ಮಟ.. ಮಟ ಮಧ್ಯಾಹ್ನವೇ ಬೆಳಗಾವಿಯಲ್ಲಿ ಮಳೆರಾಯನ ಆರ್ಭಟಕ್ಕೆ ರಸ್ತೆಗಳು ಜಲಾವೃತ, ವಾಹನ ಸವಾರ ಪರದಾಟ

ಬೆಳಗಾವಿ, ಜುಲೈ, 14: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆರಾಯ ಅಬ್ಬರಿಸಿ ಬೊಬ್ಬರೆಯುತ್ತಿದ್ದಾನೆ. ಹಾಗೆಯೇ ಬೆಳಗಾವಿ ಜಿಲ್ಲೆಯಲ್ಲೂ ಕೂಡ ಇಂದು (ಜುಲೈ 14) ಮಧ್ಯಾಹ್ನ ಎರಡು ಗಂಟೆಗಳ ಕಾಲ ಸುರಿದ ಮಳೆ ಅವಾಂತರವನ್ನೇ ಸೃಷ್ಟಿಸಿದೆ.

ಇಂದು ಮಧ್ಯಾಹದ ವೇಳೆಗೆ ಎರಡು ಗಂಟೆಗಳ ಕಾಲ ಸುರಿದ ಧಾರಾಕಾರ ಮಳೆಯಿಂದಾಗಿ ಬೆಳಗಾವಿಯ ಹಲವೆಡೆ ರಸ್ತೆಗಳು ಕೆರೆಯಂತಾಗಿದ್ದು, ವಾಹನ ಸವಾರರು ಪರದಾಡಿದ ಘಟನೆ ನಡೆದಿದೆ. ಮತ್ತೊಂದೆಡೆ ನಗರದ ಗಾಂಧಿನಗರ ಬಳಿ ರಾಷ್ಟ್ರೀಯ ಹೆದ್ದಾರಿಯ ಬ್ರೀಡ್ಜ್ ಕೆಳಗೆ ಸಂಪೂರ್ಣ ಜಲಾವೃತವಾಗಿದ್ದು, ಪರಿಣಾ ಸಂಚಾರ ಅಸ್ತವ್ಯಸ್ತವಾಗಿದೆ.

Roads are flooded in many parts of Belagavi due to heavy rain

ಸೇತುವೆಗಳು ಜಲಾವೃತ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆರಾಯ ಅಬ್ಬರಿಸಿ ಬೊಬ್ಬೆರೆದು ಅವಾಂತರಗಳನ್ನೇ ಸೃಷ್ಟಿಸಿದ್ದಾನೆ. ಹಾಗೆಯೇ ಬೆಳಗಾವಿ ಜಿಲ್ಲೆಯಲ್ಲೂ ಕೂಡ ಭಾರೀ ಮಳೆಯಿಂದ ಹಳ-ಕೊಳ್ಳ-ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಇದರಿಂದ ಜನರು ಒಂದು ಕಡೆಯಿಂದ ಮತ್ತೊಂದು ಕಡೆಗೆ ಪ್ರಯಾಣ ಮಾಡಲು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ಜನರ ಸಂಚಾರ ಅಸ್ತವ್ಯಸ್ತ: ಮಹಾರಾಷ್ಟ್ರ ಮತ್ತು ಪಶ್ಚಿಮ ಘಟ್ಟ ಪ್ರದೇಶದಲ್ಲಿ ಮಳೆರಾಯನ ಆರ್ಭಟ ಮುಂದುವರೆದಿದೆ. ಅಲ್ಲದೆ, ಚಿಕ್ಕೋಡಿ ಉಪವಿಭಾಗ ವ್ಯಾಪ್ತಿಯ ಮೂರು ಸಂಪರ್ಕ ಸೇತುವೆಗಳು ಮುಳುಗಡೆಯಾಗಿದೆ. ಕೃಷ್ಣಾ, ವೇದಗಂಗಾ ಹಾಗೂ ದೂದಗಂಗಾ ನದಿಗಳು ಮೈದುಂಬಿ ಹರಿಯುತ್ತಿರುವ ಪರಿಣಾಮ ನಿಪ್ಪಾಣಿ ತಾಲೂಕಿನ ಕುನ್ನೂರ-ಬಾರವಾಡ ಸಂಪರ್ಕಿಸುವ ಸೇತುವೆ ಜಲಾವೃತವಾದ ಘಟನೆ ನಡೆದಿದ್ದು, ಜನರ ಸಂಚಾರ ಅಸ್ತವ್ಯಸ್ತವಾಗಿದೆ.

ನೀರಿನ ಒಳಹರಿವು ಹೆಚ್ಚಳ: ಭಾರೀ ಮಳೆಯಿಂದ ದೂದಗಂಗಾ ನದಿಯಿಂದ ಕಾರದಗಾ-ಬೋಜ್, ಕುನ್ನೂರ-ಭೋಜವಾಡಿ ಸಂಪರ್ಕಿಸುವ ಸೇತುವೆ ಜಲಾವೃತವಾಗಿದೆ. ಇನ್ನು ಕೃಷ್ಣಾ ನದಿಗೆ ಸುಮಾರು 55 ಸಾವಿರ ಕ್ಯೂಸೆಕ್‌ಗೂ ಹೆಚ್ಚು ನೀರಿನ ಒಳಹರಿವು ಇದ್ದು, ಮುಂಜಾಗ್ರತಾ ಕ್ರಮವಾಗಿ ನದಿಗೆ ಇಳಿಯದಂತೆ ಬೆಳಗಾವಿ ಜಿಲ್ಲಾಡಳಿತದಿಂದ ನದಿ ಪಾತ್ರದ ಜನರಿಗೆ ಸೂಚನೆ ನೀಡಲಾಗಿದೆ.

ಜಿಲ್ಲಾಡಳಿತದ ವಿರುದ್ಧ ಆಕ್ರೊಶ: ಕೃಷ್ಣಾ ಒಳಹರಿವಿನ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆ ನದಿ ಪಾತ್ರದ ಜನರಲ್ಲಿ ಪ್ರವಾಹದ ಭೀತಿ ಎದುರಾಗಿದೆ. ಅಲ್ಲದೆ, ನದಿಗೆ ಇಳಿಯದಂತೆ ಬೆಳಗಾವಿ ಜಿಲ್ಲಾಡಳಿತದಿಂದ ಎಚ್ಚರಿಕೆ ನೀಡಿದೆ. ಮತ್ತೊಂದೆಡೆ ಪ್ರವಾಹದ ಭೀತಿ ಎದುರಾಗಿದ್ದರೂ ಕೂಡ ಇಲ್ಲಿಯವರೆಗೂ ಒಂದೇ ಒಂದು ಕಾಳಜಿ ಕೇಂದ್ರವನ್ನು ಕೂಡ ತೆರೆದಿಲ್ಲ ಎಂದು ಜಿಲ್ಲಾಡಳಿತದ ವಿರುದ್ಧ ಸ್ಥಳಿಯರು ಆಕ್ರೊಶ ಹೊರಹಾಕುತ್ತಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+