಾಡಬೇಕು ಎಂದು ಕರವೇ ಕಾರ್ಯಕರ್ತರು ಒತ್ತಾಯಿಸಿದರು.

Belagavi: Request To Hold A Cabinet Meeting Every 3 Months At Suvarna Soudha

ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಕೆ ಬಳಿಕ ಮಾದ್ಯಮಗಳ ಜೊತೆ ಮಾತನಾಡಿದ ಕರವೇ ಜಿಲ್ಲಾಧ್ಯಕ್ಷ ದೀಪಕ ಗುಡಗಮಟ್ಟಿ, ಬೆಳಗಾವಿಯ ಸುವರ್ಣಸೌಧಕ್ಕೆ ಜಿಲ್ಲಾ ಮಟ್ಟದ ಕಚೇರಿಗಳನ್ನು ಸ್ಥಳಾಂತರ ಮಾಡುವುದು ಸರಿಯಲ್ಲ. ಇಲ್ಲಿ ರಾಜ್ಯಮಟ್ಟದ ಕಚೇರಿಗಳನ್ನು ಮಾತ್ರ ಸ್ಥಳಾಂತರ ಮಾಡಬೇಕು, ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಈ ಕುರಿತು ಕೂಡಲೇ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು. ಕರವೇ ರಾಜ್ಯ ಸಂಚಾಲಕ ಸೇರಿದಂತೆ ಹಲವು ಕಾರ್ಯಕರ್ತರು ಉಪಸ್ಥಿತರಿದ್ದರು.

English summary
Karnataka Rakshana Vedike Activists appealed to the Belagavi District Collector to meet various demands, including holding a Cabinet Meeting in the Suvarna Soudha of Belagavi every three months.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X