ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

'ಎಲ್ಲವನ್ನೂ ಸಿಎಂ ಮಾಡೋದಾದ್ರೆ ಬೆಳಗಾವಿಯ ನಾಲ್ವರು ಸಚಿವರು ಯಾಕೆ?' - ಸತೀಶ್‌ ಜಾರಕಿಹೊಳಿ

|
Google Oneindia Kannada News

ಬೆಳಗಾವಿ, ಮೇ 31: ''ಎಲ್ಲವನ್ನೂ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪನವರೇ ಮಾಡುವುದಾದರೆ ಜಿಲ್ಲೆಯ ನಾಲ್ವರು ಸಚಿವರು ಯಾಕಾಗಿ ಇದ್ದಾರೆ'' ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ ಟೀಕಿಸಿದ್ದಾರೆ.

ಮಂಗಳ ಬಿಮ್ಸ್‌ ಆಸ್ಪತ್ರೆಯಲ್ಲಿನ ಅವ್ಯವಸ್ಥೆ ಸರಿಪಡಿಸಲು ಸ್ವತಃ ಮುಖ್ಯಮಂತ್ರಿಗಳೇ ಬೆಳಗಾವಿಗೆ ಬರುವುದಾಗಿ ಹೇಳಿದ್ದರು. ಈ ವಿಚಾರದಲ್ಲಿ ಜಿಲ್ಲೆಯ ಸಚಿವರುಗಳ ಬಗ್ಗೆ ಲೇವಡಿ ಮಾಡಿರುವ ಸತೀಶ್‌ ಜಾರಕಿಹೊಳಿ, ''ಮುಖ್ಯಮಂತ್ರಿಗಳೇ ಬೆಳಗಾವಿಗೆ ಬರುವುದಾಗಿ ಹೇಳಿದ್ದಾರೆ. ಎಲ್ಲವೂ ಮುಖ್ಯಮಂತ್ರಿಗಳೇ ಮಾಡುವುದಾದರೆ ಜಿಲ್ಲೆಯ ನಾಲ್ವರು ಸಚಿವರು ಯಾಕೆ ಬೇಕು'' ಎಂದು ಪ್ರಶ್ನಿಸಿದ್ದಾರೆ.

ಬೆಳಗಾವಿ ಫಲಿತಾಂಶ: "ಏನಯ್ಯ ಸತೀಶ್, ಎಷ್ಟು ಟೆನ್ಷನ್ ಕೊಡ್ತಿಯಲ್ಲಪ್ಪ''

''ಜಿಲ್ಲೆಯಲ್ಲಿರುವ ಮಂತ್ರಿಗಳು ಬಿಮ್ಸ್‌ಗೆ ತೆರಳಿ ಸಭೆ ನಡೆಸಿ, ಏನು ಸಮಸ್ಯೆ ಎಂಬುವುದನ್ನು ಸರಿಯಾಗಿ ಕಂಡುಕೊಂಡು ಸಮಸ್ಯೆ ಪರಿಹರಿಸಬೇಕು. ಅದನ್ನು ಬಿಟ್ಟು ಎಲ್ಲವೂ ಮುಖ್ಯಮಂತ್ರಿಗಳೇ ಮಾಡುವುದೆಂದರೇ ಎಷ್ಟು ಸರಿ? ಅಷ್ಟಕ್ಕೂ ಎಲ್ಲವೂ ಮುಖ್ಯಮಂತ್ರಿಗಳೇ ಮಾಡಲು ಆಗುವುದಿಲ್ಲ'' ಎಂದು ಕೂಡಾ ಹೇಳಿದರು.

Satish Jarkiholi slams over BJPs four ministers from Belagavi

ಇನ್ನು ''ಯಾವುದೇ ಸರ್ಕಾರ ಆಡಳಿತ ನಡೆಸುವುದಾದರೂ ಆಯಾ ಜಿಲ್ಲೆಯ ಉಸ್ತುವಾರಿ ಸಚಿವರು ಅದೇ ಜಿಲ್ಲೆಯವರು ಆಗಿರಬೇಕು ಎಂದು ನಾನು ಈ ಹಿಂದೆಯೇ ಹೇಳಿದ್ದೆ. ಉಸ್ತುವಾರಿ ಸಚಿವರು ಅದೇ ಜಿಲ್ಲೆಯವರಾದರೆ ಅವರಿಗೆ ಅಲ್ಲಿನ ಸಮಸ್ಯೆಗಳ ಬಗ್ಗೆ ತಿಳಿದಿರುತ್ತದೆ. ಹಾಗಾದರೆ ಸಮಸ್ಯೆ ಬಗೆಹರಿಸಲು ಸುಲಭವಾಗುತ್ತದೆ'' ಎಂದು ಅಭಿಪ್ರಾಯಿಸಿದರು.

ಸತೀಶ್ ಜಾರಕಿಹೊಳಿ ಅಂದು ಹೇಳಿದ್ದ ಆ ಒಂದು 'ವಸ್ತು' ಇದೇ ಏನು?ಸತೀಶ್ ಜಾರಕಿಹೊಳಿ ಅಂದು ಹೇಳಿದ್ದ ಆ ಒಂದು 'ವಸ್ತು' ಇದೇ ಏನು?

ಸುರೇಶ್ ಅಂಗಡಿ ನಿಧನದಿಂದಾಗಿ ತೆರವಾಗಿದ್ದ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯು ಮೇ 2 ರಂದು ನಡೆದಿದ್ದು, ಬಿಜೆಪಿಯ ದಿವಂಗತ ಸುರೇಶ್ ಅಂಗಡಿ ಪತ್ನಿ ಮಂಗಳಾ ಸುರೇಶ್ ಅಂಗಡಿ ಎದುರು ಭಾರೀ ಪೈಪೋಟಿ ನೀಡಿ ಸತೀಶ್‌ ಜಾರಕಿಹೊಳಿ ಪರಾಭವಗೊಂಡಿದ್ದರು.

(ಒನ್ಇಂಡಿಯಾ ಸುದ್ದಿ)

English summary
If CM does everything, why are the four ministers of Belagavi: KPCC working president Satish Jarkiholi slams over BJPs four ministers from Belagavi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X