ಬೆಳಗಾವಿ ಜಿಲ್ಲಾಧಿಕಾರಿಯಾಗಿ ಎಸ್.ಜಿಯಾವುಲ್ಲಾ ನೇಮಕ
ಬೆಳಗಾವಿ, ಆ.10 : ಬೆಳಗಾವಿ ಜಿಲ್ಲಾಧಿಕಾರಿಯಾಗಿ ಎಸ್.ಜಿಯಾವುಲ್ಲಾ ಅವರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ. ಜಯರಾವ್ ಅವರ ವರ್ಗಾವಣೆ ಬಳಿಕ ಜಿಲ್ಲಾಧಿಕಾರಿಗಳ ಹುದ್ದೆ ತೆರವಾಗಿತ್ತು.
ಕರ್ನಾಟಕ ಸರ್ಕಾರ ಬುಧವಾರ ಇಬ್ಬರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಬೆಳಗಾವಿ ಜಿಲ್ಲಾಧಿಕಾರಿಯಾಗಿ ಎಸ್.ಜಿಯಾವುಲ್ಲಾ ಮತ್ತು ಮಂಡ್ಯ ಜಿಲ್ಲಾಧಿಕಾರಿಯಾಗಿ ಎನ್.ಮಂಜುಶ್ರೀ ಅವರನ್ನು ನೇಮಕ ಮಾಡಲಾಗಿದೆ.

ಜಯರಾಮ್ ಬೆಳಗಾವಿ ಜಿಲ್ಲಾಧಿಕಾರಿಯಾಗಿದ್ದರು. ಅವರ ವರ್ಗಾವಣೆ ಬಳಿಕ ಜಿಲ್ಲಾಧಿಕಾರಿ ಹುದ್ದೆ ತೆರವಾಗಿತ್ತು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಆರ್.ರಾಮಚಂದ್ರನ್ ಅವರಿಗೆ ಹೆಚ್ಚುವರಿ ಜವಾಬ್ದಾರಿ ನೀಡಲಾಗಿತ್ತು.ಮೂವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
* ಮಂಗಳೂರು ನಗರ ಕಾನೂನು ಸುವ್ಯವಸ್ಥೆ ಡಿಸಿಪಿ ಯಾಗಿ ಹನುಮಂತರಾಯ
* ಎಸಿಬಿ ಪೂರ್ವ ವಲಯ, ದಾವಣಗೆರೆ ಎಸ್ಪಿಯಾಗಿ ಸಿ.ವಂಶಿಕೃಷ್ಣ
* ಕರ್ನಾಟಕ ರಾಜ್ಯ ಪೊಲೀಸ್ ತರಬೇತಿ ಶಾಲೆ ಪ್ರಾಂಶುಪಾಲರಾಗಿ ಎಂ.ಪುಟ್ಟಮಾದಯ್ಯ ನೇಮಕಗೊಂಡಿದ್ದಾರೆ.












Click it and Unblock the Notifications