ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಳಗಾವಿ ಪೀರನವಾಡಿದಲ್ಲಿ ರಾತ್ರೋರಾತ್ರಿ ತಲೆಎತ್ತಿದ ಸಂಗೊಳ್ಳಿ ರಾಯಣ್ಣ

|
Google Oneindia Kannada News

ಬೆಳಗಾವಿ, ಆಗಸ್ಟ್.28: ಬೆಳಗಾವಿ ಜಿಲ್ಲೆ ಪೀರನವಾಡಿ ಗ್ರಾಮದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಅಭಿಮಾನಿಗಳು ರಾತ್ರೋರಾತ್ರಿ ತಾವು ಗುರುತಿಸಿದ ಸ್ಥಳದಲ್ಲೇ ರಾಯಣ್ಣನ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಿದ್ದಾರೆ.

ಹಲವು ವರ್ಷಗಳಿಂದ ಪೀರನವಾಡಿ ಗ್ರಾಮದ ಮುಖ್ಯ ಸರ್ಕಲ್ ನಲ್ಲಿ ರಾಯಣ್ಣನ ಮೂರ್ತಿ ಪ್ರತಿಷ್ಠಾಪನೆಗೆ ಆಗ್ರಹಿಸಿ ಹೋರಾಟ ನಡೆಸಲಾಗುತ್ತಿತ್ತು. ಆದರೆ ಮೂರ್ತಿ ಪ್ರತಿಷ್ಠಾಪನೆ ಸಾಧ್ಯವಾಗದ ಹಿನ್ನೆಲೆ ಗುರುವಾರ ತಡರಾತ್ರಿ ರಾಯಣ್ಣನ ಪರಮ ಭಕ್ತರು ಮೂರ್ತಿ ಪ್ರತಿಷ್ಠಾಪನೆ ಮಾಡಿ, ರಾಯಣ್ಣನ ಮೂರ್ತಿಗೆ ದೊಡ್ಡ ಹೂಮಾಲೆ ಹಾಕಿದ್ದಾರೆ. ಇದರ ಜೊತೆಗೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪರ ಘೋಷಣೆಗಳನ್ನು ಕೂಗಿ ವಿಜಯೋತ್ಸವ ಆಚರಿಸಿದರು.

 Sangolli Rayanna Statue Row: Statue Installed Overnight At Peeranwadi In Belagavi

 ಪುತ್ಥಳಿ ತೆರವು ವಿವಾದ; ಬೆಳಗಾವಿಯಲ್ಲಿ ರಾಯಣ್ಣನ ಅಭಿಮಾನಿಗಳ ಬೃಹತ್ ಪ್ರತಿಭಟನೆ ಪುತ್ಥಳಿ ತೆರವು ವಿವಾದ; ಬೆಳಗಾವಿಯಲ್ಲಿ ರಾಯಣ್ಣನ ಅಭಿಮಾನಿಗಳ ಬೃಹತ್ ಪ್ರತಿಭಟನೆ

ಗುರುವಾರ ಪೀರನವಾಡಿ ಗ್ರಾಮದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಮೂರ್ತಿ ಪ್ರತಿಷ್ಠಾಪನೆ ಮಾಡುವಂತೆ ಆಗ್ರಹಿಸಿ ದೊಡ್ಡ ಹೋರಾಟವೇ ನಡೆದಿತ್ತು. ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಸಪ್ಟೆಂಬರ್.29ರಂದು ಈ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದರು.

ಸಂಗೊಳ್ಳಿ ರಾಯಣ್ಣ ಮೂರ್ತಿ ಸ್ಥಾಪನೆ ವಿವಾದಕ್ಕೆ ತೆರೆ:

ಪೀರನವಾಡಿ ಸರ್ಕಲ್ ನಲ್ಲಿ ರಾಯಣ್ಣನ ಅಭಿಮಾನಿಗಳು ರಾತ್ರೋರಾತ್ರಿ ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದಾರೆ. ಈ ಕ್ಷಣವನ್ನು ಹಬ್ಬದಂತೆ ಸಂಭ್ರಮಿಸಿದ ಅಭಿಮಾನಿಗಳು ರಾಯಣ್ಣನ ಪರ ಜಯಘೋಷ ಹಾಕಿದ್ದು, ಮೂರ್ತಿ ಸ್ಥಾಪನೆ ವಿವಾದಕ್ಕೆ ಅಂತ್ಯ ಹಾಡಿದ್ದಾರೆ. ಮೂರ್ತಿ ಪ್ರತಿಷ್ಠಾಪನೆ ಮಾಡಿರುವ ವಿಷಯ ಪೋಲೀಸರಿಗೆ ಗೊತ್ತಾಗುತ್ತಿದ್ದಂತೆಯೇ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ಪರಿಶೀಲನೆ ನಡೆಸಿದ್ದಾರೆ.

English summary
Sangolli Rayanna Statue Row: Statue Installed Overnight At Peeranwadi In Belagavi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X