ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಳಗಾವಿ ಲೋಕಸಭಾ ಉಪ ಚುನಾವಣೆ: ಹೈಕಮಾಂಡ್ ಹೇಳಿದ್ರೆ ಸ್ಪರ್ಧೆಗೆ ಸಿದ್ಧ ಎಂದ ಜಾರಕಿಹೊಳಿ!

|
Google Oneindia Kannada News

ಬೆಂಗಳೂರು, ಮಾ. 18: 'ಸಿಡಿ' ಪ್ರಕರಣದ ಬೆನ್ನಲ್ಲಿಯೇ ರಾಜ್ಯದಲ್ಲಿ ಮೂರು ಕ್ಷೇತ್ರಗಳಿಗೆ ಮಹತ್ವದ ಉಪ ಚುನಾವಣೆ ಎದುರಾಗಿದೆ. ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಎಲ್ಲ ಉಪ ಚುನಾವಣೆಗಳಲ್ಲಿ ಭರ್ಜರಿ ವಿಜಯ ಸಾಧಿಸಿದ್ದ ಬಿಜೆಪಿಗೆ ಈ ಉಪ ಚುನಾವಣೆಯಲ್ಲಿ 'ಸಿಡಿ' ಸವಾಲು ಎದುರಾಗಿದೆ.

ಇದೇ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕ, ಮಾಜಿ ಸಚಿವ ಸತೀಶ್ ಜಾರಕಿಹೊಳಿ ಅವರು ಉಪ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಬಗ್ಗೆ ಮಹತ್ವದ ಹೇಳಿಕೆ ನೀಡಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ ಮಾತನಾಡಿರುವ ಅವರು, ಬೆಳಗಾವಿ ಉಪ ಚುನಾವಣೆಗೆ ಹೈಕಮಾಂಡ್ ಅಭ್ಯರ್ಥಿಯನ್ನು ಅಂತಿಮಗೊಳಿಸುತ್ತದೆ. ಆದರೆ ಹೈಕಮಾಂಡ್ ಸೂಚಿಸಿದರೆ ನಾನು ಉಪ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಸಿದ್ದನಿದ್ದೇನೆ. ನನ್ನೊಂದಿಗೆ ಇನ್ನೂ ಎರಡ್ಮೂರು ಹೆಸರುಗಳು ಚರ್ಚೆಯಲ್ಲಿವೆ ಎಂದು ಮೊದಲೇ ಹೇಳಿದ್ದೇನೆ. ಹೀಗಾಗಿ ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನ ಅಂತಿಮ ಎಂದರು.

ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಬಯಸಿರುವ ಎರಡ್ಮೂರು ಜನರಲ್ಲಿ ನನ್ನ ಹೆಸರೂ ಇದೆ. ಈ ಬಗ್ಗೆ ಪಕ್ಷದೊಳಗೆ ಚರ್ಚೆ ನಡೆಯುತ್ತಿದೆ. ಇನ್ನೆರಡು ದಿನಗಳಲ್ಲಿ ಅಭ್ಯರ್ಥಿ ಯಾರು ಎಂಬುದು ಗೊತ್ತಾಗಲಿದೆ ಎಂದು ಹೇಳಿದರು.

Satish Jarkiholi Reaction on Contesting from Belagavi Lok Sabha By poll

ಸುರೇಶ್ ಅಂಗಡಿ ಅವರ ಅಕಾಲಿಕ ನಿಧನದಿಂದ ಬೆಳಗಾವಿ ಲೋಕಸಭಾ ಕ್ಷೇತ್ರ ತೆರುವಾಗಿದೆ. ಇದೀಗ ಆ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆ ಯಾಗಿದ್ದು, ಏ. 17 ರಂದು ಮತದಾನ ನಡೆಯಲಿದೆ. ನಾಮಪತ್ರ ಸಲ್ಲಿಸಲು ಏ. 4 ಕೊನೆಯ ದಿನವಾಗಿದ್ದು, ಮೇ 2 ರಂದು ಮತ ಎಣಿಕೆ ನಡೆಯಲಿದೆ.

English summary
Satish Jarkiholi Reaction on Contesting from Belagavi Lok Sabha By poll.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X