'ಎಲ್ಲವನ್ನೂ ಸಿಎಂ ಮಾಡೋದಾದ್ರೆ ಬೆಳಗಾವಿಯ ನಾಲ್ವರು ಸಚಿವರು ಯಾಕೆ?' - ಸತೀಶ್ ಜಾರಕಿಹೊಳಿ
ಬೆಳಗಾವಿ, ಮೇ 31: ''ಎಲ್ಲವನ್ನೂ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರೇ ಮಾಡುವುದಾದರೆ ಜಿಲ್ಲೆಯ ನಾಲ್ವರು ಸಚಿವರು ಯಾಕಾಗಿ ಇದ್ದಾರೆ'' ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಟೀಕಿಸಿದ್ದಾರೆ.
ಮಂಗಳ ಬಿಮ್ಸ್ ಆಸ್ಪತ್ರೆಯಲ್ಲಿನ ಅವ್ಯವಸ್ಥೆ ಸರಿಪಡಿಸಲು ಸ್ವತಃ ಮುಖ್ಯಮಂತ್ರಿಗಳೇ ಬೆಳಗಾವಿಗೆ ಬರುವುದಾಗಿ ಹೇಳಿದ್ದರು. ಈ ವಿಚಾರದಲ್ಲಿ ಜಿಲ್ಲೆಯ ಸಚಿವರುಗಳ ಬಗ್ಗೆ ಲೇವಡಿ ಮಾಡಿರುವ ಸತೀಶ್ ಜಾರಕಿಹೊಳಿ, ''ಮುಖ್ಯಮಂತ್ರಿಗಳೇ ಬೆಳಗಾವಿಗೆ ಬರುವುದಾಗಿ ಹೇಳಿದ್ದಾರೆ. ಎಲ್ಲವೂ ಮುಖ್ಯಮಂತ್ರಿಗಳೇ ಮಾಡುವುದಾದರೆ ಜಿಲ್ಲೆಯ ನಾಲ್ವರು ಸಚಿವರು ಯಾಕೆ ಬೇಕು'' ಎಂದು ಪ್ರಶ್ನಿಸಿದ್ದಾರೆ.
ಬೆಳಗಾವಿ ಫಲಿತಾಂಶ: "ಏನಯ್ಯ ಸತೀಶ್, ಎಷ್ಟು ಟೆನ್ಷನ್ ಕೊಡ್ತಿಯಲ್ಲಪ್ಪ''
''ಜಿಲ್ಲೆಯಲ್ಲಿರುವ ಮಂತ್ರಿಗಳು ಬಿಮ್ಸ್‌ಗೆ ತೆರಳಿ ಸಭೆ ನಡೆಸಿ, ಏನು ಸಮಸ್ಯೆ ಎಂಬುವುದನ್ನು ಸರಿಯಾಗಿ ಕಂಡುಕೊಂಡು ಸಮಸ್ಯೆ ಪರಿಹರಿಸಬೇಕು. ಅದನ್ನು ಬಿಟ್ಟು ಎಲ್ಲವೂ ಮುಖ್ಯಮಂತ್ರಿಗಳೇ ಮಾಡುವುದೆಂದರೇ ಎಷ್ಟು ಸರಿ? ಅಷ್ಟಕ್ಕೂ ಎಲ್ಲವೂ ಮುಖ್ಯಮಂತ್ರಿಗಳೇ ಮಾಡಲು ಆಗುವುದಿಲ್ಲ'' ಎಂದು ಕೂಡಾ ಹೇಳಿದರು.

ಇನ್ನು ''ಯಾವುದೇ ಸರ್ಕಾರ ಆಡಳಿತ ನಡೆಸುವುದಾದರೂ ಆಯಾ ಜಿಲ್ಲೆಯ ಉಸ್ತುವಾರಿ ಸಚಿವರು ಅದೇ ಜಿಲ್ಲೆಯವರು ಆಗಿರಬೇಕು ಎಂದು ನಾನು ಈ ಹಿಂದೆಯೇ ಹೇಳಿದ್ದೆ. ಉಸ್ತುವಾರಿ ಸಚಿವರು ಅದೇ ಜಿಲ್ಲೆಯವರಾದರೆ ಅವರಿಗೆ ಅಲ್ಲಿನ ಸಮಸ್ಯೆಗಳ ಬಗ್ಗೆ ತಿಳಿದಿರುತ್ತದೆ. ಹಾಗಾದರೆ ಸಮಸ್ಯೆ ಬಗೆಹರಿಸಲು ಸುಲಭವಾಗುತ್ತದೆ'' ಎಂದು ಅಭಿಪ್ರಾಯಿಸಿದರು.
ಸುರೇಶ್ ಅಂಗಡಿ ನಿಧನದಿಂದಾಗಿ ತೆರವಾಗಿದ್ದ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯು ಮೇ 2 ರಂದು ನಡೆದಿದ್ದು, ಬಿಜೆಪಿಯ ದಿವಂಗತ ಸುರೇಶ್ ಅಂಗಡಿ ಪತ್ನಿ ಮಂಗಳಾ ಸುರೇಶ್ ಅಂಗಡಿ ಎದುರು ಭಾರೀ ಪೈಪೋಟಿ ನೀಡಿ ಸತೀಶ್ ಜಾರಕಿಹೊಳಿ ಪರಾಭವಗೊಂಡಿದ್ದರು.
(ಒನ್ಇಂಡಿಯಾ ಸುದ್ದಿ)
-
Saaniya Chandok: ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ಕುಟುಂಬಕ್ಕೆ ಸೊಸೆಯಾಗಿ ಬಂದ ಸಾನಿಯಾ ಚಾಂದೋಕ್ ಯಾರು? -
Abhishek Sharma: 'ಅಭಿಷೇಕ್ ಶರ್ಮಾ ಒಬ್ಬ ಬ್ಲೈಂಡ್ ಸ್ಲಾಗರ್': ರೊಚ್ಚಿಗೆದ್ದ ಅಭಿಮಾನಿಗಳು -
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Bengaluru Viral Tweet: ಹೋಳಿ ಹಬ್ಬ: ಬೆಂಗಳೂರು ಬೋರಿಂಗ್ ಎಂದ ನಾರ್ಥಿ ಯುವತಿ ಟ್ವೀಟ್ ವೈರಲ್: ಕನ್ನಡಿಗರು ಹೇಳಿದ್ದೇನು -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
KEA: ಯುಜಿಸಿಇಟಿ-ಪಿಜಿನೀಟ್ ಅಭ್ಯರ್ಥಿಗಳ ಗಮನಕ್ಕೆ, ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ -
ಬೆಂಗಳೂರು ಏರ್ಪೋರ್ಟ್ಗೆ ಸತತ 4ನೇ ಬಾರಿಯೂ ವಿಶ್ವದ 'ಅತ್ಯುತ್ತಮ ಏರ್ಪೋರ್ಟ್'ಪ್ರಶಸ್ತಿ












Click it and Unblock the Notifications