ಜೆಡಿಎಸ್ ನತ್ತ ಹೊರಟ ಸಾಂಗ್ಲಿಯಾನ?

ಬೆಂಗಳೂರು, ಮಾ. 20 : ಬೆಂಗಳೂರು ಸೆಂಟ್ರಲ್ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ನಿವೃತ್ತ ಪೊಲೀಸ್ ಆಯುಕ್ತ ಎಚ್.ಟಿ.ಸಾಂಗ್ಲಿಯಾನ ಸ್ಪರ್ಧಿಸುವ ಸಾಧ್ಯತೆ ಇದೆ. ಕಾಂಗ್ರೆಸ್ ಟಿಕೆಟ್ ದೊರೆಯದೆ ಅಸಮಾಧಾನ ಗೊಂಡಿದ್ದ ಸಾಂಗ್ಲಿಯಾನ ಅವರನ್ನು ಜೆಡಿಎಸ್ ಪಕ್ಷಕ್ಕೆ ಕರೆತರುವ ಪ್ರಯತ್ನ ನಡೆಯುತ್ತಿದೆ.

ಸ್ವತಃ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ, ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರು ಸಾಂಗ್ಲಿಯಾನ ಅವರನ್ನು ಪಕ್ಷಕ್ಕೆ ಕರೆತಂದು ಬೆಂಗಳೂರು ಸೆಂಟ್ರಲ್ ಕ್ಷೇತ್ರದ ಅಭ್ಯರ್ಥಿಯಾಗಿಸುವ ಪ್ರಯತ್ನಕ್ಕೆ ಸಲಹೆ ಸೂಚನೆ ನೀಡಿದ್ದಾರೆ. ಚಾಮರಾಜಪೇಟೆ ಶಾಸಕ ಜಮೀರ್‌ ಅಹಮದ್‌ ಖಾನ್‌ ಬುಧವಾರ ಸಂಜೆ ಸಾಂಗ್ಲಿಯಾನ ನಿವಾಸಕ್ಕೆ ಭೇಟಿ ನೀಡಿ ಪಕ್ಷಕ್ಕೆ ಆಹ್ವಾನಿಸಿದ್ದಾರೆ. [ಬೆಂ.ಸೆಂಟ್ರಲ್ ಕ್ಷೇತ್ರಕ್ಕೆ ರಿಜ್ವಾನ್ ಅಭ್ಯರ್ಥಿ]

HT Sangliana

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಸಾಂಗ್ಲಿಯಾನ ಅವರು, ಕಾಂಗ್ರೆಸ್‌ ಪಕ್ಷದಲ್ಲಿ ಟಿಕೆಟ್‌ ದೊರೆಯದಿರುವುದು ಬೇಸರತಂದಿದೆ. ರಾಜ್ಯದಲ್ಲಿ ಕ್ರಿಶ್ಚಿಯನ್‌ ಸಮುದಾಯಕ್ಕೆ ಯಾವ ಕ್ಷೇತ್ರದಲ್ಲಿಯೂ ಅವಕಾಶ ನೀಡಿಲ್ಲ. ಜೆಡಿಎಸ್‌ ಮುಖಂಡರು ನನ್ನ ಸಂಪರ್ಕದಲ್ಲಿದ್ದು, ಮಾ.23ರ ನಂತರ ನನ್ನ ನಿರ್ಧಾರ ತಿಳಿಸುತ್ತೇನೆ ಎಂದು ಹೇಳಿದ್ದಾರೆ.

ಜಮೀರ್ ಅಹಮದ್ ಭೇಟಿಯ ವೇಳೆ ಸಾಂಗ್ಲಿಯಾನ ಜೆಡಿಎಸ್‌ ಸೇರ್ಪಡೆಗೆ ಬಹುತೇಕ ಒಪ್ಪಿಗೆ ಸೂಚಿಸಿದ್ದು, ಎಚ್‌.ಡಿ.ದೇವೇಗೌಡ ಹಾಗೂ ಎಚ್‌.ಡಿ.ಕುಮಾರಸ್ವಾಮಿ ಅವರ ಜತೆ ಅಂತಿಮ ಸುತ್ತಿನ ಮಾತುಕತೆ ನಂತರ ಅಧಿಕೃತವಾಗಿ ತೀರ್ಮಾನ ಘೋಷಿಸಲಿದ್ದಾರೆ ಎಂದು ತಿಳಿದುಬಂದಿದೆ. [ಜಾಫರ್ ಷರೀಫ್ ಕರೆತರಲು ಗೌಡರ ಪ್ರಯತ್ನ]

ಸಾಂಗ್ಲಿಯಾನ ಅವರು ಬೆಂಗಳೂರು ಸೆಂಟ್ರಲ್ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಅವರು ಜೆಡಿಎಸ್ ಪಕ್ಷಕ್ಕೆ ಬಂದರೆ, ಪಕ್ಷ ಅದೇ ಕ್ಷೇತ್ರದಿಂದ ಅವರನ್ನು ಕಣಕ್ಕಿಳಿಸುವ ಸಾಧ್ಯತೆ ಇದೆ. ಈಗಾಗಲೇ ಪಕ್ಷ ಸೆಂಟ್ರಲ್ ಕ್ಷೇತ್ರಕ್ಕೆ ಅಭ್ಯರ್ಥಿಯನ್ನು ಘೋಷಿಸಿಲ್ಲ. ಆದ್ದರಿಂದ ಸಾಂಗ್ಲಿಯಾನ ಅವರು ಜೆಡಿಎಸ್ ಸೇರುವುದು ಬಹುತೇಕ ಖಚಿತವಾಗಿದೆ.

ಕ್ರಿಶ್ಚಿಯನ್ನರನ್ನು ಕಡೆಗಣಿಸಿಲ್ಲ : ಕಾಂಗ್ರೆಸ್ ಪಕ್ಷ ಕ್ರಿಶ್ಚಿಯನ್ ಸಮುದಾಯವನ್ನು ನಿರ್ಲಕ್ಷಿಸಿಲ್ಲ ಎಂದು ಕಾಂಗ್ರೆಸ್ ನಾಯಕರು ಸಮರ್ಥನೆ ನೀಡಿದ್ದಾರೆ. ರಾಜ್ಯದ ಕ್ರೈಸ್ತರಿಗೆ ಕಾಂಗ್ರೆಸ್‌ ಉನ್ನತ ಸ್ಥಾನಗಳನ್ನು ನೀಡಿದೆ. ರಾಜ್ಯದ ಆಸ್ಕರ್‌ ಫ‌ರ್ನಾಂಡೀಸ್‌ ಅವರು ಕೇಂದ್ರ ಸಚಿವರಾಗಿದ್ದರೆ, ಕೆ.ಜೆ. ಜಾರ್ಜ್‌ ಗೃಹ ಸಚಿವರಾಗಿದ್ದಾರೆ. ಆದ್ದರಿಂದ ಕ್ರೈಸ್ತರಿಗೆ ಪಕ್ಷ ಅನ್ಯಾಯ ಮಾಡಿದೆ ಎಂಬ ಸಾಂಗ್ಲಿಯಾನ ಅವರ ಆರೋಪ ಸತ್ಯಕ್ಕೆ ದೂರವಾದದ್ದು ಎಂದು ಕಾಂಗ್ರೆಸ್ ಸಮರ್ಥನೆ ನೀಡಿದೆ.

ಎದುರಾಳಿಗಳು : ಬೆಂಗಳೂರು ಸೆಂಟ್ರಲ್ ಕ್ಷೇತ್ರದ ಅಭ್ಯರ್ಥಿಯಾಗಿ ಬಿಜೆಪಿ ಹಾಲಿ ಸಂಸದ ಪಿ.ಸಿ.ಮೋಹನ್ ಅವರನ್ನು ಕಣಕ್ಕಿಳಿಸಿದೆ. ಕಾಂಗ್ರೆಸ್ ಪಕ್ಷದಿಂದ ಯುವ ಕಾಂಗ್ರೆಸ್ ಅಧ್ಯಕ್ಷ ರಿಜ್ವಾನ್ ಅರ್ಷದ್ ಸ್ಪರ್ಧಿಸುತ್ತಿದ್ದಾರೆ. ಆಮ್ ಆದ್ಮಿ ಪಕ್ಷದಿಂದ ವಿ.ಬಾಲಕೃಷ್ಣನ್ ಸ್ಪರ್ಧಿಸುತ್ತಿದ್ದು, ಜೆಡಿಎಸ್ ಅಭ್ಯರ್ಥಿ ಮಾತ್ರ ಘೋಷಣೆಯಾಗಬೇಕಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+