ರಿಲ್ಯಾಕ್ಸ್ ಮೂಡ್‌ನಲ್ಲಿ ಫಿಶ್‌ ಜೊತೆಗೆ ಟೈಂಪಾಸ್ ಮಾಡಿದ ಜಾರಕಿಹೊಳಿ

ಬೆಳಗಾವಿ, ಜೂನ್‌, 03: ಬೆಳಗಾವಿ, ಚಿಕ್ಕೋಡಿ ಲೋಕಸಭಾ ಕ್ಷೇತ್ರಕ್ಕೆ ಮೇ 7ರಂದು ಮತದಾನ ನಡೆದಿದ್ದು, ಫಲಿತಾಂಕ್ಕೆ ಇನ್ನು ಕೆಲವೇ ಕ್ಷಣಗಳು ಬಾಕಿಯಿವೆ. ಇನ್ನು ಚಿಕ್ಕೋಡಿ ಕ್ಷೇತ್ರದಿಂದ ಸ್ಪರ್ಧಿಸಿದ್ದ ಮಗಳು ಪ್ರಿಯಾಂಕ ರಾಜಕೀಯ ಭವಿಷ್ಯದ ಬಗ್ಗೆ ತಲೆಕೆಡಿಸಿಕೊಳ್ಳದೇ ಸಚಿವ ಸತೀಶ್‌ ಜಾರಕೀಹೊಳಿ ಅವರು ಮೀನಿಗೆ ಕಾಳಾಕುವ ಮೂಲಕ ಎಂಜಾಯ್‌ ಮಾಡುತ್ತಿರುವ ದೃಶ್ಯ ಕುತೂಹಲ ಕೆರಳಿಸಿದೆ.

ಸಚಿವ ಸತೀಶ್‌ ಜಾರಕಿಹೊಳಿ ಅವರು, ಮಗಳು ಪ್ರಿಯಾಂಕ ಜಾರಕಿಹೊಳಿ ರಾಜಕೀಯ ಭವಿಷ್ಯದ ಬಗ್ಗೆ ಯಾವುದೇ ಯೋಚನೆಯಿಲ್ಲದೆ, ಮಾರ್ಕಂಡೇಯ ನದಿಯಲ್ಲಿ ಮೀನುಗಳಿಗೆ ಆಹಾರ ನೀಡಿ ಗಮನ ಸೆಳೆದಿದ್ದಾರೆ.

Satish Jarkiholi in Enjoy mood video viral

ಇಂದು (ಜೂನ್‌ 03) ಬೆಳ್ಳಂಬೆಳಗ್ಗೆ ವಿಹಾರಕ್ಕೆ ತೆರಳಿದ ಸತೀಶ್‌ ಜಾರಕಿಹೊಳಿ ಅವರು, ಬೆಳಗಾವಿ ಜಿಲ್ಲೆಯ ಗೋಕಾಕ್‌ ಯೋಗಿ ಕೊಳ್ಳದ ಬಳಿ ಹರಿಯುತ್ತಿರುವ ಮಾರ್ಕಂಡೇಯ ನದಿ ದಂಡೆ ಮೇಲೆ ನಿಂತು ಮೀನುಗಳಿಗೆ ಆಹಾರ ನೀಡಿದ್ದು, ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್‌ ಆಗುತ್ತಿದೆ.

ಯಾರೇ ಗೆದ್ದರೂ ಮೊದಲ ಬಾರಿ ಸಂಸತ್‌ಗೆ: ಚಾಮರಾಜನಗರ ಲೋಕಸಭಾ ಕ್ಷೇತ್ರಕ್ಕೆ ಏಪ್ರಿಲ್‌ 26ರಂದು ಮತದಾನ ನಡೆದಿದ್ದು, ಜೂನ್‌ 4ಕ್ಕೆ ಫಲಿತಾಂಶ ಹೊರಬೀಳಲಿದೆ. ಮತ್ತೊಂದೆಡೆ ಈ ಕ್ಷೇತ್ರದಲ್ಲಿ ಕಾಂಗ್ರೆಸ್‌, ಬಿಜೆಪಿ ಅಭ್ಯರ್ಥಿ ಯಾರೇ ಗೆಲುವು ಸಾಧಿಸಿದರೂ ಮೊದಲ ಬಾರಿಗೆ ಸಂಸತ್‌ ಪ್ರವೇಶ ಮಾಡಲಿದ್ದಾರೆ. ಹಾಗಾದರೆ ಇಲ್ಲಿ ಯಾರಿಗೆ ವರ್ಚಸ್ಸು ಹೆಚ್ಚಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

ಸಿಎಂ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣ ವಿಧಾನಸಭಾ ಕ್ಷೇತ್ರ ಒಳಗೊಂಡಿರುವ ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ನೇರಾ ಹಣಾಹಣಿ ಏರ್ಪಟ್ಟಿದೆ. ಹಾಲಿ ಬಿಜೆಪಿ ವಶದಲ್ಲಿದ್ದ ಕ್ಷೇತ್ರವನ್ನು ಮತ್ತೇ ತನ್ನ ವಶ ಆಗಲಿದೆ ಎಂಬುದು ಕೈ ಪಾಳೇಯದ ವಿಶ್ವಾಸವಾದರೆ, ಕ್ಷೇತ್ರದಲ್ಲಿ ಎರಡನೇ ಬಾರಿ ಕಮಲ ಅರಳಲಿದೆ ಎಂಬುದು ಬಿಜೆಪಿಗರ ಮಾತಾಗಿದೆ.

ಮೋದಿ ಅಲೆ- ಸಿದ್ದರಾಮಯ್ಯ ಹವಾ ಎರಡರ ನಡುವೆ ಜಂಗಿಕುಸ್ತಿ ನಡೆದಿರುವುದರಿಂದ ರಾಜ್ಯದ ಹೈವೊಲ್ಟೆಜ್ ಕ್ಷೇತ್ರಗಳಲ್ಲಿ ಚಾಮರಾಜನಗರ ಕೂಡ ಒಂದಾಗಿದೆ.

ಇನ್ನು ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಶಾಸಕ ಎಸ್.ಬಾಲರಾಜು ಬಿಜೆಪಿ ಹಾಗೂ ಜಾತ್ಯತೀತ ಜನತಾದಳ ಮೈತ್ರಿ ಅಭ್ಯರ್ಥಿಯಾಗಿದ್ದು, ಕಾಂಗ್ರೆಸ್‌​ನಿಂದ ಸಚಿವ ಎಚ್.ಸಿ.ಮಹಾದೇವಪ್ಪ ಪುತ್ರ ಸುನಿಲ್ ಬೋಸ್ ಕಣಕ್ಕಿಳಿದಿದ್ದಾರೆ. ಚಾಮರಾಜನಗರ ಲೋಕಸಭಾ ಕ್ಷೇತ್ರ ಪರಿಶಿಷ್ಟ ಜಾತಿಗೆ ಮೀಸಲಾದ ಕ್ಷೇತ್ರವಾಗಿದೆ.

ಕ್ಷೇತ್ರದಲ್ಲಿ ಬಿಜೆಪಿಯ ಓರ್ವ ಶಾಸಕನೂ ಇಲ್ಲದಿರುವುದು, ಸಿದ್ದರಾಮಯ್ಯ ವರುಣ ಕೂಡ ಕ್ಷೇತ್ರಕ್ಕೆ ಒಳಪಡುವುದು ಹಾಗೂ ಗ್ಯಾರಂಟಿಗಳ ಮಹಿಮೆಯಿಂದ ಕಾಂಗ್ರೆಸ್ ಗೆಲ್ಲಲ್ಲಿದೆ ಎಂಬುದು ಕೈ ಪಕ್ಷದ ವಿಶ್ವಾಸವಾಗಿದೆ. ಆದರೆ, ಮೋದಿ ನಾಮಬಲ ಹಾಗೂ ಬಾಲರಾಜು ಸಜ್ಜನ ರಾಜಕಾರಣಿ ಎಂಬ ದಿಸೆಯಲ್ಲಿ ಮತಗಳು ಸಿಕ್ಕು ಕಮಲ ಅರಳುವ ಲೆಕ್ಕಾಚಾರದಲ್ಲಿ ಬಿಜೆಪಿಯದ್ದಾಗಿದೆ.

ಚಾಮರಾಜನಗರ ಜಿಲ್ಲೆಯ 4 ವಿಧಾನಸಭಾ ಕ್ಷೇತ್ರಗಳು ಹಾಗೂ ಮೈಸೂರು ಜಿಲ್ಲೆಯ 4 ವಿಧಾನಸಭಾ ಕ್ಷೇತ್ರಗಳು ಸೇರಿ ಒಟ್ಟು 8 ವಿಧಾನಸಭಾ ಕ್ಷೇತ್ರಗಳು ಚಾಮರಾಜನಗರ ಲೋಕಸಭಾ ಕ್ಷೇತ್ರಕ್ಕೆ ಒಳಪಡಲಿದೆ. ಕಾಂಗ್ರೆಸ್‌ನ 7 ಹಾಗೂ ಜೆಡಿಎಸ್‌ನ ಓರ್ವ ಶಾಸಕರು ಕ್ಷೇತ್ರದಲ್ಲಿದ್ದಾರೆ.

ಚಾಮರಾಜನಗರ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಒಟ್ಟು 14 ಮಂದಿ ಕಣದಲ್ಲಿದ್ದು, ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ನೇರಾ ಹಣಾಹಣಿ ಇದೆ. ಕಳೆದ ಚುನಾವಣೆಯಲ್ಲಿ ಬಿಎಸ್ಪಿ ಉತ್ತಮ ಸ್ಪರ್ಧೆ ಒಡ್ಡಿದ್ದರಿಂದ ಈ ಬಾರಿ ಆನೆಯ ಮತ ಗಳಿಕೆಯೂ ಫಲಿತಾಂಶದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+