ಸತೀಶ್ ಜಾರಕಿಹೊಳಿಗೆ ತಲೆಕೆಟ್ಟಿದೆ: ರಮೇಶ್ ಜಾರಕಿಹೊಳಿ

Recommended Video

      ಮತ ಚಲಾಯಿಸಿ ಮಾತನಾಡಿದ ರಮೇಶ್ ಜಾರಕಿಹೊಳಿ: Lok Sabha Elections 2019 | Oneindia kannada

      ಬೆಳಗಾವಿ, ಏಪ್ರಿಲ್ 23: ತಮ್ಮ ಸಹೋದರ, ಅರಣ್ಯ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ತಲೆಕೆಟ್ಟಿದೆ ಎಂದು ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿಯ ಗೋಗಾಕ್ ನಲ್ಲಿ ಎರಡನೇ ಹಂತದ ಚುನಾವಣೆಯಲ್ಲಿ ಮತಚಲಾಯಿಸಿದ ಗೋಕಾಕ್ ಶಾಸಕ, ಕಾಂಗ್ರೆಸ್ ನಾಯಕ ರಮೇಶ್ ಜಾರಕಿಹೊಳಿ ಪತ್ರಕರ್ತರೊಂದಿಗೆ ಮಾತನಾಡುತ್ತಿದ್ದರು.

      "ನನ್ನ ಸಹೋದರ ಸತೀಶ್ ಜಾರಕಿಹೊಳಿಗೆ ತಲೆ ಕೆಟ್ಟಿದೆ. ಈಗಾಗಲೇ ಒಬ್ಬ ಸಹೋದರನನ್ನು ಅವರು ಹಾಳು ಮಾಡಿದ್ದಾರೆ" ಎಂದು ರಮೇಶ್ ಹೇಳಿದರು. "ನಾನಿನ್ನೂ ತಾಂತ್ರಿಕವಾಗಿ ಕಾಂಗ್ರೆಸ್ ನಲ್ಲಿಯೇ ಇದ್ದೇನೆ. ರಾಜೀನಾಮೆ ನೀಡಿದ ಬಳಿಕೆ ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ" ಎಂದು ಅವರು ಹೇಳಿದರು.

      ಕಾಂಗ್ರೆಸ್ ವಿರುದ್ಧ ಬಂಡಾಯ ಎದ್ದಿದ್ದ ರಮೇಶ್ ಜಾರಕೊಹೊಳಿ ಅವರು ಇತ್ತೀಚೆಗೆ ತಮ್ಮ ಸಚಿವ ಸ್ಥಾನ ಕಳೆದುಕೊಂಡಿದ್ದರು. ಅದಾದ ನಂತರ ಅವರು ಕಾಂಗ್ರೆಸ್ ನಿಂದ ಅಂತರ ಕಾಯ್ದುಕೊಂಡಿದ್ದರು. ಇದೀಗ ಬಿಜೆಪಿ ಸೇರುವ ಸೂಚನೆಯನ್ನೂ ಅವರು ನೀಡಿದ್ದಾರೆ. ಅದಕ್ಕೆ ಪೂರಕವೆಂಬಂತೆ, 'ರಮೇಶ್ ಜಾರಕಿಹೊಳಿ ಅವರು ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಬಹುದು' ಎಂಮದು ಸ್ವತಃ ಸಹೋದರ ಸತೀಶ್ ಜಾರಕಿಹೊಳಿ ಅವರೇ ಹೇಳಿರುವುದು ಹಲವು ಊಹಾಪೋಹಗಳಿಗೆ ಎಡೆ ಮಾಡಿಕೊಟ್ಟಿದೆ.

      Satish Jarakiholi is Mad says Ramesh Jarakiholi

      ಲೋಕಸಭಾ ಚುನಾವಣೆಗೂ ರಮೇಶ್ ಜಾರಕಿಹೊಳಿ ಕಾಂಗ್ರೆಸ್ ಪರ ಕೆಲಸ ಮಾಡದೆ, ಬಿಜೆಪಿಗೆ ಲಾಭವಾಗುವಂತೆ ನೋಡಿಕೊಳ್ಳುತ್ತಿದ್ದಾರೆ ಎಂಬ ಮಾತುಗಳೂ ಕೇಳಿಬರುತ್ತಿದೆ. ಲೋಕಸಭಾ ಚುನಾವಣೆಯ ನಂತರ ರಾಜ್ಯ ರಾಜಕಾರಣದಲ್ಲೂ ಭಾರೀ ಬದಲಾವಣೆಯಾಗುತ್ತದೆ ಎಂಬ ವದಂತಿ ಕೇಳಿಬರುತ್ತಿರುವುದರಿಂದ ರಮೇಶ್ ಜಾರಕಿಹೊಳಿ ಅವರ ನಡೆ ಏನಾಗಲಿದೆ ಎಂಬುದು ಕುತೂಹಲ ಕೆರಳಿಸಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+