ಸಂಗೊಳ್ಳಿ ರಾಯಣ್ಣ ಸೊಸೈಟಿ ಅವ್ಯವಹಾರ ಸಿಐಡಿ ತನಿಖೆಗೆ?

ಬೆಳಗಾವಿ, ಸೆ. 22: ಕನ್ನಡ ಸಿನಿಮಾ ನಿರ್ಮಾಪಕ ಆನಂದ್ ಅಪ್ಪುಗೋಳ್ ಅವರು ವ್ಯವಸ್ಥಾಪಕ ನಿರ್ದೇಶಕರಾಗಿರುವ ಕಾಂತ್ರಿವೀರ ಸಂಗೊಳ್ಳಿ ರಾಯಣ್ಣ ಕೋ-ಆಪ್ ಕ್ರೆಡಿಟ್ ಸೊಸೈಟಿಯ 300 ಕೋಟಿ ರು ಪ್ರಕರಣವನ್ನು ಸಿಐಡಿಗೆ ವಹಿಸುವ ಎಲ್ಲಾ ಸಾಧ್ಯತೆಗಳು ಕಂಡು ಬಂದಿದೆ.

ಸಹಕಾರ ಬ್ಯಾಂಕಿನಲ್ಲಿ ಠೇವಣಿ ಇಟ್ಟಿದ್ದ ಹಣದಲ್ಲಿ ಭೂ ವ್ಯವಹಾರ ನಡೆಸಿರುವುದು ನಿಯಮ ಉಲ್ಲಂಘನೆಯಾಗಿದೆ. ಗ್ರಾಹಕರಿಂದ ಸಂಗ್ರಹಿಸಿದ ಹಣವನ್ನು ಎಲ್ಲೆಲ್ಲಿ ಹೂಡಿಕೆ ಮಾಡಲಾಗಿದೆ ಎಂಬುದರ ಮಾಹಿತಿ ಸಂಪೂರ್ಣವಾಗಿಲ್ಲ. ಭೂ ಅವ್ಯವಹಾರದ ಬಗ್ಗೆ ಆನಂದ್ ವಿವರ ನೀಡಿದರೂ, ತನಿಖೆಗೆ ಸಂಪೂರ್ಣವಾಗಿ ಸಹಕರಿಸುತ್ತಿಲ್ಲ ಎಂದು ತಿಳಿದು ಬಂದಿದೆ.

ಅಪರಾಧ ವಿಭಾಗದ ಎಸಿಪಿ ಕಲ್ಯಾಣ ಶೆಟ್ಟಿ ನೇತೃತ್ವದಲ್ಲಿ ತನಿಖೆ ನಡೆಯುತ್ತಿದ್ದು, ಭೂ ವ್ಯವಹಾರಕ್ಕೆ ಸಂಬಂಧಿಸಿದ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ. ಆನಂದ ಅಪ್ಪುಗೋಳ ಬ್ಯಾಂಕ್‌ನಿಂದ ವ್ಯವಹಾರ ನಡೆಸದಂತೆ ತನಿಖಾ ತಂಡ ಸೂಚಿಸಲಾಗಿದೆ.

ಅಪರಾಧ ವಿಭಾಗದ ಡಿಸಿಪಿ ಅಮರನಾಥ ರೆಡ್ಡಿ ಹೆಚ್ಚಿನ ತನಿಖೆಗಾಗಿ ಪ್ರಕರಣವನ್ನು ಸಿಐಡಿಗೆ ವಹಿಸಲಾಗುವುದು. ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿರುವ ಸೊಸೈಟಿಯ ಇನ್ನುಳಿದ 16 ಜನ ನಿರ್ದೇಶಕರಿಗಾಗಿ ತೀವ್ರ ಶೋಧ ಕಾರ್ಯ ಮುಂದುವರೆದಿದೆ ಎಂದಿದ್ದಾರೆ.

Sangolli Rayanna Society Scam : CID likely to probe Anand Appugol' s fraud case
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+