ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಳಗಾವಿ ರಾಜಕಾರಣದಿಂದ ಹೊಸ ಸುದ್ದಿಯೊಂದು ಹೊರಬಂತು!

|
Google Oneindia Kannada News

Recommended Video

ಲೋಕಸಭೆ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಸತೀಶ್ ಜಾರಕಿಹೊಳಿ | Oneindia Kannada

ಬೆಳಗಾವಿ, ಅಕ್ಟೋಬರ್ 16 : ಬೆಳಗಾವಿ ರಾಜಕೀಯದಿಂದ ಹೊಸ ಸುದ್ದಿಯೊಂದು ಹೊರಬಿದ್ದಿದೆ. ಜಾರಕಿಹೊಳಿ ಕುಟುಂಬದ ಪ್ರಭಾವಿ ನಾಯಕ ಸತೀಶ್ ಜಾರಕಿಹೊಳಿ 2019ರ ಲೋಕಸಭೆ ಚುನಾವಣೆಗೆ ಸ್ಪರ್ಧೆ ಮಾಡಲಿದ್ದಾರೆ.

ಕಳೆದ ಒಂದು ತಿಂಗಳಿನಿಂದ ಬೆಳಗಾವಿಯ ಜಾರಕಿಹೊಳಿ ಸಹೋದರರು ವಿವಿಧ ಕಾರಣಗಳಿಗೆ ಸುದ್ದಿಯಲ್ಲಿದ್ದಾರೆ. ಹೀಗಿರುವಾಗಲೇ ಲೋಕಸಭೆ ಚುನಾವಣೆಗೆಸ ಸತೀಶ್ ಜಾರಕಿಹೊಳಿ ಸ್ಪರ್ಧೆ ಮಾಡುವ ಕುರಿತ ಸುದ್ದಿ ಬಂದಿದೆ.

2019ರ ಲೋಕಸಭೆ ಚುನಾವಣೆಗೆ ಪ್ರಭಾಕರ ಕೋರೆ ಸ್ಪರ್ಧೆ2019ರ ಲೋಕಸಭೆ ಚುನಾವಣೆಗೆ ಪ್ರಭಾಕರ ಕೋರೆ ಸ್ಪರ್ಧೆ

ಸತೀಶ್ ಜಾರಕಿಹೊಳಿ ಬೆಳಗಾವಿಯ ಜಿಲ್ಲೆಯಲ್ಲಿ ಪರಿಶಿಷ್ಟ ಪಂಗಡಕ್ಕೆ ಮೀಸಲಾದ ಏಕೈಕ ಕ್ಷೇತ್ರ ಯಮಕನಮರಡಿಯ ಶಾಸಕರು. 2008ರಲ್ಲಿ ಈ ಕ್ಷೇತ್ರ ಅಸ್ತಿತ್ವಕ್ಕೆ ಬಂದಿತು. ಬಳಿಕ ನಡೆದ ಮೂರು ಚುನಾವಣೆಗಳಲ್ಲಿಯೂ ಅವರು ಜಯಗಳಿಸಿದ್ದಾರೆ.

ಲೋಕಸಭೆ ಚುನಾವಣೆ 2019 : ಕರ್ನಾಟಕ ಬಿಜೆಪಿ ಅಭ್ಯರ್ಥಿಗಳ ಪಟ್ಟಿಲೋಕಸಭೆ ಚುನಾವಣೆ 2019 : ಕರ್ನಾಟಕ ಬಿಜೆಪಿ ಅಭ್ಯರ್ಥಿಗಳ ಪಟ್ಟಿ

ಈಗ ಅವರು ಸಂಸತ್ ಚುನಾವಣೆಗೆ ಸ್ಪರ್ಧಿಸಲು ಬಯಸಿದ್ದಾರೆ. ಬೆಳಗಾವಿ ಅಥವ ಚಿಕ್ಕೋಡಿ ಕ್ಷೇತ್ರದಿಂದ ಅವರು 2019ರ ಚುನಾವಣೆಗೆ ಸ್ಪರ್ಧೆ ಮಾಡಲಿದ್ದಾರೆ. ಈ ಕುರಿತು ಸಚಿವ ರಮೇಶ್ ಜಾರಕಿಹೊಳಿ ಅವರು ಹೇಳಿಕೆ ನೀಡಿದ್ದಾರೆ....

ಲೋಕಸಭೆ ಚುನಾವಣೆ ಗೆಲ್ಲಲು ಬಿಜೆಪಿ ತಂತ್ರ ಬಳಸುತ್ತಿರುವ ಕಾಂಗ್ರೆಸ್‌!ಲೋಕಸಭೆ ಚುನಾವಣೆ ಗೆಲ್ಲಲು ಬಿಜೆಪಿ ತಂತ್ರ ಬಳಸುತ್ತಿರುವ ಕಾಂಗ್ರೆಸ್‌!

ರಮೇಶ್ ಜಾರಕಿಹೊಳಿ ಹೇಳಿದ್ದೇನು?

ರಮೇಶ್ ಜಾರಕಿಹೊಳಿ ಹೇಳಿದ್ದೇನು?

'ಸಹೋದರ ಸತೀಶ್ ಜಾರಕಿಹೊಳಿ ಸಂಸತ್ ಚುನಾವಣೆಗೆ ಸ್ಪರ್ಧೆ ಮಾಡುವುದು ಖಚಿತವಾಗಿದೆ. ಬೆಳಗಾವಿ ಅಥವ ಚಿಕ್ಕೋಡಿ ಕ್ಷೇತ್ರಗಳ ಪೈಕಿ ಒಂದರಲ್ಲಿ ಸ್ಪರ್ಧಿಸಲಿದ್ದಾರೆ. ಕ್ಷೇತ್ರ ಇನ್ನೂ ಅಂತಿಮಗೊಂಡಿಲ್ಲ' ಎಂದು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ, ಸತೀಶ್ ಜಾರಕಿಹೊಳಿ ಸಹೋದರ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

ಪ್ರಕಾಶ್ ಹುಕ್ಕೇರಿ ಸ್ಪರ್ಧೆ

ಪ್ರಕಾಶ್ ಹುಕ್ಕೇರಿ ಸ್ಪರ್ಧೆ

'ಸತೀಶ್ ಜಾರಕಿಹೊಳಿ ಅವರು ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕುರಿತು ಪಕ್ಷದ ನಾಯಕರ ಜೊತೆ ಒಂದು ಸುತ್ತಿನ ಮಾತುಕತೆ ಮುಕ್ತಾಯಗೊಂಡಿದೆ. ಬೆಳಗಾವಿಯಿಂದ ಸ್ಪರ್ಧೆ ಮಾಡಲು ಯಾವುದೇ ತೊಂದರೆ ಇಲ್ಲ. ಚಿಕ್ಕೋಡಿ ಕ್ಷೇತ್ರದಿಂದ ಅವರು ಕಣಕ್ಕಿಳಿದರೆ, ಸಂಸದ ಪ್ರಕಾಶ್ ಹುಕ್ಕೇರಿ ಅವರು ಬೆಳಗಾವಿಯಿಂದ ಕಣಕ್ಕಿಳಿಯಲಿದ್ದಾರೆ' ಎಂದು ರಮೇಶ್ ಜಾರಕಿಹೊಳಿ ಹೇಳಿದರು.

ಪ್ರಭಾಕರ ಕೋರೆ ಸ್ಪರ್ಧೆ

ಪ್ರಭಾಕರ ಕೋರೆ ಸ್ಪರ್ಧೆ

2019ರ ಚುನಾವಣೆಯಲ್ಲಿ ಚಿಕ್ಕೋಡಿ ಕ್ಷೇತ್ರದಿಂದ ಬಿಜೆಪಿ ಹಿರಿಯ ನಾಯಕ, ರಾಜ್ಯಸಭಾ ಸದಸ್ಯ ಪ್ರಭಾಕರ ಕೋರೆ ಅವರು ಕಣಕ್ಕಿಳಿಯಲಯ ಬಯಸಿದ್ದಾರೆ. ಅಚ್ಚರಿಯ ವಿಷಯ ಎಂದರೆ ಪ್ರಭಾಕರ ಕೋರೆ ಮತ್ತು ಅವರ ಪುತ್ರ ಅಮಿತ್ ಇಬ್ಬರೂ ಚಿಕ್ಕೋಡಿ ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳು. ಪಕ್ಷ ಯಾರಿಗೆ ಬೇಕಾದದರೂ ಟಿಕೆಟ್ ನೀಡಲಿ ಎಂದು ಕೆಲವು ದಿನಗಳ ಹಿಂದೆ ಪ್ರಭಾಕರೆ ಕೋರೆ ಹೇಳಿದ್ದಾರೆ.

ಪ್ರಕಾಶ್ ಹುಕ್ಕೇರಿ ಸಂಸದರು

ಪ್ರಕಾಶ್ ಹುಕ್ಕೇರಿ ಸಂಸದರು

ಚಿಕ್ಕೋಡಿ ಕ್ಷೇತ್ರ ಸದಸ್ಯ ಕಾಂಗ್ರೆಸ್ ವಶದಲ್ಲಿದೆ. ಮಾಜಿ ಸಚಿವ ಪ್ರಕಾಶ್ ಹುಕ್ಕೇರಿ ಅವರು 2014ರ ಚುನಾವಣೆಯಲ್ಲಿ 474373 ಮತಗಳನ್ನು ಪಡೆದು ಜಯಗಳಿಸಿದ್ದಾರೆ. 2013ರ ವಿಧಾನಸಭೆ ಚುನಾವಣೆಯಲ್ಲಿ ಅವರು ಗೆದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದಲ್ಲಿ ಸಚಿವರಾಗಿದ್ದರು. ಆದರೆ, ಅವರ ಕೈಯಲ್ಲಿ ರಾಜೀನಾಮೆ ಕೊಡಿಸಿ ಲೋಕಸಭೆ ಚುನಾವಣೆಗೆ ಅಭ್ಯರ್ಥಿಯಾಗಿ ಕಣಕ್ಕಿಳಿಸಲಾಗಿತ್ತು.

ಬೆಳಗಾವಿ ಬಿಜೆಪಿ ವಶದಲ್ಲಿ

ಬೆಳಗಾವಿ ಬಿಜೆಪಿ ವಶದಲ್ಲಿ

ಬೆಳಗಾವಿ ಕ್ಷೇತ್ರ ಬಿಜೆಪಿಯ ವಶದಲ್ಲಿದೆ. ಬಿಜೆಪಿಯ ಸುರೇಶ್ ಅಂಗಡಿ ಅವರು ಸಂಸದರು. 2014ರ ಚುನಾವಣೆಯಲ್ಲಿ 554417 ಮತಗಳನ್ನು ಪಡೆದು ಅವರು ಜಯಗಳಿಸಿದ್ದಾರೆ. ಕಳೆದ ಚುನಾವಣೆಯಲ್ಲಿ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪರ್ಧೆ ಮಾಡಿದ್ದರು. 475557 ಮತಗಳನ್ನು ಪಡೆದಿದ್ದರು.

English summary
Former minister and Yamakanamaradi Congress MLA Satish Jarkiholi will contest for Lok Sabha Elections 2019. Minister Ramesh Jarkiholi said that Satish Jarkiholi will contest from Belagavi or Chikodi constituency.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X