ಕೊರೊನಾ ನಡುವೆ ಪಟಾಕಿ ಸಿಡಿಸಿದ ಸತೀಶ್ ಜಾರಕಿಹೊಳಿ ಕಾರ್ಯಕರ್ತರು
ಬೆಳಗಾವಿ, ಜುಲೈ 6: ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಬಳಿಕ ಸತೀಶ್ ಜಾರಕಿಹೊಳಿ ಚಿಕ್ಕೋಡಿ ಆಗಮಿಸಿದ್ದಾರೆ. ಕೊರೊನಾ ನಡುವೆಯೂ ಅವರ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ರಾಜ್ಯ ಕಾರ್ಯಾದ್ಯಕ್ಷರಾಗಿ ಮೊದಲ ಬಾರಿಗೆ ಶೈಕ್ಷಣಿಕ ಜಿಲ್ಲೆ ಚಿಕ್ಕೋಡಿಗೆ ಬಂದ ಹಿನ್ನೆಲೆಯಲ್ಲಿ ಅದ್ದೂರಿಯಾಗಿ ಸ್ವಾಗತ ಕಾಂಗ್ರೆಸ್ ಕಾರ್ಯಕರ್ತರು ಮಾಡಿದ್ದಾರೆ. ಹೂ ಗುಚ್ಚ ನೀಡಿ ಸ್ವಾಗತ ಮಾಡಿದ್ದಾರೆ. ಬಳಿಕ ಚಿಕ್ಕೋಡಿ ಕಾಂಗ್ರೆಸ್ ಕಾರ್ಯಾಲಯದಲ್ಲಿ ಕಾರ್ಯಕರ್ತರು ಜಾರಕಿಹೊಳಿ ಅವರಿಗೆ ಸತ್ಕಾರ ಮಾಡಿ ಗೌರವಿಸಿದ್ದಾರೆ.
ಇದೇ ಸಂದರ್ಭದಲ್ಲಿ ನೂತನ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ಕಾರ್ಯಕರ್ತರನ್ನು ರಾಜ್ಯ ಕಾಂಗ್ರೆಸ್ ಕಾರ್ಯಾದ್ಯಕ್ಷರಿಂದ ಸತ್ಕರಿಸಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡರು. ಕಾಂಗ್ರೆಸ್ ಕಛೇರಿಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕಾರ್ಯಕರ್ತರು ಜಮಾಯಿಸಿದ್ದರು.

ಕಾರ್ಯಕರ್ತರ ಸಂಭ್ರಮದ ವೇಳೆ ಸಾಮಾಜಿಕ ಅಂತರ ಕಾಪಾಡಿರಲಿಲ್ಲ. ಸಾಮಾಜಿಕ ಅಂತರ ಕಲ್ಪಿಸಿ ಕೊಡುವಲ್ಲಿ ಕಾಂಗ್ರೆಸ್ ಮುಖಂಡರು ವಿಫಲವಾಗಿದ್ದಾರೆ. ಕೊರೊನಾ ಸುರಕ್ಷತ ಕ್ರಮಗಳನ್ನು ಸಹ ಸರಿಯಾಗಿ ಪಾಲನೆ ಮಾಡಿರಲಿಲ್ಲ.












Click it and Unblock the Notifications