ನೀಡಿರುವ ಖಾತೆ ಬಗ್ಗೆ ತೃಪ್ತಿಯಿದೆ ಎಂದ ಸತೀಶ್ ಜಾರಕಿಹೊಳಿ
ಬೆಳಗಾವಿ, ಡಿಸೆಂಬರ್ 28:ನನಗೆ ನೀಡಿರುವ ಖಾತೆ ಬಗ್ಗೆ ತೃಪ್ತಿ ಇದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.
ಶುಕ್ರವಾರ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅರಣ್ಯ ಖಾತೆಯಲ್ಲಿ ಕೆಲಸ ಮಾಡಲು ಅವಕಾಶವಿರುತ್ತದೆ. ಇದರಿಂದ ಸಾರ್ವಜನಿಕರಿಗೆ ಸಾಕಷ್ಟು ಅನುಕೂಲ ಮಾಡಿಕೊಡಬಹುದು ಎಂದು ಹೇಳಿದರು.
ಖಾತೆ ಹಂಚಿಕೆಯಲ್ಲಿ ಯಾವುದೇ ಅನ್ಯಾಯ ಆಗಿಲ್ಲ. ತಮಗೆ ಸಿಕ್ಕಿರುವ ಖಾತೆ ಬಗ್ಗೆ ಯಾವುದೇ ಅಸಮಾಧಾನ ಇಲ್ಲ ಎಂದು ಸ್ಪಷ್ಟನೆ ನೀಡಿದರು.

ಇನ್ನು ರಮೇಶ್ ಜಾರಕಿಹೊಳಿ ಅವರ ಬಗ್ಗೆ ಮಾತನಾಡಿ, ರಮೇಶ್ ಜಾರಕಿಹೊಳಿ ಇನ್ನೂ ನಮ್ಮ ಸಂಪರ್ಕಕ್ಕೆ ಸಿಕ್ಕಿಲ್ಲ. ಪಕ್ಷದ ಹೈಕಮಾಂಡ್ ಸಂಪರ್ಕಕ್ಕೂ ಸಿಕ್ಕಿಲ್ಲ ಎಂದರು.












Click it and Unblock the Notifications