ಬೆಳಗಾವಿ ಜಿಲ್ಲೆ ವಿಭಜನೆ ಕುರಿತು ಮಹತ್ವದ ಸುಳಿವು ನೀಡಿದ ಸತೀಶ್ ಜಾರಕಿಹೊಳಿ
ಬೆಳಗಾವಿ, ಆಗಸ್ಟ್, 16: ಕರ್ನಾಟಕ ಅತೀದೊಡ್ಡ ಜಿಲ್ಲೆಯಾದ ಬೆಳಗಾವಿಯನ್ನು ವಿಭಜನೆ ಮಾಡುವಂತೆ ಮೊದಲಿನಿಂದಲೂ ಒತ್ತಾಯಗಳು ಬರುತ್ತಲೇ ಇವೆ. ಇದೀಗ ಸಚಿವ ಸತೀಶ್ ಜಾರಕಿಹೊಳಿಯವರು ಜಿಲ್ಲೆ ವಿಭಜನೆ ಬಗ್ಗೆ ಮಹತ್ವದ ಸುಳಿವು ನೀಡಿದ್ದಾರೆ.
ಸುಮಾರು 13,400 ಚದರ ಕಿಲೋಮೀಟರ್ ಭೂಪ್ರದೇಶವನ್ನು ಒಳಗೊಂಡಿರುವ, ಎರಡು ಲೋಕಸಭಾ ಕ್ಷೇತ್ರಗಳು ಮತ್ತು 18 ವಿಧಾನಸಭಾ ಕ್ಷೇತ್ರಗಳ ಭಾಗವನ್ನು ವ್ಯಾಪಿಸಿರುವ ಕರ್ನಾಟಕದ ಅತಿದೊಡ್ಡ ಜಿಲ್ಲೆಯಾದ ಬೆಳಗಾವಿಯನ್ನು ಮೂರು ಭಾಗಗಳಾಗಿ ವಿಭಜಿಸುವ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಕೊಳಿ ಸಳಿವು ನೀಡಿದ್ದಾರೆ.

ಬೆಳಗಾವಿ ಜಿಲ್ಲೆಯನ್ನು ಗೋಕಾಕ್, ಚಿಕ್ಕೋಡಿ ಹಾಗೂ ಬೆಳಗಾವಿ ಎಂಬ ಮೂರು ಜಿಲ್ಲೆಗಳನ್ನಾಗಿ ಮಾಡಲು ಒತ್ತಡ ಬರುತ್ತಲೇ ಇದೆ. ಈ ವಿಚಾರ ಇತ್ತೀಚೆಗೆ ಮುಖ್ಯಮಂತ್ರಿಗಳ ಜೊತೆ ನಡೆದ ಶಾಸಕರ ಸಭೆಯಲ್ಲೂ ಮುನ್ನೆಲೆಗೆ ಬಂದಿತ್ತು. ಅಷ್ಟೇ ಅಲ್ಲದೆ ಜಿಲ್ಲೆ ವಿಭಜನೆ ಕುರಿತಾಗಿ ಸಚಿವ ಸತೀಶ್ ಜಾರಕಿಹೊಳಿ ಕೂಡ ಮುಂದಾಗಿದ್ದಾರೆ. ಹಾಗೆಯೇ ಅವರು ಸಿಎಂ ಸಿದ್ದರಾಮಯ್ಯ ಜೊತೆ ಬೆಳಗಾವಿ ಜಿಲ್ಲೆ ವಿಭಜನೆ ಬಗ್ಗೆ ಚರ್ಚಿಸಲು ನಿರ್ಧರಿಸಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.
ಬೆಳಗಾವಿಯು ರಾಜ್ಯದ ಅತೀ ದೊಡ್ಡ ಜಿಲ್ಲೆಯಾಗಿದೆ. 14 ತಾಲೂಕುಗಳನ್ನು ಹೊಂದಿರುವ ಈ ಜಿಲ್ಲೆಯಲ್ಲಿ 50ಲಕ್ಷಕ್ಕೂ ಹೆಚ್ಚು ಜನರು ವಾಸಿಸುತ್ತಿದ್ದಾರೆ. 18 ವಿಧಾನಸಭೆ, 3 ಲೋಕಸಭೆ ಕ್ಷೇತ್ರದ ವ್ಯಾಪ್ತಿಯನ್ನು ಹೊಂದಿರುದೆ. ಇಲ್ಲಿ 14 ತಾಲೂಕು, 6 ಆರ್‌ಟಿಓ ಕಚೇರಿ, 506 ಗ್ರಾಮ ಪಂಚಾಯತ್, 345 ತಾಲೂಕು ಪಂಚಾಯತ್ ಸದಸ್ಯರು, 90 ಜಿಲ್ಲಾ ಪಂಚಾಯತ್ ಸದಸ್ಯರು ಇದ್ದಾರೆ.
ಬೆಳಗಾವಿಯ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು, ಬೆಳಗಾವಿಯನ್ನು ಗೋಕಾಕ, ಚಿಕ್ಕೋಡಿ ಮತ್ತು ಬೆಳಗಾವಿ ಹೀಗೆ ಮೂರು ಪ್ರತೇಕ ಜಿಲ್ಲೆಗಳಾಗಿ ವಿಭಜಿಸುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೊತೆ ಮಾತನಾಡುತ್ತೇನೆ ಅಂತಲೂ ಹೇಳಿದ್ದಾರೆ. ಹಾಗೆಯೇ ಈ ಕುರಿತು ಇತ್ತೀಚೆಗೆ ಇಲ್ಲಿನ ಶಾಸಕರೊಂದಿಗೆ ನಡೆಸಿದ ಸಭೆಯ ಸಂದರ್ಭದಲ್ಲಿ ಪ್ರಸ್ತಾಪಿಸಿದ್ದಾರೆ. ಆದ್ದರಿಂದ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿದೆ.
ಬೆಂಗಳೂರಿನಲ್ಲಿ ನಡೆದ ಬೆಳಗಾವಿ ಜಿಲ್ಲೆಯ ಶಾಸಕರ ಸಭೆಯಲ್ಲಿ ಜಿಲ್ಲಾ ವಿಭಜನೆಯ ಬಗ್ಗೆ ಚರ್ಚೆಯಾಗಿದ್ದು, ಈ ವೇಳೆ ಗೋಕಾಕ ಹಾಗೂ ಚಿಕ್ಕೋಡಿ ಪ್ರತ್ಯೇಕ ಜಿಲ್ಲಾ ರಚನೆ ಆಗಲೇಬೇಕು ಎಂದು ಒತ್ತಾಯಿಸಲಾಗಿದೆ. ಇನ್ನು ಈ ಬಗ್ಗೆ ಸರ್ಕಾರ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದರು.
ಶೀಘ್ರವೇ ಹೊಸ ಬೆಳಗಾವಿ ತಾಲೂಕು ಆಗಬೇಕು ಎಂಬುದು ನಮ್ಮ ಬೇಡಿಕೆಯಾಗಿದೆ. ಬೆಳಗಾವಿ ಉತ್ತರ, ದಕ್ಷಿಣ ಮತ್ತು ಗ್ರಾಮೀಣ ಇವುಗಳಲ್ಲಿ ಯಾವುದಾದರೂ ಒಂದು ತಾಲೂಕು ಆಗಬಹುದು. ಬೆಳಗಾವಿ ನಗರ ಮತ್ತು ಜಿಲ್ಲೆಯ ಅಭಿವೃದ್ಧಿಗೆ ಅಗತ್ಯವಿರುವ ಯೋಜನೆಗಳನ್ನು ಕಳೆದ ಮೂರು ತಿಂಗಳಲ್ಲಿ ಗುರುತಿಸಿಕೊಂಡಿದ್ದೇವೆ ಎಂದರು.












Click it and Unblock the Notifications