ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮುಖ್ಯಮಂತ್ರಿಗಳಿಗೂ ಜವಾಬ್ದಾರಿ ಕೊಡಿ ಎಂದು ಗರಂ ಆದ ಸತೀಶ್ ಜಾರಕಿಹೊಳಿ

By ಬೆಳಗಾವಿ ಪ್ರತಿನಿಧಿ
|
Google Oneindia Kannada News

ಬೆಳಗಾವಿ, ಏಪ್ರಿಲ್ 13: "ರಾಜ್ಯದಲ್ಲಿ ದಿನೇ ದಿನೇ ಕೊರೊನಾ ವೈರಸ್ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದೆ. ಆದರೆ ರಾಜ್ಯ ಸರ್ಕಾರವನ್ನು ಕೇಂದ್ರ ಸರ್ಕಾರ ಲೆಕ್ಕಕ್ಕೇ ತೆಗೆದುಕೊಂಡ ಹಾಗೆ ಕಾಣುತ್ತಿಲ್ಲ. ದೆಹಲಿಯಲ್ಲಿ ಕುಳಿತುಕೊಂಡು ನಾವೇ ಎಲ್ಲವನ್ನೂ ನಿಭಾಯಿಸುತ್ತಿದ್ದೇವೆ ಎಂಬಂತೆ ವರ್ತಿಸುತ್ತಿದ್ದಾರೆ. ರಾಜ್ಯ ಸರ್ಕಾರಕ್ಕೆ, ಆಯಾ ರಾಜ್ಯದ ಮುಖ್ಯಮಂತ್ರಿಗಳಿಗೆ ಜವಾಬ್ದಾರಿ ನೀಡಬೇಕು" ಎಂದು ಒತ್ತಾಯಿಸಿದ್ದಾರೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ.

ಗೋಕಾಕ; ರಮೇಶ ಗೆಲುವು, ಸತೀಶಗೆ ಭಾರೀ ಮುಖಭಂಗ!ಗೋಕಾಕ; ರಮೇಶ ಗೆಲುವು, ಸತೀಶಗೆ ಭಾರೀ ಮುಖಭಂಗ!

ಇಂದು ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, "ಈ ಹಿಂದೆ ಪ್ರವಾಹದ ಸಮಯದಲ್ಲೂ ಕೇಂದ್ರ ಸರ್ಕಾರ ಅನ್ಯಾಯ ಮಾಡಿತ್ತು. ಈಗಲೂ ಸರಿಯಾಗಿ ಪರಿಹಾರ ಕೊಡಲು ಸಾಧ್ಯವಾಗುತ್ತಿಲ್ಲ" ಎಂದು ದೂರಿದರು.

Satish Jarkiholi Demanded Central Government To Give Responsibilities To CM

ಅಲ್ಲದೇ ಕೇಂದ್ರ ಸರ್ಕಾರ ಎಲ್ಲ ನಾವೇ ಮಾಡುತ್ತಿದ್ದೇವೆ ಎಂದು ಬಿಂಬಿಸುವ ಕೆಲಸವನ್ನು ಈ ಸಮಯದಲ್ಲಿ ಮಾಡುತ್ತಿರುವುದು ಸರಿಯಲ್ಲ. ಸ್ಥಳೀಯ ಸಮಸ್ಯೆಗಳ ಬಗ್ಗೆ ರಾಜ್ಯ ಸರ್ಕಾರಕ್ಕೆ ಗೊತ್ತಿರುತ್ತದೆ. ಹೀಗಾಗಿ ಮುಖ್ಯಮಂತ್ರಿಗಳಿಗೆ ಹೆಚ್ಚಿನ ಜವಾಬ್ದಾರಿ ನೀಡಬೇಕಿದೆ" ಎಂದು ಆಗ್ರಹಿಸಿದರು.

English summary
Satish jarkiholi angry over central government and demanded to give responsibilities to all chief ministers,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X