ಶಿವಾಜಿ ಪುತ್ಥಳಿ ಸ್ಥಾಪನೆಗೆ ಶಾಸಕ ಸತೀಶ್​ ಜಾರಕಿಹೊಳಿ ಭೂಮಿ ಪೂಜೆ

ಬೆಳಗಾವಿ, ಅಕ್ಟೋಬರ್ 26: ಬೆಳಗಾವಿಯ ಹೊನಗಾ ಗ್ರಾಮದಲ್ಲಿಬೈರವನಾಥ್ ಚೌಕ್ ನಲ್ಲಿ ಶಿವಾಜಿ ಮಹಾರಾಜರ ಪುತ್ಥಳಿ ಸ್ಥಾಪನೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್​ ಜಾರಕಿಹೊಳಿ ಭೂಮಿ ಪೂಜೆಯನ್ನು ನೆರವೇರಿಸಿದರು.

ಈ ಸಂದರ್ಭ ಮಾತನಾಡಿದ ಸತೀಶ್​ ಜಾರಕಿಹೊಳಿ ಅವರು, "ಶಿವಾಜಿ ಮಹಾರಾಜರು ರಾಷ್ಟ್ರ ಕಂಡ ಅಪ್ರತಿಮ ನಾಯಕ. ಎಲ್ಲಾವರ್ಗದ ಜನರನ್ನೂ ಅವರು ಜೊತೆಯಲ್ಲಿ ಕರೆದುಕೊಂಡು ಸಮಗ್ರ ಅಭಿವೃದ್ಧಿಯ ಕನಸು ಕಂಡಿದ್ದರು. ಆ ದಿಕ್ಕಿನಲ್ಲಿ ಕೆಲಸ ಮಾಡಿದ ಶಿವಾಜಿ ಮಹಾರಾಜರು ಮಹಾಪುರುಷರ ಸಾಲಿನಲ್ಲಿ ನಿಲ್ಲುತ್ತಾರೆ. ಅವರ ಸ್ಮರಣಾರ್ಥ ಕೆಲಸಗಳು ನಡೆಯಬೇಕಿದೆ' ಎಂದರು.

Belagavi: Satish Jarkiholi Land Puja For Construction Of Shivaji Statue

ಎಲ್ಲಾ ಗ್ರಾಮಗಳಲ್ಲೂ ಶಿವಾಜಿ ಮಹಾರಾಜರ ಪುತ್ಥಳಿ ಸ್ಥಾಪನೆ ನಡೆಯುತ್ತಿದೆ. ಹೊನಗಾ ಗ್ರಾಮದಲ್ಲೂ ಶಿವಾಜಿ ಮಹಾರಾಜರ ಪುತ್ಥಳಿ ಸ್ಥಾಪಿಸಲಾಗುತ್ತಿರುವುದು ಉತ್ತಮ ಕೆಲಸ ಎಂದು ಸಂತಸ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಅರುಣ ಕಟಾಂಬಳೆ, ಜಿಲ್ಲಾ ಪಂಚಾಯತ್ ಸದಸ್ಯ ಸಿದ್ದು ಸುಣಗಾರ್, ಎಪಿಎಂಸಿ ಮಾಜಿ ಅಧ್ಯಕ್ಷ ಆನಂದ ಪಾಟೀಲ, ತಾಲೂಕು ಪಂಚಾಯತ್ ಸದಸ್ಯ ಚಂದ್ರಾ ನಾಯ್ಕ‌ ಇದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+