ಸತೀಶ್ ಜಾರಕಿಹೊಳಿಗೆ ಸಚಿವ ಸ್ಥಾನಕ್ಕೆ ಒತ್ತಾಯಿಸಿ ಬೆಂಗಳೂರು ಚಲೋ

Recommended Video

      ಸತೀಶ್ ಜಾರಕಿಹೊಳಿಗೆ ಸಚಿವ ಸ್ಥಾನ ತಪ್ಪಿದ್ದಕ್ಕೆ ಬೆಂಬಲಿಗರಿಂದ ಬೆಂಗಳೂರು ಚಲೋ ಪ್ರತಿಭಟನೆ | Oneindia kannada

      ಬೆಳಗಾವಿ, ಜೂನ್ 18: ಕಾಂಗ್ರೆಸ್ ಶಾಸಕ ಸತೀಶ್ ಜಾರಕಿಹೊಳಿ ಅವರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ ಸತೀಶ್ ಜಾರಕಿಹೊಳಿ ಬೆಂಬಲಿಗರು ಮತ್ತು ಮಾನವ ಬಂಧುತ್ವ ವೇದಿಕೆಯು 'ಬೆಂಗಳೂರು ಚಲೋ' ಮಾಡಲಿದ್ದಾರೆ. ಹೀಗೊಂದು ಪೋಸ್ಟರ್‌ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

      ಮಾನವ ಬಂಧುತ್ವ ವೇದಿಕೆ ವತಿಯಿಂದ ಈ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದ್ದು ಸತೀಶ್ ಜಾರಕಿಹೊಳಿ ಅವರಿಗೆ ಸಚಿವ ಸ್ಥಾನ ನೀಡಲೇಬೆಕೆಂದು ಒತ್ತಾಯಿಸಿ ಬೆಳಗಾವಿಯಿಂದ ಬೆಂಗಳೂರಿಗೆ ಜೂನ್ 19ರಂದು ಸತೀಶ್ ಜಾರಕೊಹೊಳಿ ಬೆಂಬಲಿಗರು ಹೊರಡಲಿದ್ದಾರೆ. ಜೂನ್ 19ರಂದು ಬೆಳಗವಿಯ ಸಿಟಿ ರೈಲ್ವೇ ನಿಲ್ದಾಣದಿಂದ ಪ್ರತಿಭಟನೆ ಪ್ರಾರಂಭವಾಗಲಿದೆ.

      ಮಾನವ ಬಂಧುತ್ವ ವೇದಿಕೆಯು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ 'ಜನಾಗ್ರಹ ಸಮಾವೇಶವನ್ನು ಹಮ್ಮಿಕೊಂಡಿದ್ದು, ಇಲ್ಲಿಯೂ ಸಹ ಕಾಂಗ್ರೆಸ್ ಹೈಕಮಾಂಡ್‌ ನಿಲುವಿನ ವಿರುದ್ಧ ಪ್ರತಿಭಟನೆ ಮಾಡಲಿದೆ. ಈ ಕಾರ್ಯಕ್ರಮದಲ್ಲಿ ಮಾಜಿ ಮಾಧ್ಯಮ ಸಲಹೆಗಾರ ದಿನೇಶ್ ಅಮಿನ್‌ಮಟ್ಟು ಸೇರಿ ಹಲವು ಮುಖಂಡರು ಭಾಗವಹಿಸಲಿದ್ದಾರೆ.

      Satish Jarakiholi followers doing protest in demand of minster post to their leaders

      ಸತೀಶ್ ಜಾರಕಿಹೊಳಿ ಅವರು ಕಳೆದ ಬಾರಿ ಸಚಿವರಾಗಿದ್ದರು. ಆದರೆ ಈ ಬಾರಿ ಅವರ ಸಹೋದರ ರಮೇಶ್ ಜಾರಕಿಹೊಳಿಗೆ ಸಚಿವ ಸ್ಥಾನ ನೀಡಲಾಗಿದೆ. ಇದರಿಂದ ಸತೀಶ್ ಅವರು ಭಾರಿ ಅಸಮಾಧಾನ ವ್ಯಕ್ತಪಡಿಸಿದರು. ಸಚಿವ ಸ್ಥಾನ ಸಿಗದುದ್ದಕ್ಕೆ ಬೇಸರಗೊಂಡು ಎಐಸಿಸಿ ಕಾರ್ಯದರ್ಶಿ ಸ್ಥಾನಕ್ಕೂ ಅವರು ರಾಜಿನಾಮೆ ನೀಡಿದ್ದಾರೆ.

      ಅತೃಪ್ತ ಶಾಸಕರ ಗುಂಪಿನಲ್ಲಿ ಗುರುತಿಸಿಕೊಂಡಿದ್ದ ಸತೀಶ್ ಅವರು ವೇಣುಗೋಪಾಲ್ ಅವರೊಂದಿಗೆ ಸಭೆಯ ಬಳಿಕ, ಸಚಿವ ಸ್ಥಾನ ಪ್ರಯತ್ನವನ್ನು ಕೈಬಿಟ್ಟಿದ್ದಾಗಿ ಹೇಳಿದ್ದರು. ಆದರೆ ನಮ್ಮೊಂದಿಗೆ ಇದ್ದ ಶಾಸಕರಿಗೆ ನಿಗಮ ಮಂಡಳಿ ಸ್ಥಾನಗಳನ್ನು ಕೊಡಿಸುವ ಪ್ರಯತ್ನ ಮಾಡುತ್ತಿದ್ದೇನೆ ಎಂದಿದ್ದರು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+